ಜಾಹೀರಾತು ಪ್ರಕರಣ | ಸುಪ್ರೀಂ ಕೋರ್ಟ್‌ ಆದೇಶ ಉಲ್ಲಂಘನೆ ಮುಂದುವರಿಸಿದ ಪತಂಜಲಿ ಆಯುರ್ವೇದ

Date:

ತಪ್ಪುದಾರಿಗೆಳೆಯುವ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದಕ್ಕಾಗಿ ಸುಪ್ರೀಂ ಕೋರ್ಟ್‌ನಿಂದ ವಾಕ್‌ ಪ್ರಹಾರಕ್ಕೆ ಗುರಿಯಾದರೂ ಕೂಡಾ ಯೋಗ ಗುರು ಬಾಬಾ ರಾಮ್‌ದೇವ್ ಅವರ ಪತಂಜಲಿ ಆಯುರ್ವೇದ್ ಇನ್ನೂ ಕೂಡಾ ಸುಪ್ರೀಂ ಕೋರ್ಟ್‌ ಆದೇಶ ಉಲ್ಲಂಘನೆ ಮುಂದುವರಿಸಿದೆ. ಕಾನೂನು ಪ್ರಕಾರ ಕೆಲವು ಕಾಯಿಲೆಗಳಿಗೆ ಔಷಧಿಯ ಜಾಹೀರಾತು ನೀಡುವಂತಿಲ್ಲ. ಆದರೆ ಪತಂಜಲಿ ಜಾಹೀರಾತು ನೀಡಿ ಈ ಕಾನೂನನ್ನು ನಿರಂತರವಾಗಿ ಉಲ್ಲಂಘಿಸುತ್ತಿದೆ.

- Advertisement -

ಪತಂಜಲಿ ಆಯುರ್ವೇದ್ ಜುಲೈ 9ರಂದು ಅಮಾನತುಗೊಳಿಸಿರುವ 14 ಆಯುರ್ವೇದ ಔಷಧಿಗಳ ಎಲ್ಲಾ ಜಾಹೀರಾತುಗಳನ್ನು ತೆಗೆದುಹಾಕಲಾಗುವುದು ಮತ್ತು ಹಿಂಪಡೆಯಲಾಗುವುದು ಎಂದು ಉತ್ತರಾಖಂಡದ ಡೆಹ್ರಾರೂನ್‌ನಲ್ಲಿ ರಾಜ್ಯ ಪರವಾನಗಿ ಪ್ರಾಧಿಕಾರಕ್ಕೆ ಭರವಸೆ ನೀಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಆದರೆ ಪತಂಜಲಿ ದೃಷ್ಟಿ ಐ ಡ್ರಾಪ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ, ವಿಶೇಷವಾಗಿ ಎಕ್ಸ್‌ನಲ್ಲಿ (ಈ ಹಿಂದಿನ ಟ್ವಿಟ್ಟರ್) ಪತಂಜಲಿ ಆಯುರ್ವೇದ್ ಎರಡು ಬಾರಿ ನಿಯಮವನ್ನು ಉಲ್ಲಂಘಿಸಿದೆ. ಮೊದಲು 2023ರ ನವೆಂಬರ್‌ನಲ್ಲಿ ಮತ್ತು ಅದಾದ ಬಳಿಕ 2024ರ ಜುಲೈ 9ರಂದು ಕಾನೂನು ಉಲ್ಲಂಘಿಸಿದೆ ಎಂದು ಕೇರಳ ಮೂಲದ ಆರ್‌ಟಿಐ ಕಾರ್ಯಕರ್ತ ಕೆ.ವಿ. ಬಾಬು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಟ್ರೇಡ್‌ಮಾರ್ಕ್ ಪ್ರಕರಣ | 50 ಲಕ್ಷ ರೂ. ಪಾವತಿಸಲು ಪತಂಜಲಿಗೆ ಬಾಂಬೆ ಹೈಕೋರ್ಟ್ ಆದೇಶ

ಈ ಬಗ್ಗೆ ಜುಲೈ 12ರಂದು ಆರ್‌ಟಿಐ ಕಾರ್ಯಕರ್ತ ಕೆ.ವಿ. ಬಾಬು ಅವರು ಉತ್ತರಾಖಂಡ ರಾಜ್ಯ ಪರವಾನಗಿ ಪ್ರಾಧಿಕಾರಕ್ಕೆ (ಎಸ್‌ಎಲ್‌ಎ) ದೂರು ಸಲ್ಲಿಸಿದ್ದಾರೆ. “ನನ್ನ ದೂರಿನ ಆಧಾರದ ಮೇಲೆ, ಎಸ್‌ಎಲ್‌ಎ ಜುಲೈ 15ರಂದು ಹರಿದ್ವಾರದ ಡ್ರಗ್ ಇನ್‌ಸ್ಪೆಕ್ಟರ್‌ಗೆ ಕ್ರಮಕೈಗೊಳ್ಳಲು ಸೂಚಿಸಿದೆ. ಈ ಹಿಂದಿನ ಜಾಹೀರಾತುಗಳನ್ನು ಅಳಿಸಿದರೂ ಕೂಡಾ ಸುಪ್ರೀಂಗೆ ನೀಡಿದ ಭರವಸೆಯನ್ನು ನೇರವಾಗಿ ಉಲ್ಲಂಘಿಸಿ ಮತ್ತೆ ಜಾಹೀರಾತು ಪ್ರಕಟಿಸಲಾಗಿದೆ” ಎಂದು ಆರೋಪಿಸಿದ್ದಾರೆ.

ಜುಲೈ 18ರಂದು ಮತ್ತೆ ಎಸ್‌ಎಲ್‌ಎಗೆ ದೂರು ನೀಡಿದ್ದೇನೆ. ಈ ವಿಡಿಯೋದಲ್ಲಿ ದೃಷ್ಟಿ ಐ ಡ್ರಾಪ್‌ ಯಾವುದೇ ಕಣ್ಣಿನ ಸಮಸ್ಯೆಗೆ ಪರಿಣಾಮಕಾರಿಯಾದ ಆಯುರ್ವೇದ ಔಷಧಿಯಾಗಿದ್ದು ಬಳಸಲು ಸುರಕ್ಷಿತವಾಗಿದೆ ಎಂದು ಹೇಳಿಕೊಳ್ಳಲಾಗಿದೆ. ಜೊತೆಗೆ ರಾಮ್‌ದೇವ್ ಅವರು ಔಷಧಿ ಪ್ರಚಾರ ಮಾಡುವ ವಿಡಿಯೋ ಇದೆ ಎಂದು ದೂರಿದ್ದಾರೆ.

ಪತಂಜಲಿ ಆಯುರ್ವೇದ್‌ನ ಅಧಿಕೃತ ಹ್ಯಾಂಡಲ್‌ನಿಂದ ಇತ್ತೀಚೆಗೆ ಮಾಡಲಾದ ಎಕ್ಸ್‌ ಪೋಸ್ಟ್‌ನಲ್ಲಿ “ಗ್ಲುಕೋಮಾ ಅಥವಾ ಕಣ್ಣಿನ ಪೊರೆ, ರೆಟಿನೈಟಿಸ್ ಪಿಗ್ಮೆಂಟೋಸಾ, ರಾತ್ರಿ ಕುರುಡುತನಕ್ಕೆ ಚಿಕಿತ್ಸೆ ನೀಡಲು ಪತಂಜಲಿ ಆಯುರ್ವೇದ್‌ನ ಐ ಡ್ರಾಪ್ ಸಹಾಯ ಮಾಡುತ್ತದೆ” ಎಂದು ಹೇಳಲಾಗಿದೆ. ಸದ್ಯ ಹ್ಯಾಂಡಲ್‌ನಲ್ಲಿ ಈ ಜಾಹೀರಾತು ಕಾಣುತ್ತಿಲ್ಲ.

ನೇತ್ರತಜ್ಞರಾಗಿರುವ ಬಾಬು, ಚಿಕಿತ್ಸೆ ನೀಡಬಹುದಾದ ಪರಿಸ್ಥಿತಿಗಳಿಗೆ ಸರಿಯಾಗಿ ಐ ಡ್ರಾಪ್ಸ್‌ಗಳನ್ನು ನೀಡದಿರುವುದು ಕುರುಡುತನಕ್ಕೆ ಕಾರಣವಾಗಬಹುದು ಎಂದು ಹೇಳಿದ್ದಾರೆ. ಹಾಗೆಯೇ ಅನೇಕ ವೈದ್ಯರು ಪತಂಜಲಿ ಐ ಡ್ರಾಪ್ ಅನ್ನು ಬಳಸದಂತೆ ಸಲಹೆ ನೀಡಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...