ಹೊಸ ಸ್ಪೀಕರ್ ಅನ್ನು ಪಕ್ಷಗಳು ನಿರ್ಧರಿಸುತ್ತೆ, ಅದರಲ್ಲಿ ನನ್ನ ಪಾತ್ರವಿಲ್ಲ: ಓಂ ಬಿರ್ಲಾ

Date:

ನೂತನ ಲೋಕಸಭೆ ಸ್ಪೀಕರ್ ಆಯ್ಕೆ ಮಾಡುವ ನಿರ್ಣಾಯಕ ಚುನಾವಣೆಯು ಜೂನ್ 26ರಂದು ನಡೆಯಲ್ಲಿದ್ದು, “ಹೊಸ ಸ್ಪೀಕರ್ ಅನ್ನು ಪಕ್ಷಗಳು ನಿರ್ಧರಿಸುತ್ತದೆ, ಅದರಲ್ಲಿ ನನ್ನ ಪಾತ್ರವಿಲ್ಲ” ಎಂದು ನಿರ್ಗಮಿತ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಓಂ ಬಿರ್ಲಾ, “ಹೊಸ ಸ್ಪೀಕರ್ ಮತ್ತು ಉಪ ಸ್ಪೀಕರ್ ಬಗ್ಗೆ ರಾಜಕೀಯ ಪಕ್ಷಗಳು ನಿರ್ಧರಿಸುತ್ತವೆ. ಈ ಎಲ್ಲಾ ನಿರ್ಧಾರಗಳನ್ನು ರಾಜಕೀಯ ಪಕ್ಷಗಳು ತೆಗೆದುಕೊಳ್ಳುತ್ತವೆ. ಈ ನಿರ್ಧಾರಗಳನ್ನು ನಾನು ತೆಗೆದುಕೊಳ್ಳಲು ಸಾಧ್ಯವಿಲ್ಲ” ಎಂದು ಸ್ಪಷ್ಟಪಡಿಸಿದರು.

ಸಂಸತ್ತಿನ ಮೊದಲ ಅಧಿವೇಶನ ಜೂನ್ 24ರಿಂದ ಜುಲೈ 4ರವರೆಗೆ ನಡೆಯಲಿದೆ. ಬಿಜೆಪಿ ಸರ್ಕಾರ 272 ಸ್ಥಾನಗಳ ಬಹುಮತ ಪಡೆಯಲು ವಿಫಲವಾಗಿ ಈಗ ಮೈತ್ರಿ ಸರ್ಕಾರ ನಡೆಸುತ್ತಿದೆ. ಈ ನಿಟ್ಟಿನಲ್ಲಿ ಎನ್‌ಡಿಎ ಸರ್ಕಾರದ ಮೊದಲ ಪರೀಕ್ಷೆಯೇ ಸ್ಪೀಕರ್ ಚುನಾವಣೆಯಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇದನ್ನು ಓದಿದ್ದೀರಾ?  ಲೋಕಸಭೆ ಸ್ಪೀಕರ್ ಚುನಾವಣೆ| ಟಿಡಿಪಿ ಸ್ಪರ್ಧಿಸಿದರೆ ‘ಇಂಡಿಯಾ’ ಒಕ್ಕೂಟ ಬೆಂಬಲಿಸುತ್ತೆ: ಸಂಜಯ್ ರಾವತ್

ಸ್ಪೀಕರ್ ನಿರ್ಣಾಯಕ ಪಾತ್ರವಾದ ಕಾರಣ ಬಿಜೆಪಿ ನಾಯಕರೇ ಈ ಹುದ್ದೆಯನ್ನು ಉಳಿಸಿಕೊಳ್ಳಬಹುದು ಎಂಬ ಊಹಾಪೋಹಗಳು ವ್ಯಾಪಕವಾಗಿದ್ದರೂ, ಬಿಜೆಪಿಯ ಮಿತ್ರ ಪಕ್ಷಗಳಾದ ಟಿಡಿಪಿ ಮತ್ತು ಜೆಡಿ (ಯು) ಸಹ ಈ ಪ್ರಮುಖ ಪಾತ್ರವನ್ನು ಬಿಟ್ಟುಕೊಡಲು ಸಿದ್ಧವಾಗಿಲ್ಲ.

ಸ್ಪೀಕರ್ ಹುದ್ದೆಗೆ ಬಿಜೆಪಿ ಆಯ್ಕೆಯನ್ನು ಬೆಂಬಲಿಸುವುದಾಗಿ ಜೆಡಿಯು ಹೇಳಿದರೆ, ಎನ್‌ಡಿಎ ಪಾಲುದಾರರಲ್ಲಿ ಒಮ್ಮತದ ಅಭ್ಯರ್ಥಿಯನ್ನು ಬೆಂಬಲಿಸುತ್ತದೆ ಎಂದು ಟಿಡಿಪಿ ಹೇಳುತ್ತದೆ. ನಿರ್ಗಮಿತ ಸ್ಪೀಕರ್ ಓಂ ಬಿರ್ಲಾ ಮತ್ತು ಆಂಧ್ರಪ್ರದೇಶ ಬಿಜೆಪಿ ಮುಖ್ಯಸ್ಥೆ ಡಿ ಪುರಂದೇಶ್ವರಿ ಅವರು ಈ ಸ್ಥಾನಕ್ಕೆ ಮುಂಚೂಣಿಯಲ್ಲಿದ್ದಾರೆ.

ಇದನ್ನು ಓದಿದ್ದೀರಾ? ಉಪ ಸ್ಪೀಕರ್ ಹುದ್ದೆ ನೀಡದಿದ್ದರೆ ಸ್ಪೀಕರ್ ಅಭ್ಯರ್ಥಿ ಕಣಕ್ಕಿಳಿಸುವ ಯೋಚನೆಯಲ್ಲಿ ‘ಇಂಡಿಯಾ’ ಒಕ್ಕೂಟ

ಕಳೆದ ಐದು ವರ್ಷಗಳಿಂದ ಖಾಲಿಯಾಗಿದ್ದ ಉಪಸಭಾಪತಿ ಹುದ್ದೆಯು ಮತ್ತೊಂದು ವಿವಾದಾತ್ಮಕ ವಿಷಯವಾಗಿದೆ. ಹೊಸ ಲೋಕಸಭೆಯಲ್ಲಿ ಇಂಡಿಯಾ ಒಕ್ಕೂಟ 234 ಸದಸ್ಯರ ಪ್ರಭಾವಶಾಲಿ ಬಲವನ್ನು ಹೊಂದಿದ್ದು, ವಿರೋಧ ಪಕ್ಷದ ನಾಯಕರೂ ಉಪಸಭಾಪತಿ ಹುದ್ದೆಗಾಗಿ ಪೈಪೋಟಿ ನಡೆಸುತ್ತಿದ್ದಾರೆ.

17ನೇ ಲೋಕಸಭೆಯು ಉಪ ಸ್ಪೀಕರ್ ಇಲ್ಲದೆ ಕಾರ್ಯನಿರ್ವಹಿಸಿದ್ದರೂ ಕೂಡಾ ಸ್ಪೀಕರ್ ಚುನಾಯಿತರಾದ ಕೂಡಲೇ ಲೋಕಸಭೆಯ ಉಪ ಸ್ಪೀಕರ್ ಆಯ್ಕೆಯು ಸಂವಿಧಾನ ಪ್ರಕಾರ ಕಡ್ಡಾಯವಾಗಿದೆ. 17ನೇ ಲೋಕಸಭೆಯಲ್ಲಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ವಿರೋಧ ಪಕ್ಷಗಳು ಹಲವು ಬಾರಿ ಮನವಿ ಸಲ್ಲಿಸಿದ್ದರೂ ಉಪಸಭಾಪತಿ ನೇಮಕಕ್ಕೆ ಯಾವುದೇ ಕ್ರಮ ಕೈಗೊಂಡಿಲ್ಲ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರಾಖಂಡ | ಅನಾರೋಗ್ಯದಿಂದ ತಮಟೆ ಬಾರಿಸದ ವ್ಯಕ್ತಿ; ದಲಿತ ಕುಟುಂಬಗಳಿಗೆ ಗ್ರಾಮದಿಂದ ಬಹಿಷ್ಕಾರ!

ದಲಿತ ಸಮುದಾಯದ ವ್ಯಕ್ತಿಯೊಬ್ಬರು ಅನಾರೋಗ್ಯದ ಕಾರಣ ದೇವಸ್ಥಾನದಲ್ಲಿ ತಮಟೆ ಬಾರಿಸಲು ಬರದ...

ವಿವಾದಾತ್ಮಕ ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ತಾಯಿ ಬಂಧನ

ಪಿಸ್ತೂಲ್‌ ಹಿಡಿದು ರೈತರಿಗೆ ಬೆದರಿಸಿದ ಆರೋಪದ ಮೇಲೆ ವಿವಾದಾತ್ಮಕ ಐಎಎಸ್ ಅಧಿಕಾರಿ...

ಆಂಧ್ರ ಪ್ರದೇಶ | ಜನನಿಬಿಡ ಮುಖ್ಯ ರಸ್ತೆಯಲ್ಲೇ ವೈಎಸ್‌ಆರ್‌ಸಿಪಿ ಯುವ ಮುಖಂಡನ ಬರ್ಬರ ಹತ್ಯೆ

ವೈಎಸ್‌ಆರ್‌ಸಿಪಿಯ ಯುವ ಮುಖಂಡನೊಬ್ಬನನ್ನು ಜನನಿಬಿಡ ರಸ್ತೆಯಲ್ಲೇ ಮಾರಕಾಸ್ತ್ರದಿಂದ ಕಡಿದು ಬರ್ಬರವಾಗಿ ಕೊಲೆ...