ಸಂಸತ್ತಿನ ಚಳಿಗಾಲದ ಅಧಿವೇಶನ ಡಿಸೆಂಬರ್ 2ನೇ ವಾರದಲ್ಲಿ ಆರಂಭವಾಗಿ ಕೊನೆಯ ವಾರ ಮುಕ್ತಾಯವಾಗುವ ಸಾಧ್ಯತೆ ಇದೆ ಎಂದು ಬುಧವಾರ ಮೂಲಗಳು ತಿಳಿಸಿವೆ.
ಡಿಸೆಂಬರ್ 3 ರಂದು ಐದು ರಾಜ್ಯಗಳ ಮತ ಎಣಿಕೆ ನಂತರ ಅಧಿವೇಶನ ಪ್ರಾರಂಭವಾಗಬಹುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಚಳಿಗಾಲದ ಅಧಿವೇಶನ ಸಾಮಾನ್ಯವಾಗಿ ನವೆಂಬರ್ ಮೂರನೇ ವಾರದಲ್ಲಿ ಪ್ರಾರಂಭವಾಗುತ್ತದೆ ಮತ್ತು ಡಿಸೆಂಬರ್ 25 ಕ್ಕೆ ಮುಂಚಿತವಾಗಿ ಮುಕ್ತಾಯಗೊಳ್ಳುತ್ತದೆ.
ಈ ಸುದ್ದಿ ಓದಿದ್ದೀರಾ? ನನ್ನ ಶೂಗಳನ್ನು ಎಣಿಸಲು ಸ್ವಾಗತ ಎಂದು ಸಿಬಿಐ ಛೇಡಿಸಿದ ಮಹುವಾ ಮೊಯಿತ್ರಾ
ಸಂಸತ್ತಿನಲ್ಲಿ ಬಾಕಿ ಉಳಿದಿರುವ ಮತ್ತೊಂದು ಪ್ರಮುಖ ಮಸೂದೆಯು ಮುಖ್ಯ ಚುನಾವಣಾ ಆಯುಕ್ತರು ಮತ್ತು ಚುನಾವಣಾ ಆಯುಕ್ತರ ನೇಮಕಾತಿಗೆ ಸಂಬಂಧಿಸಿದೆ.
ಭಾರತೀಯ ನ್ಯಾಯ ಸಂಹಿತೆ ಮಸೂದೆ-2023, ಅಪರಾಧ ಪ್ರಕ್ರಿಯಾ ಸಂಹಿತೆ ಬದಲಿಗೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಮಸೂದೆ-2023 ಮತ್ತು ಭಾರತೀಯ ಸಾಕ್ಷ್ಯ ಕಾಯ್ದೆ ಬದಲಿಗೆ ಭಾರತೀಯ ಸಾಕ್ಷ್ಯ ಮಸೂದೆ 2023 ಅನ್ನು ಗೃಹ ಸ್ಥಾಯಿ ಸಮಿತಿಯು ಈಗಾಗಲೇ ಅಂಗೀಕರಿಸಿದೆ. ಇವುಗಳಿಗೆ ಅನುಮೋದನೆ ಪಡೆಯಲು ಅಧಿವೇಶನಲ್ಲಿ ಪ್ರಸ್ತಾಪಿಸುವ ಸಾಧ್ಯತೆಯಿದೆ.