ಹವಾಮಾನ ವೈಪರೀತ್ಯ: ಬೆಂಗಳೂರು-ನೇಪಾಳ ವಿಮಾನ ವಿಳಂಬ, ಪ್ರಯಾಣಿಕರ ಪ್ರತಿಭಟನೆ

Date:

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೇಪಾಳಕ್ಕೆ ತೆರಳುತ್ತಿದ್ದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಸುಮಾರು 18 ಗಂಟೆಗಳ ಕಾಲ ವಿಳಂಬವಾಗಿದ್ದು ಪ್ರಯಾಣಿಕರು ವಿಮಾನ ನಿಲ್ದಾಣದಲ್ಲೇ ಪ್ರತಿಭಟನೆ ನಡೆಸಿದ್ದಾರೆ, ಘೋಷಣೆ ಕೂಗಿದ್ದಾರೆ.

- Advertisement -

10 ದಿನಗಳ ನೇಪಾಳ ಪ್ರವಾಸಕ್ಕಾಗಿ ರಾಜ್ಯದಿಂದ ಹೊರಟ್ಟಿದ್ದವರು ಈ ವಿಮಾನದಲ್ಲಿ ಅಧಿಕವಾಗಿ ಟಿಕೆಟ್ ಬುಕ್ ಮಾಡಿಕೊಂಡಿದ್ದರು ಎಂದು ವರದಿಯಾಗಿದೆ. ವಿಮಾನ ತಡವಾದ ಕಾರಣ ಟರ್ಮಿನಲ್ 2ರ ಬಳಿ ಜಮಾಯಿಸಿದ ಪ್ರಯಾಣಿಕರು ವಿಮಾನಯಾನ ಸಂಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುತ್ತಿರುವುದನ್ನು ವಿಡಿಯೋಗಳಲ್ಲಿ ಕಂಡುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? ಬೆಂಗಳೂರು | ದಟ್ಟ ಮಂಜು; 41 ವಿಮಾನ ಹಾರಾಟ ವಿಳಂಬ

ಪರಿಷ್ಕೃತ ನಿರ್ಗಮನ ಸಮಯದ ಬಗ್ಗೆ ಸ್ಪಷ್ಟ ಮಾಹಿತಿಯನ್ನು ನೀಡಲು ವಿಮಾನಯಾನ ಸಂಸ್ಥೆ ವಿಫಲವಾಗಿದೆ. ಇದರಿಂದಾಗಿ ದೀರ್ಘಕಾಲ ನಾವೆಲ್ಲರೂ ಕಾಯುವಂತಾಗಿದೆ ಎಂದು ಪ್ರಯಾಣಿಕರು ಆರೋಪಿಸಿದ್ದಾರೆ.

ಗುರುವಾರ ಬೆಳಿಗ್ಗೆ 10.30ಕ್ಕೆ ಬೆಂಗಳೂರಿನಿಂದ ಕಠ್ಮಂಡುವಿಗೆ ವಿಮಾನ ಹೊರಟಿದೆ. ಆದರೆ ಪ್ರಯಾಣಿಕರಿಗೆ ಸ್ಪಷ್ಟವಾಗಿ ತಿಳಿಸದೆಯೇ ವಿಮಾನವು ಕಠ್ಮಂಡುವಿನಲ್ಲಿ ಲ್ಯಾಂಡ್ ಆಗದೆಯೇ ಹಿಂತಿರುಗಿದೆ. ಮರುದಿನ ಬೆಳಿಗ್ಗೆ ಅದೇ ವಿಮಾನವು ಟೇಕ್ ಆಫ್ ಆಗಿದೆ. ಆದರೆ ಮತ್ತೆ ಕಠ್ಮಂಡುವಿನಲ್ಲಿ ಲ್ಯಾಂಡ್ ಮಾಡಿಲ್ಲ. ಬಳಿಕ ಲಕ್ನೋಗೆ ಸಾಗಿದೆ ಎಂದು ಪ್ರಯಾಣಿಕರು ಆರೋಪಿಸಿದ್ದಾರೆ.

ದೀರ್ಘ ಕಾಲ ಕಾದು, ಆಯಾಸಗೊಂಡ ಪ್ರಯಾಣಿಕರು ವಿಮಾನದೊಳಗೆ ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರಿಗೆಯೇ ವಾಪಸ್ ಕರೆದೊಯ್ಯುವಂತೆ ಒತ್ತಾಯಿಸಿದ್ದಾರೆ. ಬೆಂಗಳೂರಿಗೆ ಹಿಂದಿರುಗಿದ ಬಳಿಕ ಪ್ರಯಾಣಿಕರು ವಿಮಾನ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಆದರೆ ಈ ವಿಳಂಬಕ್ಕೆ ‘ಕೆಟ್ಟ ಹವಾಮಾನ’ ಕಾರಣ ಎಂದು ಏರ್‌ ಇಂಡಿಯಾ ಎಕ್ಸ್‌ಪ್ರೆಸ್ ಹೇಳಿದೆ.

“ಕಠ್ಮಂಡುವಿನಲ್ಲಿ ಪ್ರತಿಕೂಲ ಹವಾಮಾನವಿದ್ದು ಫೆಬ್ರವರಿ 26 ಮತ್ತು 27 ರಂದು ನಮ್ಮ ಬೆಂಗಳೂರು-ಕಠ್ಮಂಡು ವಿಮಾನಗಳನ್ನು ಬೇರೆಡೆಗೆ ಹಾರಬೇಕಾಯಿತು. ನಿನ್ನೆ ಸೇವೆಯಲ್ಲಿ ವ್ಯತ್ಯಯವಾದ ಕಾರಣ ಇಂದು ವಿಮಾನ ವ್ಯವಸ್ಥೆ ಮಾಡಿದರೆ, ಅದೇ ಸಮಸ್ಯೆ ಉಂಟಾಗಿದೆ” ಎಂದು ಸಂಸ್ಥೆ ತಿಳಿಸಿದೆ.

“ಪ್ರಯಾಣಿಕರಿಗೆ ಹೋಟೆಲ್ ವಸತಿ ಕಲ್ಪಿಸಲಾಗಿದೆ. ಪೂರ್ಣ ಮರುಪಾವತಿಯ ಆಯ್ಕೆಯ್ನೂ ನೀಡಲಾಗಿದೆ. ನಾಳೆ ಮತ್ತೆ ನೇಪಾಳಕ್ಕೆ ವಿಮಾನ ನಿಗದಿಪಡಿಸಲಾಗುವುದು. ಅನಾನುಕೂಲತೆಗೆ ನಾವು ವಿಷಾದಿಸುತ್ತೇವೆ” ಎಂದು ವಿಮಾನಯಾನ ವಕ್ತಾರರು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ ವರದಿ | ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಅ.22ರವರೆಗೆ ಮಳೆ

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆ ಮುಂದುವರಿಯುವ...

ಬೀಳಗಿ | ಬೆಳೆ ಉಳಿಸಲು ಘಟಪ್ರಭಾ ಎಡದಂಡೆ ಕಾಲುವೆಯ ಕೊನೆಯವರೆಗೆ ನೀರು ಹರಿಸಿ: ಭಾರತೀಯ ಕಿಸಾನ್‌ ಸಂಘ ಆಗ್ರಹ

ಘಟಪ್ರಭಾ ಮತ್ತು ಕೃಷ್ಣಾ ನದಿಗಳಲ್ಲಿ ಸಾಕಷ್ಟು ನೀರಿದ್ದರೂ ಘಟಪ್ರಭಾ ಎಡದಂಡೆ ಕಾಲುವೆಯ...

ಈ ದಿನ ಸಂಪಾದಕೀಯ | ಅಂಕಿತಾ ಹತ್ಯೆ ಶಂಕಿತರಿಗೆ ಸಾಂವಿಧಾನಿಕ ಹುದ್ದೆ ಸರಿಯೇ?

ಅಂಕಿತಾ ಭಂಡಾರಿ ಕೊಲೆ ಪ್ರಕರಣದಲ್ಲಿದ್ದ ವಿಐಪಿ ದುಶ್ಯಂತ್‌ ಅವರ ಮೇಲಿನ...

‘ಮೋದಿಯನ್ನು ದೇವರನ್ನಾಗಿಸುವ ಯತ್ನ’: ಬಿಹಾರ ಸಿಎಂ ಹೇಳಿಕೆಗೆ ಪ್ರಶಾಂತ್ ಕಿಶೋರ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನಿಗೂ ಮನೆ ಒದಗಿಸಿದರು ಎಂಬ ಬಿಹಾರ...