ಉತ್ತರಾಖಂಡದಲ್ಲಿ ಮತ್ತೆ ಪೇಪರ್‌ ಲೀಕ್‌; 2 ಪರೀಕ್ಷೆ ರದ್ದು, ಪ್ರಾಧ್ಯಾಪಕ ಬಂಧನ

Date:

ಉತ್ತರಾಖಂಡದಲ್ಲಿ ಮತ್ತೊಂದು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಬೆಳಕಿಗೆ ಬಂದಿದ್ದು, ಉತ್ತರಾಖಂಡ ತಾಂತ್ರಿಕ ವಿಶ್ವವಿದ್ಯಾಲಯ (Uttarakhand Technical University) ಪ್ರಸಕ್ತ ಸೆಮಿಸ್ಟರ್‌ನ ಎರಡು ಪರೀಕ್ಷೆಗಳನ್ನು ರದ್ದುಪಡಿಸಿದೆ. ಪ್ರಶ್ನೆಪತ್ರಿಕೆ ಸಿದ್ಧಪಡಿಸಿದ್ದ ಹೊರಗಿನ (External) ಪ್ರಾಧ್ಯಾಪಕರೇ ಪರೀಕ್ಷೆಗೆ ಮುನ್ನ ಪ್ರಶ್ನೆಗಳನ್ನು ಸೋರಿಕೆ ಮಾಡಿದ ಆರೋಪದಡಿ ಬಂಧಿತರಾಗಿದ್ದಾರೆ.

- Advertisement -

ಈ ನಿರ್ಧಾರದಿಂದ ವೀರ್ ಮಧೋ ಸಿಂಗ್ ಭಂಡಾರಿ ಉತ್ತರಾಖಂಡ ತಾಂತ್ರಿಕ ವಿಶ್ವವಿದ್ಯಾಲಯದ ಅಂಗಸಂಸ್ಥೆಗಳಾಗಿರುವ 12 ಕಾಲೇಜುಗಳ ವಿದ್ಯಾರ್ಥಿಗಳು ಪೇಪರ್‌ ಲೀಕ್‌ ಪರಿಣಾಮ ಎದುರಿಸುವಂತಾಗಿದೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ವಿಶ್ವವಿದ್ಯಾಲಯದ ಪರೀಕ್ಷಾ ನಿಯಂತ್ರಕ ಡಾ. ವಿ.ಕೆ. ಪಟೇಲ್ ಅವರ ಪ್ರಕಾರ, ‘ಮಷಿನ್ ಲರ್ನಿಂಗ್ ಫಾರ್ ಇಂಟರ್ನೆಟ್ ಆಫ್ ಥಿಂಗ್ಸ್’ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬ ದೂರು ಬಂದಿತ್ತು. ವಿಶ್ವವಿದ್ಯಾಲಯ ಹಾಗೂ ಸಂಬಂಧಿತ ಕಾಲೇಜು ನಡೆಸಿದ ತನಿಖೆಯಲ್ಲಿ, ಪ್ರಶ್ನೆಪತ್ರಿಕೆ ಸಿದ್ಧಪಡಿಸಿದ್ದ ಪ್ರಾಧ್ಯಾಪಕರು ಪರೀಕ್ಷೆಗೆ ಮುನ್ನ ಕಾಲೇಜಿನ ಆಂತರಿಕ ಪೋರ್ಟಲ್ ಹಾಗೂ ವಾಟ್ಸ್‌ಆ್ಯಪ್ ಮೂಲಕ ಪರೀಕ್ಷೆಯಲ್ಲಿದ್ದ ಪ್ರಶ್ನೆಗಳನ್ನೇ ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡಿರುವುದು ಬೆಳಕಿಗೆ ಬಂದಿದೆ. ತನಿಖೆ ವೇಳೆ ಇದೇ ಪ್ರಾಧ್ಯಾಪಕರು ಸಿದ್ಧಪಡಿಸಿದ್ದ ‘ಎಲೆಕ್ಟ್ರೋಮ್ಯಾಗ್ನೆಟಿಕ್ ಫೀಲ್ಡ್ ಥಿಯರಿ’ ಪ್ರಶ್ನೆಪತ್ರಿಕೆಯೂ ಸೋರಿಕೆಯಾಗಿರುವ ಶಂಕೆ ವ್ಯಕ್ತವಾಗಿದೆ.

ಈ ಹಿನ್ನೆಲೆಯಲ್ಲಿ ಎರಡೂ ವಿಷಯಗಳ ಪರೀಕ್ಷೆಗಳನ್ನು ರದ್ದುಪಡಿಸಿರುವ ವಿಶ್ವವಿದ್ಯಾಲಯ, 2026ರ ಆಗಸ್ಟ್ 3ನೇ ವಾರದಲ್ಲಿ ಮರು ಪರೀಕ್ಷೆ ನಡೆಸುವುದಾಗಿ ಘೋಷಿಸಿದೆ. ವಿದ್ಯಾರ್ಥಿಗಳಿಗೆ ಈ ಕುರಿತು ತಕ್ಷಣ ಮಾಹಿತಿ ನೀಡುವಂತೆ ಎಲ್ಲ ಕಾಲೇಜುಗಳಿಗೆ ಸೂಚಿಸಲಾಗಿದೆ.

ಉತ್ತರಾಖಂಡದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ಹೊಸದಲ್ಲ. ಕಳೆದ ವರ್ಷ ಉತ್ತರಾಖಂಡ ಅಧೀನ ಸೇವೆಗಳ ಆಯ್ಕೆ ಆಯೋಗ (UKSSSC) ನಡೆಸಿದ್ದ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆದಿದ್ದವು.

ಇನ್ನು 2023ರಲ್ಲಿ ಯುಕೆಪಿಎಸ್‌ಸಿ (UKPSC) ಪಟ್ವಾರಿ ಮತ್ತು ಅಕೌಂಟೆಂಟ್ ನೇಮಕಾತಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಮಾರಾಟವಾಗಿತ್ತು ಎಂಬ ಆರೋಪ ಕೇಳಿಬಂದಿತ್ತು. ಬಳಿಕ ಆ ಪರೀಕ್ಷೆಯನ್ನೂ ರದ್ದುಪಡಿಸಲಾಗಿತ್ತು. ಈ ಬೆಳವಣಿಗೆಗಳ ಬಳಿಕ ನಕಲು ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ತಡೆಯಲು ಬಿಜೆಪಿ ಸರ್ಕಾರ ಕಠಿಣ ಕಾನೂನು ಜಾರಿಗೆ ತಂದಿತ್ತು.

ಆರೋಪಿ ಪ್ರಾಧ್ಯಾಪಕರನ್ನು ವಿಶ್ವವಿದ್ಯಾಲಯದ ಎಲ್ಲಾ ಪರೀಕ್ಷಾ ಸಂಬಂಧಿತ ಕಾರ್ಯಗಳಿಂದ ಮುಂದಿನ 7 ವರ್ಷಗಳ ಕಾಲ ನಿಷೇಧಿಸಲಾಗಿದೆ. ಅಲ್ಲದೆ, ಸಮರ್ಪಕ ಮೇಲ್ವಿಚಾರಣೆ ಹಾಗೂ ಆಡಳಿತಾತ್ಮಕ ನಿಯಂತ್ರಣ ಕಾಯ್ದುಕೊಳ್ಳದ ಹಿನ್ನೆಲೆಯಲ್ಲಿ ಸಂಬಂಧಿತ ಕಾಲೇಜಿಗೂ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ: ಕಾಪಿರೈಟ್‌ ಕೃತಿಗಳಿಂದ AI ತರಬೇತಿ ಕಾನೂನು ಬಾಹಿರವಲ್ಲ: ದೆಹಲಿ ಹೈಕೋರ್ಟ್‌

ಶಿವಾಲಿಕ್ ಕಾಲೇಜ್ ಆಫ್ ಎಂಜಿನಿಯರಿಂಗ್ ನಿರ್ದೇಶಕ ಡಾ. ಟಿ.ಎಸ್. ಸಿಧು ಅವರ ಪ್ರಕಾರ, ಆರೋಪಿತ ಪ್ರಾಧ್ಯಾಪಕರು ಸುಮಾರು 50 ಪ್ರಶ್ನೆಗಳನ್ನು ವಾಟ್ಸ್‌ಆ್ಯಪ್ ಗುಂಪಿನಲ್ಲಿ ಹಂಚಿಕೊಂಡಿದ್ದರು. ಬಳಿಕ ಅದೇ ಪ್ರಶ್ನೆಗಳು ಪರೀಕ್ಷೆಯಲ್ಲಿ ಬಂದಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಸೇವೆಯಿಂದಲೂ ವಜಾಗೊಳಿಸಲಾಗಿದೆ. ಪ್ರಕರಣ ಸಂಬಂಧ ಗುರುವಾರ ಸಂಜೆ ಪ್ರಶ್ನೆಪತ್ರಿಕೆ ಸಿದ್ಧಪಡಿಸಿದ್ದ ಪ್ರಾಧ್ಯಾಪಕರನ್ನು ಪೊಲೀಸರು ಬಂಧಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಹಲ್ಲೆಗೊಳಗಾಗಿ ರೈಲ್ವೆ ಹಳಿ ಮೇಲೆ ಬಿದ್ದಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಶಿವಮೊಗ್ಗ ರೈಲ್ವೆ ಹಳಿ ಬಳಿ ಗಂಭೀರ ಗಾಯಗಳೊಂದಿಗೆ ಪತ್ತೆಯಾಗಿದ್ದ 26 ವರ್ಷದ...

ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ; ತರಾತುರಿಯಲ್ಲಿ ಅಂತ್ಯಕ್ರಿಯೆ, ಕಾರಣ ನಿಗೂಢ!

ಸೊರಬ ತಾಲೂಕಿನ ಮುಟಗುಪ್ಪೆ ಗ್ರಾಮದಲ್ಲಿ 22 ವರ್ಷದ ಯುವತಿಯೊಬ್ಬರು ಮನೆಯಲ್ಲಿ ನೇಣು...

ಶಿವಮೊಗ್ಗ | ಗಾಂಜಾ ಮಾರಾಟ ಆರೋಪ: ಐವರು ಅರೆಸ್ಟ್‌, 1.23 ಕೆಜಿ ಮಾದಕ ವಸ್ತು ಜಪ್ತಿ

ಶಿವಮೊಗ್ಗ ನಗರದ ಅನುಪಿನಕಟ್ಟೆ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ತುಂಗಾನಗರ...