ಭಾರತೀಯರನ್ನು ಮದುವೆಯಾದ ಪಾಕಿಸ್ತಾನ ಪ್ರಜೆಗಳಿಗೆ ದೇಶದಲ್ಲಿ ವಾಸಿಸುವ ಹಕ್ಕಿಲ್ಲ: ಜಮ್ಮು ಕಾಶ್ಮೀರ ಬಿಜೆಪಿ

Date:

Advertisements

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನಿ ಪ್ರಜೆಗಳನ್ನು ಗಡಿಪಾರು ಮಾಡುವ ಕೇಂದ್ರದ ನಿರ್ಧಾರವನ್ನು ಬಿಜೆಪಿಯ ಜಮ್ಮು ಮತ್ತು ಕಾಶ್ಮೀರ ಘಟಕವು ಸ್ವಾಗತಿಸಿದೆ. “ಅವರು ಭಾರತೀಯ ನಾಗರಿಕರನ್ನು ಮದುವೆಯಾಗಿದ್ದರೂ ಸಹ ಅವರಿಗೆ ದೇಶದಲ್ಲಿ ಉಳಿಯಲು ಯಾವುದೇ ಹಕ್ಕಿಲ್ಲ” ಎಂದು ಹೇಳಿದೆ.

ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. ಇದರಲ್ಲಿ ಕರ್ನಾಟಕದವರೂ ಸೇರಿ ಬಹುತೇಕರು ಪ್ರವಾಸಿಗರು. ಈ ದಾಳಿ ಹೊಣೆಯನ್ನು ಲಷ್ಕರ್-ಎ-ತೊಯ್ಬಾದ ಪ್ರಾಕ್ಸಿ ಸಂಘಟನೆಯಾದ ರೆಸಿಸ್ಟೆನ್ಸ್ ಫ್ರಂಟ್ ಹೊಣೆ ಹೊತ್ತಿಕೊಳ್ಳುತ್ತಿದ್ದಂತೆ ಭಾರತ-ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಇನ್ನಷ್ಟು ಹೆಚ್ಚಾಗಿದೆ.

ಇದನ್ನು ಓದಿದ್ದೀರಾ? ಪಹಲ್ಗಾಮ್ ದಾಳಿ | ಭಾರತದಿಂದ ಪಾಕಿಸ್ತಾನಕ್ಕೆ ತೆರಳುತ್ತಿರುವ ಸಾಮಾನ್ಯರು, ಸಂಕಟದ ಕತೆಗಳು

Advertisements

ಇವೆಲ್ಲವುದರ ನಡುವೆ ಬಿಜೆಪಿ ಹಿಂದೂ ಮತ್ತು ಮುಸ್ಲಿಮರ ನಡುವೆ ದ್ವೇಷವನ್ನು ಇನ್ನಷ್ಟು ಹೆಚ್ಚಿಸುವ ಯತ್ನವನ್ನು ಮಾಡುತ್ತಿದೆ. ತನ್ನ ಕೋಮುವಾದದ ರಾಜಕೀಯವನ್ನು ಮುಂದುವರೆಸಿದೆ. ಭಾರತದಲ್ಲಿರುವ ಮುಸ್ಲಿಮರ ವಿರುದ್ಧ ಉತ್ತೇಜನಕಾರಿ ಹೇಳಿಕೆಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಬಿಜೆಪಿ, ಸಂಘಪರಿವಾರದ ನಾಯಕರು ಹರಿಬಿಡುತ್ತಿದ್ದಾರೆ.

“ಪಾಕಿಸ್ತಾನದಿಂದ ಇಲ್ಲಿಗೆ ಬಂದು ನೆಲೆಸಿರುವ ವ್ಯಕ್ತಿಗಳು ‘ಸ್ಲೀಪರ್ ಸೆಲ್‌ಗಳು’ ಇದ್ದಂತೆ. ಅವರಲ್ಲಿ ಕೆಲವರನ್ನು ಪಾಕಿಸ್ತಾನಿ ಗೂಢಚಾರ ಸಂಸ್ಥೆ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್‌ಐ) ದುಷ್ಟ ಯೋಜನೆಯ ಭಾಗವಾಗಿರುವ ಸಾಧ್ಯತೆಯಿದೆ” ಎಂದು ಜಮ್ಮು ಕಾಶ್ಮೀರದ ಬಿಜೆಪಿಯ ಮುಖ್ಯ ವಕ್ತಾರ ಸುನಿಲ್ ಸೇಥಿ ಹೇಳಿದರು.

ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌) ಶನಿವಾರ ಪಾಕಿಸ್ತಾನಿ ಮಹಿಳೆಯೊಂದಿಗಿನ ತನ್ನ ಮದುವೆಯನ್ನು ‘ಮರೆಮಾಚಿದ್ದಕ್ಕಾಗಿ’ ಮುನೀರ್ ಅಹ್ಮದ್ ಅವರನ್ನು ಸೇವೆಯಿಂದ ವಜಾಗೊಳಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಈ ಬಗ್ಗೆಯೂ ಬಿಜೆಪಿ ನಾಯಕ ಹೇಳಿಕೆಯನ್ನು ನೀಡಿದ್ದಾರೆ.

ಇದನ್ನು ಓದಿದ್ದೀರಾ? ಮೋದಿಯ ಬಿಜೆಪಿ, ಕೇಂದ್ರ ಸರ್ಕಾರದ ದಮನನೀತಿಗೆ ಉತ್ತರ ಕೊಟ್ಟ ಜಮ್ಮು-ಕಾಶ್ಮೀರ

“ಸಂದರ್ಭಗಳು ಅಥವಾ ಸಮರ್ಥನೆಗಳು ಏನೇ ಇರಲಿ, ಪಾಕಿಸ್ತಾನಿಗಳು ಭಾರತೀಯ ನಾಗರಿಕರೊಂದಿಗೆ ವೈವಾಹಿಕ ಸಂಬಂಧವನ್ನು ಹೊಂದಿದ್ದರೂ ಸಹ, ಭಾರತದಲ್ಲಿ ಉಳಿಯಲು ಯಾವುದೇ ಹಕ್ಕನ್ನು ಹೊಂದಿಲ್ಲ. ಈ ಭಾವನಾತ್ಮಕ ಆಧಾರದ ಮೇಲೆ ದೇಶದಲ್ಲಿ ಉಳಿಯುವ ಹಕ್ಕನ್ನು ಪಡೆಯಲು ಸಾಧ್ಯವಿಲ್ಲ” ಎಂದು ಸೇಥಿ ಹೇಳಿದ್ದಾರೆ.

ಅಮೃತಸರದ ಅಟ್ಟಾರಿ ಗಡಿಯ ಮೂಲಕ ಪಾಕಿಸ್ತಾನಕ್ಕೆ ಮರಳಲು ಹೊರಟಿದ್ದಾಗ ಹೈಕೋರ್ಟ್ ತನ್ನ ಗಡಿಪಾರು ತಡೆಯುವ ಮೂಲಕ ಮಧ್ಯಂತರ ಪರಿಹಾರವನ್ನು ನೀಡಿದೆ. ಇದಾದ ನಂತರ ಮಿನಾಲ್ ಜಮ್ಮುವಿಗೆ ಮರಳಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X