ಭಾರತ ಮತ್ತು ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಕೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ ಹೇಳಿಕೆಯ ಬಳಿಕ ಭಾರತ ಹಾಗೂ ಪಾಕಿಸ್ತಾನ ಕೂಡ ದೃಢೀಕರಿಸಿತ್ತು. ಆದರೆ, ಕದನ ವಿರಾಮ ಘೋಷಿಸಿದ ಕೆಲವೇ ಗಂಟೆಗಳ ಬೆನ್ನಲ್ಲೇ, ಪಾಕಿಸ್ತಾನವು ಕಾಶ್ಮೀರದ ಹಲವು ಕಡೆಗಳಿಗೆ ಶೆಲ್ ದಾಳಿ ನಡೆಸುತ್ತಿರುವುದಾಗಿ ವರದಿಯಾಗಿದೆ.
ಈ ಬಗ್ಗೆ ಸ್ವತಃ ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಕೂಡ ಟ್ವೀಟ್ ಮಾಡಿ ದೃಢೀಕರಿಸಿದ್ದು, “ಶ್ರೀನಗರದಾದ್ಯಂತ ಸ್ಫೋಟಗಳ ಸದ್ದು ಕೇಳಿಬಂದಿದೆ. ಇದು ಕದನ ವಿರಾಮವಲ್ಲ” ಎಂದು ತಿಳಿಸಿದ್ದಾರೆ.
ಪಾಕಿಸ್ತಾನದಿಂದ ಮತ್ತೆ ಶೆಲ್ ದಾಳಿಯ ಹಿನ್ನೆಲೆಯಲ್ಲಿ ಗಡಿಭಾಗದ ರಾಜ್ಯಗಳಾದ ಜಮ್ಮು ಮತ್ತು ಕಾಶ್ಮೀರ, ಪಂಜಾಬ್, ರಾಜಸ್ಥಾನದಲ್ಲಿ ಬ್ಲ್ಯಾಕ್ ಔಟ್ ಘೋಷಣೆ ಮಾಡಲಾಗಿದೆ. ಮಾಡುತ್ತಿದೆ. ಶೆಲ್‌ಗಳನ್ನು ಭಾರತೀಯ ವಾಯುಸೇನೆ ಹೊಡೆದು ಹಾಕುತ್ತಿದೆ ಎಂದು ವರದಿ ತಿಳಿಸಿದೆ.
ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಪಹಲ್ಗಾಮ್ ನಲ್ಲಿ ದಾಳಿ ನಡೆಸಿ 26 ಭಾರತೀಯರನ್ನು ಕೊಂದಿದೆ. ಇದಾದ ಬಳಿಕ ಭಾರತ ಆಪರೇಶನ್ ಸಿಂಧೂರ ಹೆಸರಲ್ಲಿ ಪಾಕಿಸ್ತಾನದಲ್ಲಿರುವ ಒಂಬತ್ತು ಭಯೋತ್ಪಾದಕ ನೆಲೆಗಳ ಮೇಲೆ ದಾಳಿ ನಡೆಸಿದೆ. ಇದಾದ ಬಳಿಕ ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ.
ಇದನ್ನು ಓದಿದ್ದೀರಾ? 25 ವರ್ಷಗಳಲ್ಲಿ ದಕ್ಷಿಣ ಕನ್ನಡದಲ್ಲಿ ನಡೆದ ಕೋಮುದ್ವೇಷದ ಕೊಲೆಗಳೆಷ್ಟು ಗೊತ್ತೇ?
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಸ್ಥಿಕೆಯಲ್ಲಿ ಕದನ ವಿರಾಮಕ್ಕೆ ಭಾರತ ಮತ್ತು ಪಾಕಿಸ್ತಾನ ಒಪ್ಪಿಕೊಂಡಿದೆ. ಆದರೆ ಇದೀಗ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿದೆ ಎಂದು ವರದಿಯಾಗಿದೆ.