ವಿಸ್ತಾರ ವಿಮಾನ ಹೈಜಾಕ್ ಯೋಜನೆ | ಫೋನ್‌ನಲ್ಲಿ ಸಂಭಾಷಿಸುತ್ತಿದ್ದ ಪ್ರಯಾಣಿಕ ಬಂಧನ

Date:

  • ಮುಂಬೈನಿಂದ ದೆಹಲಿಗೆ ತೆರಳುತ್ತಿದ್ದ ವಿಮಾನ
  • ರಿತೇಶ್ ಕುಮಾರ್ ವಿರುದ್ಧ ಸಹಾರ್ ಪೊಲೀಸರು ಪ್ರಕರಣ

ವಿಸ್ತಾರ ವಿಮಾನ ಹೈಜಾಕ್ ಮಾಡುವ ಯೋಜನೆಯೊಂದು ಸಿದ್ಧವಾಗಿತ್ತು. ಆದರೆ ತಂತ್ರ ರೂಪಿಸುತ್ತಿದ್ದ ಪ್ರಯಾಣಿಕ ತಾನು ಮಾಡಿದ ಯಡವಟ್ಟಿನಿಂದ ಈಗ ಜೈಲು ಸೇರಿದ್ದಾನೆ.

- Advertisement -

ಈ ಕುತೂಹಲಕಾರಿ ಘಟನೆ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಂಬೈನಿಂದ ದೆಹಲಿಗೆ ತೆರಳುತ್ತಿದ್ದ ವಿಸ್ತಾರ ವಿಮಾನದಲ್ಲಿ ಸಂಜೆ 6.30ಕ್ಕೆ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ನಗರ ವಿಮಾನ ನಿಲ್ದಾಣದಿಂದ ಮುಂಬೈ-ದೆಹಲಿ ವಿಮಾನ ಹೊರಡುವುದಕ್ಕೂ ಮುನ್ನು ವಿಸ್ತಾರ ವಿಮಾನ ಹೈಜಾಕ್ ಮಾಡುವ ಕುರಿತು ಒಳಗಿದ್ದ 23 ವರ್ಷದ ರಿತೇಶ್ ಸಂಜಯ್ ಕುಮಾರ್ ಜುನೇಜಾ ಎಂಬ ವ್ಯಕ್ತಿ ಫೋನಿನಲ್ಲಿ ಇತರರೊಡನೆ ಸಂಭಾಷಿಸುತ್ತಿದ್ದ.

ವಿಮಾನ ಸಿಬ್ಬಂದಿ ಇದನ್ನು ಗಮನಿಸಿ ಪೊಲೀಸರಿಗೆ ದೂರು ನೀಡಿದರು. ಆಗ ಮುಂಬೈ ಪೊಲೀಸರು ಈತನನ್ನು ಬಂಧಿಸಿದ್ದಾರೆ ಎಂದು ಮಾಧ್ಯಮಗಳು ಶುಕ್ರವಾರ (ಜೂನ್ 23) ವರದಿ ಮಾಡಿವೆ.

ವಿಮಾನ ಹೈಜಾಕ್‌ ಮಾಡುವ ಬಗ್ಗೆ ವ್ಯಕ್ತಿ ಫೋನಿನಲ್ಲಿ ಮಾತನಾಡುವುದನ್ನು ವಿಮಾನದಲ್ಲಿದ್ದ ಸಿಬ್ಬಂದಿ ಮತ್ತು ಇತರರು ಕೇಳಿದ್ದಾರೆ. ಕೂಡಲೇ ವಿಮಾನ ಸಿಬ್ಬಂದಿ ಪ್ರಯಾಣಿಕನನ್ನು ವಿಮಾನದಿಂದ ಕೆಳಗೆ ಇಳಿಸಿ ಭದ್ರತಾ ಸಿಬ್ಬಂದಿಗೆ ಹಸ್ತಾಂತರಿಸಿದರು.

ಬಳಿಕ ವಿಮಾನವನ್ನು ಸಂಪೂರ್ಣವಾಗಿ ತಪಾಸಣೆ ನಡೆಸಲಾಯಿತು. ನಂತರ ಅಧಿಕಾರಿಗಳ ಸೂಚನೆ ಮೇರೆಗೆ ವಿಮಾನ ದೆಹಲಿಯತ್ತ ಪ್ರಯಾಣಿಸಿತು ಎಂದು ವರದಿಯಾಗಿದೆ.

“ವಿಮಾನ ಹೈಜಾಕ್‌ ಬಗ್ಗೆ ಒಬ್ಬ ವ್ಯಕ್ತಿ ಫೋನ್‌ನಲ್ಲಿ ಮಾತನಾಡುತ್ತಿದ್ದ. ‘ಅಹ್ಮದಾಬಾದ್‌ನಲ್ಲಿ ವಿಮಾನ ಹೊರಡಲಿದೆ. ಹೈಜಾಕ್‌ ಮಾಡುವ ಎಲ್ಲ ಯೋಜನೆ ಸಿದ್ಧವಾಗಿದೆ. ಯಾವುದಾದರೂ ತೊಂದರೆ ಎದುರಾದಲ್ಲಿ ನನಗೆ ಕರೆ ಮಾಡಿ’ ಎಂದು ಹೇಳುತ್ತಿದ್ದ ಎಂದು ಸಿಬ್ಬಂದಿ ವಿವರಿಸಿದರು” ಎಂದು ಪೊಲೀಸರು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ದೆಹಲಿ ಸುಗ್ರೀವಾಜ್ಞೆ ಕುರಿತು ಸಂಸತ್ ಅಧಿವೇಶನಕ್ಕೂ ಮುನ್ನವೇ ನಿರ್ಧಾರ: ಖರ್ಗೆ

ರಿತೇಶ್‌ ಜುನೇಹಾ ವ್ಯಕ್ತಿಯನ್ನು ಮೊದಲು ಕೇಂದ್ರ ಕೈಗಾರಿಕಾ ಭದ್ರತಾ ದಳಕ್ಕೆ (ಸಿಐಎಸ್‌ಎಫ್) ಹಸ್ತಾಂತರಿಸಲಾಗಿದ್ದು, ಬಳಿಕ ಸಿಬ್ಬಂದಿ ದೂರಿನ ಮೇರೆಗೆ ವ್ಯಕ್ತಿಯನ್ನು ಸಹರ್‌ ಪೊಲೀಸ್‌ ಠಾಣೆಗೆ ಕರೆದೊಯ್ಯಲಾಯಿತು.

ವಿಸ್ತಾರ ವಿಮಾನ ಹೈಜಾಕ್ ಘಟನೆಗೆ ಸಂಬಂಧಿಸಿ ಮುಂಬೈನ ಸಹರ್‌ ಪೊಲೀಸರು ವ್ಯಕ್ತಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 336 ಮತ್ತು 505 (2) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ. ಈ ವಿಷಯದ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...