ಒಂದೇ ತಾಸಿನಲ್ಲಿ ನಾಲ್ಕು ಏರ್‌ ಇಂಡಿಯಾ ಯಾನ ರದ್ದು: ಕಾರಣ ತಿಳಿಸದ ಸಂಸ್ಥೆ ವಿರುದ್ಧ ಆಕ್ರೋಶ

Date:

ದೆಹಲಿ ವಿಮಾನ ನಿಲ್ದಾಣದಲ್ಲಿ ಒಂದು ಗಂಟೆಯಲ್ಲೇ ನಾಲ್ಕು ವಿಮಾನಯಾನಗಳನ್ನು ಏರ್ ಇಂಡಿಯಾ ಸಂಸ್ಥೆ ರದ್ದುಗೊಳಿಸಿದ್ದು, ಸಂಸ್ಥೆ ಯಾವುದೇ ಕಾರಣ ನೀಡದಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ವಿಮಾನ ನಿಲ್ದಾಣದಲ್ಲೇ ಪ್ರಯಾಣಿಕರು ಏರ್‌ ಇಂಡಿಯಾ ಸಂಸ್ಥೆ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟನೆಗೆ ಇಳಿದಿದ್ದಾರೆ.

- Advertisement -

ಇತ್ತೀಚೆಗೆ ಇಂಡಿಗೋ ಸಂಸ್ಥೆಯು ಸಿಬ್ಬಂದಿ ಕೊರತೆ ಕಾರಣ ನೀಡಿ ಹಲವು ವಿಮಾನಗಳನ್ನು ರದ್ದುಗೊಳಿಸಿತ್ತು. ಇದು ಸಾವಿರಾರು ಪ್ರಯಾಣಿಕರ ಮೇಲೆ ಪ್ರಭಾವ ಬೀರಿತ್ತು. ಇದೀಗ ಏರ್ ಇಂಡಿಯಾ ಕೂಡಾ ದೆಹಲಿಯಲ್ಲಿ ಒಂದಾದ ಬಳಿಕ ಒಂದು ವಿಮಾನಯಾನ ರದ್ದುಗೊಳಿಸುತ್ತಿದ್ದು, ಅದಕ್ಕೆ ಸರಿಯಾದ ಕಾರಣವನ್ನೂ ನೀಡುತ್ತಿಲ್ಲ ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? ದೆಹಲಿ ವಿಮಾನ ನಿಲ್ದಾಣದ ಸುತ್ತ ಆವರಿಸಿದ ಮಂಜು: 40 ವಿಮಾನಯಾನ ರದ್ದುಗೊಳಿಸಿದ ಏರ್ ಇಂಡಿಯಾ

ಈ ಬಗ್ಗೆ ಈದಿನ ಡಾಟ್‌ ಕಾಮ್‌ಗೆ ಪ್ರತಿಕ್ರಿಯಿಸಿರುವ ಜನಸ್ಪಂದನಾ ಟ್ರಸ್ಟ್ ಅಧ್ಯಕ್ಷ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟೂಡಾ ಶಶಿಧರ್ (ಶಶಿಧರ್ ತಿಪಟೂರು), “ಕಳೆದ ಒಂದು ಗಂಟೆಯಲ್ಲಿ ನಾಲ್ಕು ವಿಮಾನಯಾನ ರದ್ದುಗೊಳಿಸಲಾಗಿದೆ. ಬೆಂಗಳೂರಿನ ಎರಡು ಮತ್ತು ಹೈದಾರಾಬಾದ್, ಪುಣೆಯ ತಲಾ ಒಂದು ವಿಮಾನಯಾನ ರದ್ದುಗೊಳಿಸಲಾಗಿದೆ” ಎಂದು ತಿಳಿಸಿದ್ದಾರೆ.

ಮುಂಜಾನೆಯೇ ಮಂಜು ಆವರಿಸಿರುವ ಕಾರಣ ನೀಡಿ ಏರ್ ಇಂಡಿಯಾ 40 ವಿಮಾನಯಾನಗಳನ್ನು ರದ್ದುಗೊಳಿಸಿತ್ತು. ಈ ಬಗ್ಗೆಯೂ ಪ್ರತಿಕ್ರಿಯಿಸಿದ ಶಶಿಧರ್ ಅವರು, “ಮುಂಜಾನೆ ಮಂಜಿನ ಕಾರಣ 40 ವಿಮಾನಯಾನಗಳನ್ನು ರದ್ದುಗೊಳಿಸಿದೆ. ಆದರೆ ಈಗ ಸರಿಯಾದ ಕಾರಣವನ್ನೇ ನೀಡುತ್ತಿಲ್ಲ. ನಾನು 7:30 ಗಂಟೆಗೆ ವಿಮಾನ ಹತ್ತಬೇಕಾಗಿತ್ತು. ಆದರೆ ಇನ್ನೂ ಕಾಯುತ್ತಿರುವೆ. ವಿಮಾನ ರದ್ದಾಗಿದೆಯೇ ಅಥವಾ ಇನ್ನಷ್ಟೂ ವಿಳಂಬವಾಗುತ್ತದೆಯೇ ಎಂಬ ಪ್ರಶ್ನೆಗೆ ಮಾಹಿತಿಯೇ ನೀಡುತ್ತಿಲ್ಲ” ಎಂದು ಹೇಳಿದ್ದಾರೆ.

ದೆಹಲಿ ವಿಮಾನ ನಿಲ್ದಾಣದ ಸುತ್ತ ಸೋಮವಾರ ದಟ್ಟವಾದ ಮಂಜು ಆವರಿಸಿದ್ದು ಅನೇಕ ವಿಮಾನಗಳ ಕಾರ್ಯಾಚರಣೆಯ ಮೇಲೆ ಪರಿಣಾಮ ಬೀರಿದೆ. ಸೋಮವಾರ ದೆಹಲಿಗೆ ಮತ್ತು ಅಲ್ಲಿಂದ ಹೊರಡುವ 40 ವಿಮಾನಯಾನಗಳನ್ನು ರದ್ದುಗೊಳಿಸುವುದಾಗಿ ಏರ್ ಇಂಡಿಯಾ ಘೋಷಿಸಿದೆ. ಈ ನಡುವೆ ಕೆಲವು ವಿಮಾನಗಳು ವಿಳಂಬವಾಗಬಹುದು ಎಂದು ಇಂಡಿಗೋ ಕೂಡಾ ಹೇಳಿದೆ. ಆದರೆ ಇದೀಗ ಏರ್‌ ಇಂಡಿಯಾ ಯಾವ ಕಾರಣಕ್ಕೆ ವಿಮಾನ ರದ್ದುಗೊಳಿಸಿದೆ ಎಂಬುದು ಸ್ಪಷ್ಟವಾಗಿಲ್ಲ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...