ಭಾರತದಲ್ಲಿ ಸಂವಿಧಾನವೇ ಸರ್ವೋಚ್ಚ. ಸಂಸತ್ತು ಸೇರಿದಂತೆ ಪ್ರಜಾಪ್ರಭುತ್ವದ ಮೂರು ಅಂಗಗಳು ಸಂವಿಧಾನದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತವೆ. ಇದನ್ನು ಬದಲಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಪುನರುಚ್ಛರಿಸಿದ್ದಾರೆ.
ಮಹಾರಾಷ್ಟ್ರದ ಅಮರಾವತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. “ಸಂಸತ್ತಿಗೆ ತಿದ್ದುಪಡಿ ಮಾಡುವ ಅಧಿಕಾರವಿದೆ. ಆದರೆ, ಸಂವಿಧಾನದ ಮೂಲ ರಚನೆಯನ್ನೇ ಬದಲಿಸುವ ಅಧಿಕಾರವಿಲ್ಲ. ಬದಲಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.
“ಪ್ರಜಾಪ್ರಭುತ್ವದಲ್ಲಿ ಯಾವ ಅಂಗ – ಕಾರ್ಯಾಂಗ, ಶಾಸಕಾಂಗ ಹಾಗೂ ನ್ಯಾಯಾಂಗ – ಸರ್ವೋಚ್ಚ ಎಂಬ ಚರ್ಚೆ ನಡೆಯುತ್ತಲೇ ಇರುತ್ತದೆ. ಕೆಲವರು ಸಂಸತ್ತು ಸರ್ವೋಚ್ಚ ಎಂದು ವಾದಿಸುತ್ತಾರೆ. ನನ್ನ ಅಭಿಪ್ರಾಯದಲ್ಲಿ ಸಂವಿಧಾನವೇ ಸರ್ವೋಚ್ಚ. ಪ್ರಜಾಪ್ರಭುತ್ವದ ಮೂರು ಅಂಗಗಳು ಸಂವಿಧಾನದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತವೆ” ಎಂದು ಹೇಳಿದ್ದಾರೆ.
ಈ ಲೇಖನ ಓದಿದ್ದೀರಾ?: ‘ಸಂಸತ್ತು ಸರ್ವೋಚ್ಚ’ ಎಂದಿದ್ದಾರೆ ಧನಕರ್; ನಿಜಕ್ಕೂ ಯಾವುದು ಶ್ರೇಷ್ಠ ಮತ್ತು ಸರ್ವೋಚ್ಚ?
“ನ್ಯಾಯಾಧೀಶರಿಗೆ ಒಂದು ಕರ್ತವ್ಯವಿದೆ. ಅದು ನಾಗರಿಕರ ಹಕ್ಕುಗಳು ಮತ್ತು ಸಾಂವಿಧಾನಿಕ ಮೌಲ್ಯಗಳನ್ನು ರಕ್ಷಿಸುವುದು. ನಾವು ಸಾಂವಿಧಾನಿಕ ತತ್ವಗಳ ಪಾಲಕರು ಎಂಬುದನ್ನು ಯಾವಾಗಲೂ ನೆನಪಿನಲ್ಲಿ ಇಟ್ಟುಕೊಳ್ಳಬೇಕು. ನಮ್ಮ ತೀರ್ಪಿನ ಬಗ್ಗೆ ನರು ಏನು ಹೇಳುತ್ತಾರೆ ಎಂಬುದರ ಮೇಲೆ ನ್ಯಾಯಾಧೀಶರು ಅವಲಂಬಿತರಾಗಬಾರದು. ಸರ್ಕಾರದ ವಿರುದ್ಧ ಆದೇಶಗಳನ್ನು ಹೊರಸಿದರೆ ನ್ಯಾಯಾಧೀಶರು ಸ್ವತಂತ್ರರಾಗುವುದಿಲ್ಲ” ಎಂದು ಪ್ರತಿಪಾದಿಸಿದ್ದಾರೆ.