ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ ಎಂದು ಸಿಜೆಪಿ ವಕ್ತಾರ ಸೌರವ್ ದಾಸ್ ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಸೌರವ್, “ದೀಪ್ಕೆ ಅವರನ್ನು ಪೊಲೀಸರು ಕರೆದುಕೊಂಡು ಹೋಗಿದ್ದಾರೆ. ಬೀದಿಗಿಳಿದಿರುವ ವಿದ್ಯಾರ್ಥಿಗಳ ಬೆಂಬಲಕ್ಕೆ ಎಲ್ಲ ಸಂಸದರು ತಕ್ಷಣ ನಿಲ್ಲಬೇಕು” ಎಂದು ಆಗ್ರಹಿಸಿದ್ದಾರೆ.
“ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಬಲಪ್ರಯೋಗ ಮಾಡುತ್ತಿದ್ದು, ಹಲ್ಲೆ ನಡೆಸುತ್ತಿದ್ದಾರೆ” ಎಂದು ಸೌರವ್ ದಾಸ್ ಆರೋಪಿಸಿದ್ದಾರೆ.
ಪರೀಕ್ಷಾ ಅಕ್ರಮಗಳ ವಿರುದ್ಧ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಕಳೆದ ಒಂದು ತಿಂಗಳಿನಿಂದ ದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಇಂದು, ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಿದ್ದು, ತಮ್ಮ ಹೋರಾಟವನ್ನು ತೀವ್ರಗೊಳಿಸಲು ಸಿಜೆಪಿ ‘ದೆಹಲಿ ಚಲೋ’ ಮೆರವಣಿಗೆ ನಡೆಸುತ್ತಿದೆ. ವಿದ್ಯಾರ್ಥಿಗಳನ್ನು ತಡೆಯಲು ಪೊಲೀಸರು ಲಾಠಿಚಾರ್ಜ್, ಆಶ್ರುವಾಯು ದಾಳಿಗಳನ್ನು ನಡೆಸಿದ್ದಾರೆ.




