ಸಂಸತ್ ಮುಂಗಾರು ಅಧಿವೇಶನ: ಕೇಂದ್ರ ಸರ್ಕಾರವನ್ನು ಕಟ್ಟಿಹಾಕಲು ಕಾಂಗ್ರೆಸ್ ರಣತಂತ್ರ

Date:

ಜುಲೈ 20ರಿಂದ ಆರಂಭವಾಗಲಿರುವ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಕೇಂದ್ರ ಸರ್ಕಾರವನ್ನು ಕಟ್ಟಿಹಾಕಲು ಕಾಂಗ್ರೆಸ್ ಭರ್ಜರಿ ರಣತಂತ್ರ ರೂಪಿಸಿದೆ. ಅಯೋಧ್ಯೆಯ ರಾಮಮಂದಿರ ದೇಣಿಗೆಯಲ್ಲಿ ನಡೆದಿರುವ ಅಕ್ರಮ (ಚಂದಾ ಚೋರಿ), ಪರೀಕ್ಷಾ ಪತ್ರಿಕೆಗಳ ಸೋರಿಕೆ ಮತ್ತು ಶಿಕ್ಷಣ ವ್ಯವಸ್ಥೆಯ ಪತನ ಸೇರಿದಂತೆ ಪ್ರಮುಖ ವಿಚಾರಗಳನ್ನು ಮುಂದಿಟ್ಟುಕೊಂಡು ಮೋದಿ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಳ್ಳಲು ಕಾಂಗ್ರೆಸ್ ನಿರ್ಧರಿಸಿದೆ.

- Advertisement -

ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಜನಪಥ್ ನಿವಾಸದಲ್ಲಿ ನಡೆದ ಪಕ್ಷದ ಪ್ರಮುಖ ನಾಯಕರ ಸಭೆಯಲ್ಲಿ ಹಲವು ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕೆ.ಸಿ. ವೇಣುಗೋಪಾಲ್, ಜೈರಾಮ್ ರಮೇಶ್, ಪಿ. ಚಿದಂಬರಂ ಮತ್ತು ಶಶಿ ತರೂರ್ ಸೇರಿದಂತೆ ಹಿರಿಯ ನಾಯಕರು ಪಾಲ್ಗೊಂಡು ಅಧಿವೇಶನದ ತಂತ್ರಗಾರಿಕೆ ಹೆಣೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಸಾಮಾಜಿಕ ಜಾಲತಾಣ ‘X’ನಲ್ಲಿ ಪ್ರತಿಕ್ರಿಯಿಸಿರುವ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, “ರಾಮಮಂದಿರದ ಹೆಸರಿನಲ್ಲಿ ನಡೆದ ದೇಣಿಗೆ ದೋಖಾ, ನೀಟ್ (NEET) ಪೇಪರ್ ಲೀಕ್ ಹಗರಣ, ದೇಶದಲ್ಲಿನ ನಿರುದ್ಯೋಗ, ಬೆಲೆ ಏರಿಕೆ, ವಿದೇಶಾಂಗ ನೀತಿಯ ವೈಫಲ್ಯಗಳು, ರಾಜಕೀಯ ಪಕ್ಷಗಳನ್ನು ಒಡೆಯುವ ಹುನ್ನಾರ ಮತ್ತು ಎಥೆನಾಲ್ ಮಿಶ್ರಣದಿಂದ ವಾಹನ ಮಾಲೀಕರಿಗೆ ಉಂಟಾಗಿರುವ ತೊಂದರೆಗಳನ್ನು ಅಧಿವೇಶನದಲ್ಲಿ ಗಂಭೀರವಾಗಿ ಚರ್ಚಿಸಲಾಗುವುದು” ಎಂದು ಘೋಷಿಸಿದ್ದಾರೆ.

ಜೈರಾಮ್ ರಮೇಶ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸರ್ಕಾರವು ಮರುಪರಿಚಯಿಸಲು ಯತ್ನಿಸುತ್ತಿರುವ ‘ಡಿಲಿಮಿಟೇಶನ್’ (ಕ್ಷೇತ್ರ ಮರುವಿಂಗಡಣೆ) ಮಸೂದೆಯನ್ನು ಯಾವುದೇ ಕಾರಣಕ್ಕೂ ಅಂಗೀಕರಿಸಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಏಪ್ರಿಲ್ 17ರಂದು ಸಂಸತ್ತಿನಲ್ಲಿ ಸರ್ಕಾರವು ಈ ಮಸೂದೆಗೆ ಅಗತ್ಯವಿರುವ ಮೂರನೇ ಎರಡರಷ್ಟು ಬಹುಮತ ಪಡೆಯುವಲ್ಲಿ ವಿಫಲವಾಗಿತ್ತು. ಇದೀಗ ಮತ್ತೆ ಅದೇ ಪ್ರಯತ್ನವನ್ನು ಮಾಡುತ್ತಿದೆ. ಆದರೆ, ಕಾಂಗ್ರೆಸ್ ವಿರೋಧ ಪಕ್ಷಗಳನ್ನು ಒಗ್ಗೂಡಿಸಿ ಈ ಮಸೂದೆಯನ್ನು ಮತ್ತೊಮ್ಮೆ ಸೋಲಿಸಲಿದೆ ಎಂದು ತಿಳಿಸಿದರು.

ಜೊತೆಗೆ, ಗಂಭೀರ ಅಪರಾಧಗಳಿಗಾಗಿ 30 ದಿನಗಳ ಕಾಲ ಜೈಲಿನಲ್ಲಿರುವ ಸಚಿವರು ಮತ್ತು ಮುಖ್ಯಮಂತ್ರಿಗಳನ್ನು ಹುದ್ದೆಯಿಂದ ವಜಾಗೊಳಿಸುವ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಕೂಡ ಕಾಂಗ್ರೆಸ್ ಕಠಿಣವಾಗಿ ವಿರೋಧಿಸಲಿದೆ. ಇಂತಹ ಮಸೂದೆಗಳು ಪ್ರಜಾಪ್ರಭುತ್ವಕ್ಕೆ ಕಪ್ಪು ಚುಕ್ಕೆಯಾಗಲಿವೆ ಎಂದು ಜೈರಾಮ್ ರಮೇಶ್ ಕಿಡಿಕಾರಿದ್ದಾರೆ.

ಇದನ್ನೂ ಓದಿ: ತೇವಾಂಶ ಹೀರುವ ಎಥೆನಾಲ್ ಗುಣವೇ ಪೆಟ್ರೋಲ್ ಮಾಲಿನ್ಯಕ್ಕೆ ಕಾರಣ: ಕಂಗೆಟ್ಟ ಬಂಕ್‌ ಮಾಲೀಕರು

ವಿಕಸಿತ್ ಭಾರತ್ ಶಿಕ್ಷಣ ಅಧಿಷ್ಠಾನ ಮಸೂದೆಯನ್ನು ಸಂಪೂರ್ಣವಾಗಿ ವಿರೋಧಿಸುವುದಾಗಿ ಕಾಂಗ್ರೆಸ್ ತಿಳಿಸಿದೆ. ಎಫ್‌ಸಿಆರ್‌ಎ (FCRA) ತಿದ್ದುಪಡಿ ಮಸೂದೆಯನ್ನು ಕಳೆದ ಬಾರಿ ವಿರೋಧಿಸಿದ್ದರಿಂದ ಸರ್ಕಾರ ವಾಪಸ್ ಪಡೆದಿತ್ತು, ಈಗ ಮತ್ತೆ ತರುತ್ತಿದ್ದರೆ ಅದನ್ನು ಮತ್ತೆ ವಿರೋಧಿಸಲಾಗುವುದು ಎಂದು ತಿಳಿಸಿದೆ.

ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಗೆ ಆಧಾರವಾಗಿರುವ ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆಯ ತಿದ್ದುಪಡಿಯನ್ನು ಕಾಂಗ್ರೆಸ್ ಒಪ್ಪುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಇಂಡಿಯಾ (I.N.D.I.A) ಮೈತ್ರಿಕೂಟದ ನಾಯಕರು ಮುಂದಿನ ಸೋಮವಾರ ಸಭೆ ಸೇರಿ ಜಂಟಿ ತಂತ್ರಗಾರಿಕೆಯನ್ನು ರೂಪಿಸಲಿದ್ದಾರೆ. ಆಡಳಿತ ಪಕ್ಷದ ಬಹುಮತದ ತಂತ್ರಗಳಿಗೆ ಬಲಿಯಾಗದಂತೆ ಎಲ್ಲ ವಿರೋಧ ಪಕ್ಷಗಳ ಏಕತೆಯನ್ನು ಕಾಪಾಡಿಕೊಳ್ಳಲು ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ನಿರಂತರವಾಗಿ ಸಂಪರ್ಕದಲ್ಲಿದ್ದಾರೆ ಎಂದು ವರದಿಯಾಗಿದೆ.

ಸರ್ಕಾರವು ತನ್ನ ಅಜೆಂಡಾದಲ್ಲಿ ಕ್ಷೇತ್ರದ ಮರುವಿಂಗಡಣೆ ಮಸೂದೆ ಮತ್ತು ಸಚಿವರು ಜೈಲಿಗೆ ಹೋದರೆ ಅವರನ್ನು ಹುದ್ದೆಯಿಂದ ತೆಗೆಯುವ ಮಸೂದೆಯನ್ನು ಪ್ರಮುಖವಾಗಿ ಇರಿಸಿದೆ. ಒಟ್ಟಾರೆಯಾಗಿ, ಜುಲೈ 20ರಿಂದ ಆಗಸ್ಟ್ 13ರವರೆಗೆ ನಡೆಯಲಿರುವ ಈ ಅಧಿವೇಶನದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಭಾರೀ ಸಂಘರ್ಷ ನಡೆಯುವುದು ಖಚಿತವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತ & ಚೀನಾದ H-1B ಉದ್ಯೋಗಿಗಳಿಂದ ಅಮೆರಿಕನ್ನರ ಉದ್ಯೋಗಕ್ಕೆ ಕುತ್ತು; ಸಂಸದ ರಿಲೆ ಮೂರ್ ಆರೋಪ

ಅಮೆರಿಕದ ಕಂಪ್ಯೂಟರ್‌ ಸೈನ್ಸ್‌ ಪದವೀಧರರ ಉದ್ಯೋಗಾವಕಾಶಗಳನ್ನು ಭಾರತ ಮತ್ತು ಚೀನಾದಿಂದ ಬರುವ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ; ಸುಪ್ರೀಂನದ್ದು ದ್ವಂದ್ವ ನಿಲುವಲ್ಲವೇ?

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ...

ದೇಶ ತೊರೆಯುವಂತೆ ನೋಟಿಸ್‌; ಹೈಕೋರ್ಟ್ ಮೆಟ್ಟಿಲೇರಿದ ನಟ ಇಮ್ರಾನ್ ಖಾನ್

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆದ...

ಅವಧಿ ಮೀರಿದ ಆಹಾರ ಮರುಮಾರಾಟ ಆರೋಪ: ರಿಲಯನ್ಸ್‌, ಬ್ಲಿಂಕಿಟ್‌ ಘಟಕಗಳ ವಿರುದ್ಧ ತನಿಖೆ

ಅವಧಿ ಮೀರಿದ, ಹಾಳಾದ ಹಾಗೂ ಗ್ರಾಹಕರು ತಿರಸ್ಕರಿಸಿದ ಆಹಾರ ಪದಾರ್ಥಗಳನ್ನು ನಾಶಪಡಿಸುವ...