ಸುಮಾರು 36 ಸ್ಥಳಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ 300-400 ಟರ್ಕಿ ನಿರ್ಮಿತ ಡ್ರೋನ್‌ಗಳನ್ನು ಕಳುಹಿಸಿದೆ. ನಾವು ಬಹುತೇಕ ಡ್ರೋನ್‌ಗಳನ್ನು ಹೊಡೆದುರುಳಿಸಿದ್ದೇವೆ ಎಂದು ಕರ್ನಲ್ ಸೋಫಿಯಾ ಖುರೇಷಿ ಹೇಳಿದ್ದಾರೆ.
ಆಪರೇಷನ್ ಸಿಂಧೂರ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ ನಡೆಸಿದೆ. ಈ ವೇಳೆ ಭಾರತೀಯ ಸೇನೆಯ ಕರ್ನಲ್ ಸೋಫಿಯಾ ಖುರೇಷಿ ಆಪರೇಷನ್ ಸಿಂಧೂರದ ಬಗ್ಗೆ ಮಾಹಿತಿ ನೀಡಿದ್ದಾರೆ.
ಇದನ್ನು ಓದಿದ್ದೀರಾ? ಆಪರೇಷನ್ ಸಿಂಧೂರ | ಮಹಿಳಾ ಅಧಿಕಾರಿಗಳಾದ ಸೋಫಿಯಾ ಖುರೇಷಿ, ವ್ಯೋಮಿಕಾ ಸಿಂಗ್ ಯಾರು?
ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಗ್ಗೆ ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ರಿ, ಭಾರತೀಯ ಮಹಿಳಾ ಅಧಿಕಾರಿಗಳಾದ ಭಾರತೀಯ ಸೇನೆಯ ಕರ್ನಲ್ ಸೋಫಿಯಾ ಖುರೇಷಿ ಮತ್ತು ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಪತ್ರಿಕಾಗೋಷ್ಠಿ ನಡೆಸಿದ್ದಾರೆ.
ನಮ್ಮ ಮಿಲಿಟರಿ ನೆಲೆಗಳ ಮೇಲೆ ಗುರಿಯಾಗಿಸಿಕೊಂಡು ಪಾಕಿಸ್ತಾನ ನಿನ್ನೆ ರಾತ್ರಿ ಲೇಹ್‌ನಿಂದ ಸರ್ ಕ್ರೀಕ್‌ವರೆಗಿನ 36 ಸ್ಥಳಗಳಲ್ಲಿ 300-400 ಡ್ರೋನ್‌ಗಳನ್ನು ಕಳುಹಿಸಿದೆ. ಟರ್ಕಿ ನಿರ್ಮಿತ ಡ್ರೋನ್‌ಗಳು ಅದಾಗಿದೆ. ನಮ್ಮ ಸಶಸ್ತ್ರ ಪಡೆಗಳು ಅವುಗಳಲ್ಲಿ ಹಲವನ್ನು ಹೊಡೆದುರುಳಿಸಿವೆ ಎಂದು ಹೇಳಿದರು.
VIDEO | MEA (@MEAIndia) Press Briefing: Colonel Sofiya Qureshi says, "On the intervening night of May 8 and May 9, Pakistani army tried to attack military installations on the western borders. From Leh to Sir Creek, Pakistani army used drones for infiltration."#OperationSindoor… pic.twitter.com/NOm4xmAdWk
— Press Trust of India (@PTI_News) May 9, 2025
ಮೇ 8 ಮತ್ತು 9 ರ ಮಧ್ಯರಾತ್ರಿ ನಮ್ಮ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿಕೊಳ್ಳಲು ಪಾಕಿಸ್ತಾನವು ಭಾರತೀಯ ವಾಯುಪ್ರದೇಶವನ್ನು ಉಲ್ಲಂಘಿಸಿದೆ ಎಂದು ಕರ್ನಲ್ ಖುರೇಷಿ ತಿಳಿಸಿದರು.
ಭಾರತದ ಪ್ರತೀಕಾರದ ಗುಂಡಿನ ದಾಳಿಯಿಂದಾಗಿ ಪಾಕಿಸ್ತಾನ ಸೇನೆಗೂ ದೊಡ್ಡ ನಷ್ಟವಾಗಿದೆ ಎಂದು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ತಿಳಿಸಿದರು.
Anandkgg