ಸಂಸತ್ತೇ ಸರ್ವೋಚ್ಚ: ನ್ಯಾಯಾಂಗದ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ ಜಗದೀಪ್ ಧನಕರ್

Date:

ಸುಪ್ರೀಂ ಕೋರ್ಟ್ ತೀರ್ಪಿನ ಕುರಿತು ಇತ್ತೀಚಿನ ತಮ್ಮ ಹೇಳಿಕೆಗಳ ವಿವಾದದ ನಡುವೆಯೇ ಉಪರಾಷ್ಟ್ರಪತಿ ಜಗದೀಪ್ ಧನಕರ್ ಇಂದು ನ್ಯಾಯಾಂಗದ ವಿರುದ್ಧ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ.

- Advertisement -

ಸಂವಿಧಾನವು ಜನರಿಗಾಗಿದೆ ಮತ್ತು ಚುನಾಯಿತ ಪ್ರತಿನಿಧಿಗಳು ಸಂವಿಧಾನ ಹೇಗಿರುತ್ತದೆ ಎಂಬುದರ ಅಂತಿಮ ನಿರ್ಧಾರ ತೆಗೆದುಕೊಳ್ಳುವವರಾಗಿರುತ್ತಾರೆ. ಸಂಸತ್ತನ್ನು ಮೀರಿದ ಅಧಿಕಾರದ ಬಗ್ಗೆ ಸಂವಿಧಾನದಲ್ಲಿ ಯಾವುದೇ ಉಲ್ಲೇಖವಿಲ್ಲ. ಸಂಸತ್ತು ಸರ್ವೋಚ್ಚ. ಅದು ದೇಶದ ಪ್ರತಿಯೊಬ್ಬ ವ್ಯಕ್ತಿಯಂತೆ ಸರ್ವೋಚ್ಚವಾಗಿದೆ ಎಂದು ಪ್ರತಿಪಾದಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳೊಂದಿಗೆ ಮಾತನಾಡುವಾಗ ಉಪರಾಷ್ಟ್ರಪತಿ ಜಗದೀಪ್ ಧನಕರ್ ಸಾಂವಿಧಾನಿಕ ಕಾರ್ಯಕಾರಿಣಿ ಉಚ್ಚರಿಸುವ ಪ್ರತಿಯೊಂದು ಪದವೂ ರಾಷ್ಟ್ರದ ಅತ್ಯುನ್ನತ ಹಿತಾಸಕ್ತಿಯಿಂದ ಪ್ರೇರಿತವಾಗಿದೆ ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜಾತಿ-ಜನಿವಾರಕ್ಕೆ ಜೋತುಬಿದ್ದ ‘ಜಾತ್ಯತೀತ’ ಸರ್ಕಾರ

“ಸಂವಿಧಾನವು ಅದರ ಸಾರ, ಅದರ ಮೌಲ್ಯ, ಅದರ ಅಮೃತವನ್ನು ಸಂವಿಧಾನದ ಪೀಠಿಕೆಯಲ್ಲಿ ಒಳಗೊಂಡಿದೆ. ಭಾರತದ ಜನರಲ್ಲೇ ಸರ್ವೋಚ್ಚ ಶಕ್ತಿಯಿದೆ. ಯಾರೂ ಭಾರತದ ಜನರಿಗಿಂತ ಮೇಲಲ್ಲ. ಭಾರತದ ಜನರು ಸಂವಿಧಾನದ ಅಡಿಯಲ್ಲಿ ತಮ್ಮ ಅಭಿವ್ಯಕ್ತಿಗಳು, ಅವರ ಆಸೆ, ಅವರ ಇಚ್ಛೆಯನ್ನು ತಮ್ಮ ಸಾರ್ವಜನಿಕ ಪ್ರತಿನಿಧಿಗಳ ಮೂಲಕ ಪ್ರತಿಬಿಂಬಿಸಲು ಆಯ್ಕೆ ಮಾಡಿಕೊಂಡಿರುತ್ತಾರೆ. ಅವರು ಚುನಾವಣೆಯ ಸಮಯದಲ್ಲಿ ಈ ಪ್ರತಿನಿಧಿಗಳನ್ನು ಹೊಣೆಗಾರರನ್ನಾಗಿ ಮಾಡುತ್ತಾರೆ. ಸಂಸತ್ತೇ ನಮ್ಮ ದೇಶದಲ್ಲಿ ಸುಪ್ರೀಂ” ಎಂದು ಅವರು ಹೇಳಿದ್ದಾರೆ.

ಸುಪ್ರೀಂ ಕೋರ್ಟ್ ತೀರ್ಪಿನ ಕುರಿತು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಇತ್ತೀಚೆಗೆ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದರು. ರಾಷ್ಟ್ರಪತಿಗಳು, ರಾಜ್ಯಪಾಲರಿಗೆ ಸರ್ಕಾರ ನೀಡುವ ಮಸೂದೆಗಳ ಅನುಮೋದನೆಗೆ ಅಥವಾ ಆ ಬಗ್ಗೆ ನಿರ್ಧರಿಸಲು ಸುಪ್ರೀಂ ಕೋರ್ಟ್ ಗಡುವು ನೀಡಿತ್ತು. ರಾಷ್ಟ್ರಪತಿಗಳು ತಮ್ಮ ಅನುಮೋದನೆಗಾಗಿ ರಾಜ್ಯಪಾಲರು ಕಾಯ್ದಿರಿಸಿದ ಮಸೂದೆಗಳ ಕುರಿತು ನಿರ್ಧರಿಸಲು ಸುಪ್ರೀಂ ಕೋರ್ಟ್ ಇತ್ತೀಚೆಗೆ ಮೂರು ತಿಂಗಳ ಕಾಲಾವಕಾಶವನ್ನು ನಿಗದಿಪಡಿಸಿತ್ತು. ಇದಾದ ನಂತರ ಜಗದೀಪ್ ಧನಕರ್ ಸುಪ್ರೀಂ ಕೋರ್ಟ್ ವಿರುದ್ಧ ಟೀಕಾಪ್ರಹಾರ ನಡೆಸಿದ್ದರು. ರಾಷ್ಟ್ರಪತಿಗಳಿಗೆ ನಿರ್ದೇಶನ ನೀಡುವ ಅಧಿಕಾರ ಸುಪ್ರೀಂ ಕೋರ್ಟ್ ಹೊಂದಿಲ್ಲ ಎಂದು ಅವರು ಹೇಳಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...