ಸೋಮವಾರದಿಂದ ಸಂಸತ್ ಅಧಿವೇಶನ; ಪ್ರಶ್ನೆ ಪತ್ರಿಕೆ ಸೋರಿಕೆ, ರಾಮ ಮಂದಿರ ವಿವಾದ ವಿಪಕ್ಷಗಳ ಅಸ್ತ್ರ

Date:

ನಾಳೆಯಿಂದ (ಸೋಮವಾರ) ಆರಂಭವಾಗಲಿರುವ ಸಂಸತ್ತಿನ ಮುಂಗಾರು ಅಧಿವೇಶನವು ಭಾರೀ ಚರ್ಚೆಗಳಿಗೆ ವೇದಿಕೆಯಾಗುವ ಸಾಧ್ಯತೆಯಿದೆ. ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ, ಹೋರಾಟಗಾರ ಸೋನಮ್ ವಾಂಗ್ಚುಕ್ ಪ್ರತಿಭಟನೆ ಹಾಗೂ ಅಯೋಧ್ಯೆಯ ರಾಮ ಮಂದಿರದ ದೇಣಿಗೆ ಲೂಟಿ ವಿಚಾರಗಳು ಸೇರಿದಂತೆ ಹಲವು ಪ್ರಮುಖ ವಿಚಾರಗಳನ್ನು ವಿಪಕ್ಷಗಳು ಚರ್ಚೆಗೆ ತರಲು ಮತ್ತು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಸಜ್ಜಾಗಿವೆ.

- Advertisement -

ಸಧ್ಯಕ್ಕೆ, ಕಳೆದ ಏಪ್ರಿಲ್‌ನ ಸಂಸತ್‌ ಅಧಿವೇಶನ ಮುಗಿದ ನಂತರ, ವಿಪಕ್ಷಗಳ ರಾಜಕೀಯ ಚಿತ್ರಣವೇ ಬದಲಾಗಿದೆ. ನಾಲ್ಕು ವಿರೋಧ ಪಕ್ಷಗಳ ಕನಿಷ್ಠ 37 ಸಂಸದರು ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ಸೇರ್ಪಡೆಯಾಗಿದ್ದಾರೆ. ಇದರಿಂದಾಗಿ ಕ್ಷೇತ್ರ ಮರುವಿಂಗಡಣೆ ಸೇರಿದಂತೆ ಪ್ರಮುಖ ವಿವಾದಾತ್ಮಕ ಮಸೂದೆಗಳನ್ನು ಮಂಡಿಸಿ, ಅಂಗೀಕರಿಸಲು ಮೋದಿ ಸರ್ಕಾರ ಕುತಂತ್ರ ಹೆಣೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಭಾನುವಾರ ನಡೆದ ಸರ್ವಪಕ್ಷ ಸಭೆಗೆ ಟಿಎಂಸಿ ಬಂಡಾಯ ಬಣವನ್ನು ಸರ್ಕಾರ ಆಹ್ವಾನಿಸಿದ್ದನ್ನು ಪ್ರತಿಭಟಿಸಿ ವಿರೋಧ ಪಕ್ಷಗಳು ಸಭೆಯಿಂದ ಹೊರನಡೆದವು. ಇಂಡಿಯಾ ಮೈತ್ರಿಕೂಟದಿಂದ ಅಂತರ ಕಾಯ್ದುಕೊಂಡಿರುವ ಡಿಎಂಕೆ ಮತ್ತು ಎಎಪಿ ಕೂಡ ಈ ಬಹಿಷ್ಕಾರದಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿದೆ.

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸೋನಮ್ ವಾಂಗ್ಚುಕ್ ಅವರ ಪ್ರತಿಭಟನೆಯನ್ನು ಹತ್ತಿಕ್ಕಲು ಸರ್ಕಾರ ಯತ್ನಿಸಿರುವುದನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ತೀವ್ರವಾಗಿ ಖಂಡಿಸಿದ್ದಾರೆ.

ಮತ್ತೊಂದೆಡೆ, ಆಡಳಿತ ಪಕ್ಷದ ಒಳಗಡೆಯೇ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣದ ಕೇಂದ್ರೀಕರಣಕ್ಕೆ ಸಂಬಂಧಿಸಿದ ‘ವಿಕ್ಷಿತ್ ಭಾರತ್ ಶಿಕ್ಷಾ ಅಧಿಷ್ಠಾನ ಬಿಲ್ 2025’ ಮತ್ತು ಗಂಭೀರ ಅಪರಾಧಗಳಿಗಾಗಿ ಬಂಧನಕ್ಕೊಳಗಾಗುವ ಸಚಿವರನ್ನು ವಜಾಗೊಳಿಸುವ ಸಂವಿಧಾನದ 130ನೇ ತಿದ್ದುಪಡಿ ಮಸೂದೆಯನ್ನು ಸದ್ಯಕ್ಕೆ ಸರ್ಕಾರ ಬದಿಗೆ ಸರಿಸಿದೆ ಎಂದು ವರದಿಯಾಗಿದೆ.

ರಾಮ ಮಂದಿರ ಟ್ರಸ್ಟ್‌ನಲ್ಲಿ ನಡೆದಿರುವ ದೇಣಿಗೆ ಕಳ್ಳತನದ ಆರೋಪದ ಕುರಿತು ಸ್ವತಂತ್ರ ತನಿಖೆ ನಡೆಸಬೇಕು ಮತ್ತು ಅದರ ವರದಿಯನ್ನು ಸಾರ್ವಜನಿಕಗೊಳಿಸಬೇಕು ಎಂದು ಆಗ್ರಹಿಸಿ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಮಂತ್ರಿಗೆ ಜಂಟಿ ಪತ್ರ ಬರೆದಿದ್ದಾರೆ. ಈ ವಿಷಯವನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸಿ ಬಿಜೆಪಿಯ ಹಿಂದುತ್ವದ ಮತಬ್ಯಾಂಕ್‌ಗೆ ಧಕ್ಕೆ ತರಲು ವಿರೋಧ ಪಕ್ಷಗಳು ಯೋಜಿಸಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ನಕಲಿ ವೈದ್ಯರಿಗೆ ಔಷಧ ಪೂರೈಕೆ : 7 ಮೆಡಿಕಲ್‌ಗಳ ಪರವಾನಗಿ ಅಮಾನತು

ನಕಲಿ ವೈದ್ಯರಿಗೆ ಔಷಧಗಳನ್ನು ಸರಬರಾಜು ಮಾಡಿದ ಆರೋಪದ ಹಿನ್ನೆಲೆ ಜಿಲ್ಲೆಯ ಏಳು...

ʼತ್ರಿವರ್ಣ ಧ್ವಜ ಹಾರಿಸಲು ಅನುಮತಿ ಬೇಕಿಲ್ಲʼ; ಪೊಲೀಸ್ ನೋಟಿಸ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ನೇಹಾ ಬೋರಾ

ರಾಷ್ಟ್ರಧ್ವಜ ಹಾರಿಸಲು ಯಾರ ಅನುಮತಿಯೂ ಅಗತ್ಯವಿಲ್ಲ ಎಂದು ವಾದಿಸಿರುವ ಎಐಎಸ್‌ಎ (AISA)...

ಬೀದರ್‌ | ಕನಿಷ್ಠ ವೇತನ ಪಾವತಿಗೆ ಅರಣ್ಯ ಇಲಾಖೆ ದಿನಗೂಲಿ ನೌಕರರ ಮನವಿ

ಔರಾದ ತಾಲ್ಲೂಕಿನ ಸಾಮಾಜಿಕ ಅರಣ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೀಕ್ಷಕರು ಹಾಗೂ ದಿನಗೂಲಿ...

ಬೀದರ್‌ | ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಿಸೋಣ : ಡಿಸಿ ಶಿಲ್ಪಾ ಶರ್ಮಾ

ಬೀದರ್ ಜಿಲ್ಲೆಯಲ್ಲಿ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ಆಕರ್ಷಕವಾಗಿ...