ಲೋಕಸಭೆ, ವಿಧಾನಸಭೆ ಉಮೇದುವಾರಿಕೆಯ ಕನಿಷ್ಠ ವಯಸ್ಸು ಇಳಿಕೆಗೆ ಸಂಸದೀಯ ಸಮಿತಿ ಸಲಹೆ

Date:

ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಕನಿಷ್ಠ ವಯಸ್ಸನ್ನು ಇಳಿಕೆ ಮಾಡಲು ಸಂಸದೀಯ ಸಮಿತಿ ಸಲಹೆ ನೀಡಿದೆ. ಇದು ಯುವಕರಿಗೆ ಪ್ರಜಾಪ್ರಭುತ್ವದಲ್ಲಿ ಪಾಲುಗೊಳ್ಳಲು ಸಮಾನ ಅವಕಾಶ ನೀಡುತ್ತದೆ ಎಂದು ಸಮಿತಿ ಅಭಿಪ್ರಾಯ ಪಟ್ಟಿದೆ.

ಪ್ರಸ್ತುತ ಕಾನೂನಿನ ಪ್ರಕಾರ, ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಒಬ್ಬ ವ್ಯಕ್ತಿಗೆ ಕನಿಷ್ಠ 25 ವರ್ಷ ವಯಸ್ಸಾಗಿರಬೇಕು. ರಾಜ್ಯಸಭೆ ಮತ್ತು ರಾಜ್ಯ ವಿಧಾನ ಪರಿಷತ್ ಸದಸ್ಯರಾಗಲು ಕನಿಷ್ಠ ವಯಸ್ಸು 30 ವರ್ಷ.

‘ರಾಷ್ಟ್ರೀಯ ಚುನಾವಣೆ’ ಅಥವಾ ಲೋಕಸಭಾ ಚುನಾವಣೆಗೆ, ಸ್ಪರ್ಧಿಸುವ ಕನಿಷ್ಠ ವಯಸ್ಸನ್ನು ಪ್ರಸ್ತುತ 25 ವರ್ಷದಿಂದ 18 ಕ್ಕೆ ಇಳಿಸಲು ಸಂಸದೀಯ ಸಮಿತಿಯು ಶಿಫಾರಸು ಮಾಡಿದೆ. ಪ್ರಸ್ತುತ, ಒಬ್ಬ ವ್ಯಕ್ತಿಯು ಮತದಾರರಾಗಿ ನೋಂದಾಯಿಸಲು ಕನಿಷ್ಠ 18 ವರ್ಷಗಳಾಗಿರಬೇಕು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕೆನಡಾ, ಇಂಗ್ಲೆಂಡ್, ಆಸ್ಟ್ರೇಲಿಯಾದಂತಹ ವಿವಿಧ ದೇಶಗಳಲ್ಲಿ ರಾಷ್ಟ್ರೀಯ ಚುನಾವಣೆಗಳಲ್ಲಿ ಉಮೇದುವಾರಿಕೆಗೆ ಕನಿಷ್ಠ ವಯಸ್ಸು 18 ವರ್ಷಗಳು ಎಂಬುದನ್ನು ಸಂಸದೀಯ ಸಮಿತಿ ಗಮನಿಸಿದೆ. ಯುವ ಜನತೆ ವಿಶ್ವಾಸಾರ್ಹವಾಗಿ ಮತ್ತು ಪ್ರಬುದ್ಧವಾಗಿ ಪ್ರಜಾಪ್ರಭುತ್ವದ ಚಟುವಟಿಕೆಗಳಲ್ಲಿ ಭಾಗವಹಿಸಲು ಇದು ಸಹಕಾರಿ ಎಂದು ಆ ರಾಷ್ಟ್ರಗಳ ಉದಾಹರಣೆಗಳು ತೋರಿಸುತ್ತವೆ” ಎಂದು ಕಾನೂನು ಮತ್ತು ಸಿಬ್ಬಂದಿ ಕುರಿತ ಸಂಸದೀಯ ಸ್ಥಾಯಿ ಸಮಿತಿ ಹೇಳಿದೆ.

‘ವಿಧಾನಸಭಾ ಚುನಾವಣೆಯಲ್ಲಿಯೂ ಉಮೇದುವಾರಿಕೆಗೆ ಕನಿಷ್ಠ ವಯಸ್ಸಿನ ಅವಶ್ಯಕತೆಯನ್ನು ಕಡಿಮೆ ಮಾಡಲು’ ಸಮಿತಿ ಸೂಚಿಸಿದೆ.

ಈ ಸುದ್ದಿ ಓದಿದ್ದೀರಾ: ಅಲೆಮಾರಿಗಳ ‘ಅಸ್ಮಿತೆ’ಗೊಂದು ಆಯೋಗ ಬೇಕೆ?

ಬಿಜೆಪಿಯ ಸುಶೀಲ್ ಮೋದಿ ನೇತೃತ್ವದ ಸಮಿತಿಯು ‘ಜಾಗತಿಕ ಅಭ್ಯಾಸಗಳು, ಯುವಜನರಲ್ಲಿ ಹೆಚ್ಚುತ್ತಿರುವ ರಾಜಕೀಯ ಪ್ರಜ್ಞೆ ಮತ್ತು ಯುವ ಪ್ರಾತಿನಿಧ್ಯದ ಅನುಕೂಲಗಳಂತಹ ಅಪಾರ ಪ್ರಮಾಣದ ಪುರಾವೆಗಳ ಆಧಾರದಿಂದ ಇಂಥದ್ದೊಂದು ಅಭಿಪ್ರಾಯಕ್ಕೆ ಬರಲಾಗಿದೆ’ ಎಂದು ಹೇಳಿದೆ.

ಚುನಾವಣಾ ಆಯೋಗದ ಪ್ರಕಾರ, ಸಂವಿಧಾನದ ನಿಬಂಧನೆಯನ್ನು ಬದಲಾಯಿಸಲು ಬಲವಾದ ಕಾರಣಗಳು ಬೇಕು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟಿಎಂಸಿಗೆ ಈಗಲೂ ಮೈತ್ರಿ ಬಾಗಿಲು ತೆರೆದಿದೆ: ಕಾಂಗ್ರೆಸ್ ಮುಖಂಡ

ಇಂಡಿಯಾ ಒಕ್ಕೂಟಕ್ಕೆ ತೃಣಮೂಲ ಕಾಂಗ್ರೆಸ್ ಸೇರ್ಪಡೆಯಾಗಿಲ್ಲ. ಪಶ್ಚಿಮ ಬಂಗಾಳದಲ್ಲಿ ಎಲ್ಲ 42...

ರೈತ ಹೋರಾಟ | ಸರ್ಕಾರದ ದಮನಕ್ಕೆ ಬಗ್ಗದ ‘ದೆಹಲಿ ಚಲೋ’; ಈವರೆಗೆ 6 ರೈತರು ಸಾವು

ಕನಿಷ್ಟ ಬೆಂಬಲ ಬೆಲೆ (ಎಂಎಸ್‌ಪಿ) ಮತ್ತು ರೈತ ಸಾಲ ಮನ್ನಾಕ್ಕಾಗಿ ಆಗ್ರಹಿಸಿದ...

ಪ್ರಜಾಪ್ರಭುತ್ವ, ಸತ್ಯ ಉಳಿಸುವಲ್ಲಿ ಮಾಧ್ಯಮ ವಿಫಲವಾದ್ರೆ ಮುಂದೇನು?

ದೇಶದಲ್ಲಿ ನ್ಯಾಯಾಂಗ, ಕಾರ್ಯಾಂಗ ಮತ್ತು ಶಾಸಕಾಂಗಗಳಂತೆ, ಪ್ರಜಾಪ್ರಭುತ್ವದ ಒಂದು ಪ್ರಮುಖ ಅಂಗವಾಗಿ...

ಲೋಕಸಭೆ ಚುನಾವಣೆಗೆ 195 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ಲೋಕಸಭೆ ಚುನಾವಣೆಗೆ ಬಿಜೆಪಿ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ....