ಸೇವೆಗಳಿಗೆ ತಾರತಮ್ಯ ರಹಿತವಾಗಿ ಪಡೆಯುವಿಕೆ ಮತ್ತು ಹಿಂಸಾಚಾರದ ಬೆದರಿಕೆಗಳನ್ನು ಎದುರಿಸದಂತೆ ನೋಡಿಕೊಳ್ಳಲು ಅಗತ್ಯವಿರುವ ಕ್ರಮಗಳು ಸೇರಿದಂತೆ ಲಿಂಗತ್ವ ಅಲ್ಪಸಂಖ್ಯಾತರನ್ನು ಒಳಗೊಂಡ ಎಲ್ಜಿಬಿಟಿಕ್ಯೂ ಸಮುದಾಯದ ಸಮಸ್ಯೆ ಗಳನ್ನು ಪರಿಶೀಲಿಸಲು ಕೇಂದ್ರ ಸರ್ಕಾರವು ಸಂಪುಟ ಕಾರ್ಯದರ್ಶಿಯಡಿಯಲ್ಲಿ ಸಮಿತಿಯನ್ನು ರಚಿಸಿದೆ.
ಎಲ್ಜಿಬಿಟಿಕ್ಯೂ ಸಮಸ್ಯೆಗಳ ಪರಿಹಾರಕ್ಕೆ ಉನ್ನತ ಮಟ್ಟದ ಸಮಿತಿಯನ್ನು ರಚಿಸುವಂತೆ ಕಳೆದ ವರ್ಷದ ಅಕ್ಟೋಬರ್ನಲ್ಲಿ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದ ನಂತರ ಸಮಿತಿ ರಚಿಸಲಾಗಿದೆ.
ಮಂಗಳವಾರ ಹೊರಡಿಸಿದ ಅಧಿಸೂಚನೆಯ ಪ್ರಕಾರ, ಎಲ್ಬಿಟಿಕ್ಯೂಐ ಸಮುದಾಯಕ್ಕೆ ಸರಕು ಮತ್ತು ಸೇವೆಗಳನ್ನು ಅನುಕೂಲ ಪಡೆಯುವಲ್ಲಿ ಯಾವುದೇ ತಾರತಮ್ಯವಿಲ್ಲ ಎಂದು ಖಚಿತಪಡಿಸಿಕೊಳ್ಳಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತೆಗೆದುಕೊಳ್ಳಬೇಕಾದ ಕ್ರಮಗಳನ್ನು ಸಮಿತಿಯು ಪರಿಶೀಲಿಸುತ್ತದೆ ಮತ್ತು ಶಿಫಾರಸು ಮಾಡುತ್ತದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕುಮಾರಸ್ವಾಮಿಯವರನ್ನು ಸೋಲಿಸಲು ಬಿಜೆಪಿ ಸುಪಾರಿ ಕೊಟ್ಟಿದೆಯೇ, ಆತಂಕಕ್ಕೊಳಗಾಗಿದ್ದಾರೆಯೇ?
ಎಲ್ಜಿಬಿಟಿಕ್ಯೂ ಸಮುದಾಯವು ಯಾವುದೇ ಹಿಂಸೆ, ಕಿರುಕುಳ ಅಥವಾ ಬಲವಂತದ ಬೆದರಿಕೆಯನ್ನು ಎದುರಿಸದಂತೆ ತೆಗೆದುಕೊಳ್ಳಬೇಕಾದ ಕ್ರಮಗಳನ್ನು ಸಹ ಇದು ಪರಿಶೀಲಿಸುತ್ತದೆ.
ಸಮಿತಿಯು ಎಲ್ಜಿಬಿಟಿಕ್ಯೂ ಸಮುದಾಯಗಳಿಗೆ ಸಾಮಾಜಿಕ ಕಲ್ಯಾಣ ಅರ್ಹತೆ ಪಡೆಯಲು ತಾರತಮ್ಯ ರಹಿತ ಪ್ರವೇಶ ಪಡೆಯಲು ಸಮಿತಿ ರಚಿಸಲಾಗಿದೆ.
ಸಮಿತಿಯಲ್ಲಿ ಕೇಂದ್ರ ಗೃಹ ಕಾರ್ಯದರ್ಶಿ, ಶಾಸಕಾಂಗ ಕಾರ್ಯದರ್ಶಿ, ಆರೋಗ್ಯ ಕಾರ್ಯದರ್ಶಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಾರ್ಯದರ್ಶಿ ಮತ್ತು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಕಾರ್ಯದರ್ಶಿ ಸಮಿತಿಯ ಸದಸ್ಯರಾಗಿರುತ್ತಾರೆ.
ಸಮಿತಿಯು ಅಗತ್ಯವೆಂದು ಪರಿಗಣಿಸಿದರೆ ತಜ್ಞರು ಮತ್ತು ಇತರ ಅಧಿಕಾರಿಗಳನ್ನು ಸೇರಿಸಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
2023ರ ಅಕ್ಟೋಬರ್ 17 ರಂದು, ಎಲ್ಜಿಬಿಟಿಕ್ಯೂಐ ಸಮುದಾಯದವರಿಗೆ ಅನುಕೂಲಗಳನ್ನು ಪರಿಗಣಿಸಲು ಕೇಂದ್ರ ಸಂಪುಟಸಭೆ ಕಾರ್ಯದರ್ಶಿ ಅಡಿಯಲ್ಲಿ ಸಮಿತಿಯನ್ನು ಸ್ಥಾಪಿಸಲು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.
