BREAKING NEWS | ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ: ಶ್ರೀನಗರದ ಮೇಲೆ ಶೆಲ್ ದಾಳಿ

Date:

ಭಾರತ ಮತ್ತು ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಕೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ ಹೇಳಿಕೆಯ ಬಳಿಕ ಭಾರತ ಹಾಗೂ ಪಾಕಿಸ್ತಾನ ಕೂಡ ದೃಢೀಕರಿಸಿತ್ತು. ಆದರೆ, ಕದನ ವಿರಾಮ ಘೋಷಿಸಿದ ಕೆಲವೇ ಗಂಟೆಗಳ ಬೆನ್ನಲ್ಲೇ, ಪಾಕಿಸ್ತಾನವು ಕಾಶ್ಮೀರದ ಹಲವು ಕಡೆಗಳಿಗೆ ಶೆಲ್ ದಾಳಿ ನಡೆಸುತ್ತಿರುವುದಾಗಿ ವರದಿಯಾಗಿದೆ.

- Advertisement -

ಈ ಬಗ್ಗೆ ಸ್ವತಃ ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಕೂಡ ಟ್ವೀಟ್ ಮಾಡಿ ದೃಢೀಕರಿಸಿದ್ದು, “ಶ್ರೀನಗರದಾದ್ಯಂತ ಸ್ಫೋಟಗಳ ಸದ್ದು ಕೇಳಿಬಂದಿದೆ. ಇದು ಕದನ ವಿರಾಮವಲ್ಲ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಪಾಕಿಸ್ತಾನದಿಂದ ಮತ್ತೆ ಶೆಲ್​ ದಾಳಿಯ ಹಿನ್ನೆಲೆಯಲ್ಲಿ ಗಡಿಭಾಗದ ರಾಜ್ಯಗಳಾದ ಜಮ್ಮು ಮತ್ತು ಕಾಶ್ಮೀರ, ಪಂಜಾಬ್​, ರಾಜಸ್ಥಾನದಲ್ಲಿ ಬ್ಲ್ಯಾಕ್ ಔಟ್‌ ಘೋಷಣೆ ಮಾಡಲಾಗಿದೆ. ಮಾಡುತ್ತಿದೆ. ಶೆಲ್‌ಗಳನ್ನು ಭಾರತೀಯ ವಾಯುಸೇನೆ ಹೊಡೆದು ಹಾಕುತ್ತಿದೆ ಎಂದು ವರದಿ ತಿಳಿಸಿದೆ.

ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಪಹಲ್ಗಾಮ್ ನಲ್ಲಿ ದಾಳಿ ನಡೆಸಿ 26 ಭಾರತೀಯರನ್ನು ಕೊಂದಿದೆ. ಇದಾದ ಬಳಿಕ ಭಾರತ ಆಪರೇಶನ್ ಸಿಂಧೂರ ಹೆಸರಲ್ಲಿ ಪಾಕಿಸ್ತಾನದಲ್ಲಿರುವ ಒಂಬತ್ತು ಭಯೋತ್ಪಾದಕ ನೆಲೆಗಳ ಮೇಲೆ ದಾಳಿ ನಡೆಸಿದೆ. ಇದಾದ ಬಳಿಕ ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ.

ಇದನ್ನು ಓದಿದ್ದೀರಾ? 25 ವರ್ಷಗಳಲ್ಲಿ ದಕ್ಷಿಣ ಕನ್ನಡದಲ್ಲಿ ನಡೆದ ಕೋಮುದ್ವೇಷದ ಕೊಲೆಗಳೆಷ್ಟು ಗೊತ್ತೇ?

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಸ್ಥಿಕೆಯಲ್ಲಿ ಕದನ ವಿರಾಮಕ್ಕೆ ಭಾರತ ಮತ್ತು ಪಾಕಿಸ್ತಾನ ಒಪ್ಪಿಕೊಂಡಿದೆ. ಆದರೆ ಇದೀಗ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿದೆ ಎಂದು ವರದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...