ಪತಂಜಲಿ ಬಾಬಾ ರಾಮ್‌ದೇವ್ ಬಂಧನಕ್ಕೆ ವಾರಂಟ್‌ ಜಾರಿ

Date:

ಸ್ವಯಂ ಘೋಷಿತ ಯೋಗ ಗುರು ಬಾಬಾ ರಾಮ್‌ದೇವ್ ಮತ್ತು ಅವರ ಸಹಚರ ಆಚಾರ್ಯ ಬಾಲಕೃಷ್ಣ ವಿರುದ್ಧ ಕೇರಳ ನ್ಯಾಯಾಲಯವು ಬಂಧನ ವಾರಂಟ್ ಹೊರಡಿಸಿದೆ.

- Advertisement -

ರಾಮ್‌ದೇವ್ ಅವರ ಪತಂಜಲಿ ಆಯುರ್ವೇದ ಬ್ರಾಂಡ್‌ನ ಪ್ರಚಾರಕ್ಕಾಗಿ ತಪ್ಪು ದಾರಿಗೆಳೆಯುವ ಜಾಹೀರಾತುಗಳನ್ನು ನೀಡಿದ್ದಕ್ಕಾಗಿ ಅವರ ವಿರುದ್ಧ ಕೇರಳ ಔಷಧ ನಿಯಂತ್ರಕರು ದೂರು ದಾಖಲಿಸಿದೆ. ಅವರ ದೂರಿನ ವಿಚಾರಣೆ ನಡೆಸಿರುವ ಕೇರಳದ ಪಾಲಕ್ಕಾಡ್ ಜಿಲ್ಲಾ ನ್ಯಾಯಾಲಯವು ಜಾಮೀನು ನೀಡಬಹುದಾದ ಬಂಧನ ವಾರಂಟ್ ಹೊರಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಕಣ್ಣೂರು ಮೂಲದ ನೇತ್ರಶಾಸ್ತ್ರಜ್ಞ ಕೆ.ವಿ. ಬಾಬು ಅವರು ಪತಂಜಲಿ ವಿರುದ್ಧ 2023ರ ನವೆಂಬರ್‌ನಲ್ಲಿ ಹಲವಾರು ದೂರುಗಳನ್ನು ಸಲ್ಲಿಸಿದ್ದರು. ಅವರ ದೂರನ್ನು ಪರಿಶೀಲಿಸಿದ್ದ ಕೇರಳದ ಔಷಧ ನಿಯಂತ್ರಣ ಇಲಾಖೆಯು ರಾಮ್‌ದೇವ್ ಅವರು ತಮ್ಮ ಪತಂಜಲಿ ಆಯುರ್ವೇದ ಉತ್ಪನ್ನಗಳ ಪ್ರಚಾರ ಜಾಹೀರಾತುಗಳಲ್ಲಿ ‘ಔಷಧಗಳು ಮತ್ತು ಮ್ಯಾಜಿಕ್ ಪರಿಹಾರಗಳು (ಆಕ್ಷೇಪಾರ್ಹ ಜಾಹೀರಾತುಗಳು) ಕಾಯ್ದೆ-1954’ಅನ್ನು ಉಲ್ಲಂಘಿಸಲಾಗಿದೆ ಎಂಬುದನ್ನು ಕಂಡುಕೊಂಡಿತ್ತು. ಪತಂಜಲಿ ವಿರುದ್ಧ ಕಾನೂನು ಕ್ರಮಗಳನ್ನು ಕೈಗೊಳ್ಳಲು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿತ್ತು.

ಕೆಲವು ಪತಂಜಲಿ ಆಯುರ್ವೇದ ಉತ್ಪನ್ನಗಳು ಅಧಿಕ ರಕ್ತದೊತ್ತಡ ಮತ್ತು ಮಧುಮೇಹದಂತಹ ಕಾಯಿಲೆಗಳನ್ನು ಗುಣಪಡಿಸುತ್ತವೆ ಎಂದು ಜಾಹೀರಾತುಗಳಲ್ಲಿ ಹೇಳಲಾಗಿತ್ತು. ಆದಾಗ್ಯೂ, ಅಂತಹ ಜಾಹೀರಾತುಗಳನ್ನು ಡಿಎಂಆರ್ ಕಾಯ್ದೆಯಡಿಯಲ್ಲಿ ನಿಷೇಧಿಸಲಾಗಿದೆ ಎಂದು ಇಲಾಖೆ ತಿಳಿಸಿದೆ.

ದಾರಿ ತಪ್ಪಿಸುವ ಜಾಹೀರಾತುಗಳ ವಿರುದ್ಧ ಕ್ರಮ ಕೈಗೊಳ್ಳಲು ವಿಫಲವಾದರೆ ಅಂತಹ ಸರ್ಕಾರಗಳ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ ಕೈಗೊಳ್ಳುವುದಾಗಿ ಸುಪ್ರೀಂ ಕೋರ್ಟ್ ಇತ್ತೀಚೆಗೆ ಎಚ್ಚರಿಕೆ ನೀಡಿತ್ತು. ಈ ಬೆನ್ನಲ್ಲೇ, ಪಾಲಕ್ಕಾಡ್ ನ್ಯಾಯಾಲಯದಿಂದ ಬಂಧನ ವಾರಂಟ್ ಜಾರಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...