ಉತ್ತರ ಪ್ರದೇಶದಲ್ಲಿ ಪಾಕಿಸ್ತಾನಿ ಐಎಸ್ಐ ಏಜೆಂಟ್ ಬಂಧನ

Date:

Advertisements

ಉತ್ತರ ಪ್ರದೇಶದ ಮೀರತ್‌ನಲ್ಲಿ ಭಯೋತ್ಪಾದನಾ ವಿರೋಧಿ ಪಡೆ(ಎಟಿಎಸ್) ಪಾಕಿಸ್ತಾನದ ಐಎಸ್‌ಐ ಏಜೆಂಟ್‌ ಒಬ್ಬನನ್ನು ಬಂಧಿಸಿದೆ. ಬಂಧಿತ ಮಾಸ್ಕೋದಲ್ಲಿರುವ ರಾಯಭಾರಿ ಕಚೇರಿಯಲ್ಲಿ ಈ ಮೊದಲು ಗೂಢಾಚಾರಿ ಕೆಲಸ  ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಬಂಧಿತ ಸತ್ಯೇಂದ್ರ ಸಿವಾಲ್ 2021ರಿಂದ ಮಾಸ್ಕೋದ ರಾಯಭಾರ ಗೂಢಚಾರಿ ಕೆಲಸಕ್ಕೆ ನೇಮಕಗೊಂಡಿದ್ದ. ಈತ ಭಾರತೀಯ ಮೂಲದ ಕಚೇರಿಯಲ್ಲಿ ಭದ್ರತಾ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.

ಮೂಲಗಳ ಪ್ರಕಾರ ಭಯೋತ್ಪಾದನಾ ವಿರೋಧಿ ನಿಗ್ರಹ ಪಡೆ ಮಾಸ್ಕೋದಲ್ಲಿರುವ ರಾಯಭಾರಿ ಕಚೇರಿಯಿಂದ ಗೂಢಚಾರಿ ಕೆಲಸ ನಿರ್ವಹಿಸುತ್ತಿರುವುದ ಬಗ್ಗೆ ಸುಳಿವು ಪಡೆದು ಬಂಧಿಸಿದೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೇಂದ್ರದ ತಾರತಮ್ಯ ನೀತಿಯನ್ನು ಪ್ರಶ್ನಿಸುವುದು ತಪ್ಪೇ?

ಆರೋಪಿಯನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ಪಡೆ ವಿಚಾರಣೆಗೊಳಪಡಿಸಿದಾಗ ಆರಂಭದಲ್ಲಿ ಸರಿಯಾದ ಉತ್ತರ ನೀಡಲಿಲ್ಲ. ಆದಾಗ್ಯೂ, ನಂತರದಲ್ಲಿ ತಾನು ಗೂಢಾಚಾರಿಯಾಗಿ ಕಾರ್ಯನಿರ್ವಹಿಸುತ್ತಿರುವುದಾಗಿ ಒಪ್ಪಿಕೊಂಡ ಎಂದು ತಿಳಿದುಬಂದಿದೆ.

ಆರೋಪಿ ಸತ್ಯೇಂದ್ರ ಸಿವಾಲ್ ಭಾರತೀಯ ಅಧಿಕಾರಿಗಳಿಗೆ ಹಣ ನೀಡಿ ಭಾರತೀಯ ಸೇನೆ ಹಾಗೂ ಅಲ್ಲಿನ ದಿನ ನಿತ್ಯದ ಕಾರ್ಯಾಚರಣೆಯ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದ. ಅಲ್ಲದೆ ಭಾರತೀಯ ರಾಯಭಾರಿ, ವಿದೇಶಾಂಗ ಇಲಾಖೆಯ ಅತ್ಯಂತ ಮುಖ್ಯವಾದ ಹಾಗೂ ಗೌಪ್ಯ ಮಾಹಿತಿಗಳನ್ನು ಪಡೆದುಕೊಂಡು ಐಎಸ್‌ಐಗೆ ರವಾನಿಸುತ್ತಿದ್ದ ಎಂದು ಆರೋಪಿಸಲಾಗಿದೆ.

ಆರೋಪಿ ವಿರುದ್ಧ ಉತ್ತರ ಪ್ರದೇಶದ ಎಟಿಎಸ್ ಐಪಿಸಿ ಸೆಕ್ಷನ್ 121ಎ ಅಡಿಯಲ್ಲಿ ದೇಶ ವಿರೋಧಿ ಚಟುವಟಿಕೆ ಹಾಗೂ ದೇಶದ ರಹಸ್ಯಗಳನ್ನು ಸೋರಿಕೆ ಮಾಡಿರುವುದರ ಮೇಲೆ ಎಫ್ಐಆರ್ ದಾಖಲಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಸತ್ಯೇಂದ್ರ ಸಿವಾಲ ಅನ್ಯಕೋಮಿನ ಅಧಿಕಾರಿ ಅಲ್ಲ,,,ಮೇಲಾಗಿ ಈತ ಉತ್ತರ ಪ್ರದೇಶದವನು,,,ನಕಲಿ ರಾಷ್ಟ್ರವಾದಿಗಳು ಬಹುಶಃ ಇಂಥಾ ವಿಷಯದ ಬಗ್ಗೆ ತುಟಿ ಬಿಚ್ಚೋದಿಲ್ಲ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X