ಪತಂಜಲಿ ರಾಮ್‌ದೇವ್‌ಗೆ ಮತ್ತೆ ಮುಖಭಂಗ: ಮಾರುಕಟ್ಟೆಯಿಂದ ಮೆಣಸಿನಕಾಯಿ ಪುಡಿ ಔಟ್‌

Date:

ಸ್ವದೇಶಿ ಉತ್ಪನ್ನಗಳ ಹೆಸರಿನಲ್ಲಿ ಭಾರತೀಯ ಮಾರುಕಟ್ಟೆಗೆ ಬಂದಿದ್ದ ಬಾಬಾ ರಾಮ್‌ದೇವ್ ಅವರ ಪತಂಜಲಿ ಬ್ರಾಂಡ್‌ನ ಆಹಾರ ಉತ್ಪನ್ನಗಳು ಆಹಾರ ಸುರಕ್ಷತಾ ಮಾನದಂಡಗಳನ್ನು ಪಾಲಿಸುವಲ್ಲಿ ವಿಫಲವಾಗಿವೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ, ಪತಂಜಲಿ ಫುಡ್ಸ್ ಲಿಮಿಟೆಡ್‌ ಉತ್ಪಾದಿಸಿದ್ದ ಕೆಂಪು ಮೆಣಸಿನಕಾಯಿ ಪುಡಿಯನ್ನು ಮಾರುಕಟ್ಟೆಯಿಂದ ಹಿಂಪಡೆಯುವಂತೆ ಆಹಾರ ನಿಯಂತ್ರಣ ಪ್ರಾಧಿಕಾರ ಎಫ್ಎಸ್ಎಸ್ಎಐ ನಿರ್ದೇಶನ ನೀಡಿದೆ. ಅದರಂತೆ, 4 ಟನ್ ಮೆಣಸಿನಕಾಯಿ ಪುಡಿಯನ್ನು ಮಾರುಕಟ್ಟೆಯಿಂದ ಪತಂಜಲಿ ಪಡೆಯಲಿದೆ.

- Advertisement -

ಪತಂಜಲಿ ಬ್ರಾಂಡ್‌ನ 200 ಗ್ರಾಮ್‌ ತೂಕದ ಮೆಣಸಿನಕಾಯಿ ಪುಡಿಯ ಪ್ಯಾಕೆಟ್‌ಗಳನ್ನು ಪ್ರಯೋಗಾಲಯದ ಪರೀಕ್ಷೆಗೆ ಒಳಪಡಿಸಲಾಗಿದೆ. ವರದಿಯಲ್ಲಿ ಪತಂಜಲಿ ಉತ್ಪನ್ನಗಳು ಆಹಾರ ಸುರಕ್ಷತಾ ಮಾನದಂಡಗಳನ್ನು ಉಲ್ಲಂಘಿಸಿವೆ. ನಿಗದಿ ಮಾಡಲಾಗಿರುವ ಗರಿಷ್ಠ ಪ್ರಮಾಣದ ಕೀಟನಾಶಕ ಉಳಿಕೆ ಪ್ರಮಾಣಕ್ಕಿಂತ ಹೆಚ್ಚು ಪ್ರಮಾಣದ ಕೀಟನಾಶಕ ಉಳಿಕೆಗಳು ಪತಂಜಲಿ ಉತ್ಪನ್ನಗಳಲ್ಲಿ ಕಂಡುಬಂದಿವೆ ಎಂದು ಭಾರತೀಯ ಆಹಾರ ಪ್ರಮಾಣೀಕರಣ ಮತ್ತು ಸುರಕ್ಷತಾ ಪ್ರಾಧಿಕಾರ (ಎಫ್ಎಸ್ಎಸ್ಎಐ) ಹೇಳಿದೆ. ಹೀಗಾಗಿ, ಪತಂಜಲಿಯ ಮೆಣಸಿನಕಾಯಿ ಪುಡಿಯನ್ನು ಮಾರುಕಟ್ಟೆಯಿಂದ ಹಿಂಪಡೆಯುವಂತೆ ನಿರ್ದೇಶನ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಎಫ್ಎಸ್ಎಸ್ಎಐ ಸೂಚನೆಯಂತೆ 4 ಟನ್ ನಷ್ಟು ಕೆಂಪು ಮೆಣಸಿನಕಾಯಿ ಪುಡಿಯನ್ನು ಮಾರುಕಟ್ಟೆಯಿಂದ ಹಿಂಪಡೆದಯಲಾಗುತ್ತಿದೆ. ಗ್ರಾಹಕರು ಆ ಉತ್ಪನ್ನಗಳಲ್ಲಿ ಮರಳಿಸಬೇಕು. ಮರಳಿಸಲಾದ ಉತ್ಪನ್ನಗಳ ಸಂಪೂರ್ಣ ಹಣವನ್ನು ಮರುಪಾವತಿ ಮಾಡಲಾಗುತ್ತದೆ” ಎಂದು ಪತಂಜಲಿ ಫುಡ್ಸ್ ಲಿಮಿಟೆಡ್ ಕಂಪನಿಯ ಸಿಇಒ ಸಂಜೀವ್ ಅಸ್ಥಾನಾ ತಿಳಿಸಿದ್ದಾರೆ.

ಇತ್ತೀಚೆಗೆ, ಪತಂಜಲಿ ಆಯುರ್ವೇದ ಬ್ರಾಂಡ್‌ನ ಪ್ರಚಾರಕ್ಕಾಗಿ ತಪ್ಪು ದಾರಿಗೆಳೆಯುವ ಜಾಹೀರಾತುಗಳನ್ನು ನೀಡಿದ್ದಕ್ಕಾಗಿ ಅವರ ವಿರುದ್ಧ ಕೇರಳ ಔಷಧ ನಿಯಂತ್ರಕರು ದೂರು ದಾಖಲಿಸಿದೆ. ಅವರ ದೂರಿನ ವಿಚಾರಣೆ ನಡೆಸಿರುವ ಕೇರಳದ ಪಾಲಕ್ಕಾಡ್ ಜಿಲ್ಲಾ ನ್ಯಾಯಾಲಯವು ರಾಮ್‌ದೇವ್ ವಿರುದ್ಧ ಜಾಮೀನು ನೀಡಬಹುದಾದ ಬಂಧನ ವಾರಂಟ್ ಹೊರಡಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...