ಸೈಫ್‌ ಅಲಿ ಖಾನ್ ಕುಟುಂಬಕ್ಕೆ ಸೇರಿದ 15 ಸಾವಿರ ಕೋಟಿ ಮೌಲ್ಯದ ಆಸ್ತಿ ಕೇಂದ್ರದ ಪಾಲಾಗುವ ಸಾಧ್ಯತೆ?

Date:

ಬಾಲಿವುಡ್ ನಟ ಸೈಫ್‌ ಅಲಿ ಖಾನ್ ಅವರು ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಅವರ ಕುಟುಂಬಕ್ಕೆ ಸೇರಿದ ಮಧ್ಯ ಪ್ರದೇಶದಲ್ಲಿರುವ 15 ಸಾವಿರ ಕೋಟಿ ರೂ. ಮೌಲ್ಯದ ಆಸ್ತಿಗಳು ಶೀಘ್ರವೇ ಕೇಂದ್ರ ಸರ್ಕಾರದ ನಿಯಂತ್ರಣಕ್ಕೆ ಬರುವ ಸಾಧ್ಯತೆ ಹೆಚ್ಚಾಗಿದೆ.

- Advertisement -

ಈ ಆಸ್ತಿಗಳ ಮೇಲೆ 2015 ರಲ್ಲಿ ವಿಧಿಸಲಾಗಿದ್ದ ತಡೆಯಾಜ್ಞೆಯನ್ನು ಮಧ್ಯಪ್ರದೇಶ ಹೈಕೋರ್ಟ್‌ ತೆಗೆದುಹಾಕಿದೆ. ಇದರಿಂದಾಗಿ 1968ರ ಶತ್ರು ಆಸ್ತಿ ಕಾಯ್ದೆಯ ಅಡಿಯಲ್ಲಿ ಅವುಗಳನ್ನು ಸ್ವಾಧೀನಪಡಿಸಿಕೊಳ್ಳುವ ಸಾಧ್ಯತೆಯಿದೆ. 1968ರ ಶತ್ರು ಆಸ್ತಿ ಕಾಯ್ದೆಯ ಪ್ರಕಾರ, 1947 ರ ವಿಭಜನೆಯ ನಂತರ ಪಾಕಿಸ್ತಾನಕ್ಕೆ ವಲಸೆ ಹೋದ ವ್ಯಕ್ತಿಗಳ ಒಡೆತನದ ಆಸ್ತಿಯನ್ನು ಕೇಂದ್ರ ಸರ್ಕಾರವು ಹಕ್ಕು ಸಾಧಿಸಬಹುದಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ಅಸುರಕ್ಷತೆಯ ತಾಣವಾದ ರೈಲ್ವೆ ನಿಲ್ದಾಣ: ಪ್ರಯಾಣಿಕರ...

ಕುಡಿಯುವ ನೀರಿಲ್ಲದಿರುವುದು, ಹಾಳಾದ ಶೌಚಾಲಯಗಳು, ರಾತ್ರಿ ವೇಳೆ ಬೀದಿದೀಪ ಹಾಗೂ ಕಾವಲುಗಾರರ ಕೊರತೆಯಿಂದಾಗಿ ಈ ನಿಲ್ದಾಣವು ನಿರ್ಜನ ಪ್ರದೇಶದಂತೆ ಭಾಸವಾಗುತ್ತಿದೆ. ಇದರೊಂದಿಗೆ ಕಳ್ಳತನ, ಅನೈತಿಕ ಚಟುವಟಿಕೆಗಳು ಹೆಚ್ಚಾಗಿರುವುದು ಜೊತೆಗೆ ಸಿಸಿಟಿವಿ ಕ್ಯಾಮೆರಾಗಳೂ ಇಲ್ಲದಿರುವುದು...

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ಡಿ. 13 ರಂದು ಈ ಪ್ರಕರಣದ ವಿಚಾರಣೆ ನಡೆಸಿದ್ದ ಕೋರ್ಟ್‌, 2017ರ ತಿದ್ದುಪಡಿ ಮಾಡಿದ ಶತ್ರು ಆಸ್ತಿ ಕಾಯ್ದೆ ಅಡಿ ಶಾಸನಬದ್ಧ ಪರಿಹಾರವಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 30 ದಿನಗಳ ಪ್ರಾತಿನಿಧ್ಯ ಸಲ್ಲಿಸಬೇಕೆಂದು ಪಟೌಡಿ ಕುಟುಂಬಕ್ಕೆ ಸೂಚಿಸಿತ್ತು. ಇಂದಿನಿಂದ ಈ ಆದೇಶಕ್ಕೆ ಸಂಬಂಧಿಸಿಂತೆ 30 ದಿನಗಳ ಒಳಗಡೆ ಮೇಲ್ಮನವಿ ಸಲ್ಲಿಸದಿದ್ದರೆ ಕೋರ್ಟ್‌ ಆದೇಶ ಪ್ರಕಟಿಸುವುದಿಲ್ಲ. ಒಂದು ವೇಳೆ ಸಲ್ಲಿಸದಿದ್ದರೆ ಕೋರ್ಟ್‌ ತನ್ನದೇ ಆದ ಅರ್ಹತೆಯ ಆಧಾರದ ಮೇಲೆ ಮೇಲ್ಮನವಿಯನ್ನು ಪರಿಗಣಿಸುತ್ತದೆ ಎಂದು ಹೇಳಿತ್ತು. ಇಲ್ಲಿಯವರೆಗೆ ಪಟೌಡಿ ಕುಟುಂಬಸ್ಥರು ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರಾ ಎಂಬುದರ ಬಗ್ಗೆ ಮಾಹಿತಿಯಿಲ್ಲ.

ಭೋಪಾಲ್ ಜಿಲ್ಲಾಧಿಕಾರಿ ಕೌಶಲೇಂದ್ರ ವಿಕ್ರಮ್ ಸಿಂಗ್ ಅವರು ಈ ವಿಷಯದ ಬಗ್ಗೆ ಹೈಕೋರ್ಟ್ ಆದೇಶ ಸ್ಪಷ್ಟವಾದ ನಂತರವೇ ಯಾವುದೇ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಸೈಫ್ ಅಲಿ ಖಾನ್ ತಮ್ಮ ಬಾಲ್ಯವನ್ನು ಕಳೆದ ಮಧ್ಯ ಪ್ರದೇಶದ ಫ್ಲ್ಯಾಗ್ ಸ್ಟಾಫ್ ಹೌಸ್, ನೂರ್-ಉಸ್-ಸಬಾ ಅರಮನೆ, ದಾರ್-ಉಸ್-ಸಲಾಮ್, ಹಬೀಬಿಯ ಬಂಗಲೆ, ಅಹಮದಾಬಾದ್ ಅರಮನೆ, ಕೊಹೆಫಿಜಾ ಆಸ್ತಿ ಪರಿಶೀಲನೆಯಲ್ಲಿರುವ ಪ್ರಮುಖ ಆಸ್ತಿಗಳಾಗಿವೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕುಸಿಯುತ್ತಿರುವ ಸಾಮ್ರಾಜ್ಯದ ಹೊಸ ಅಧಿಪತಿ ಡೊನಾಲ್ಡ್ ಟ್ರಂಪ್

ಪಾಕಿಸ್ತಾನದಲ್ಲೂ ಭಾರತೀಯ ಪ್ರಜೆಗಳಿಗೆ ಸೇರಿದ್ದ ಆಸ್ತಿಗಳಿದ್ದವು. ಅಲ್ಲಿನ ಸರ್ಕಾರವು ಈಗಾಗಲೇ ಅವುಗಳನ್ನು ವಿಲೇವಾರಿ ಮಾಡಿ ತನ್ನ ವಶಕ್ಕೆ ಪಡೆದಿದೆ.

1947 ರಲ್ಲಿ, ಭೋಪಾಲ್ ರಾಜಪ್ರಭುತ್ವದ ರಾಜ್ಯವಾಗಿತ್ತು ಮತ್ತು ಅದರ ಕೊನೆಯ ನವಾಬ್, ನವಾಬ್ ಹಮೀದುಲ್ಲಾ ಖಾನ್
1950 ರಲ್ಲಿ ಪಾಕಿಸ್ತಾನಕ್ಕೆ ವಲಸೆ ಹೋಗಿದ್ದರು. ಮನ್ಸೂರ್ ಅಲಿ ಖಾನ್ ಪಟೌಡಿ ಅವರ ತಾಯಿಯ ಅಜ್ಜ ನವಾಬ್ ಹಮೀದುಲ್ಲಾ
ಖಾನ್ ಅವರಿಗೆ ಮೂವರು ಹೆಣ್ಣು ಮಕ್ಕಳಿದ್ದರು, ಅವರಲ್ಲಿ ಹಿರಿಯವರು ಅಬಿದಾ ಸುಲ್ತಾನ್.

ಎರಡನೇ ಪುತ್ರಿ, ಸಾಜಿದಾ ಸುಲ್ತಾನ್ ಭಾರತದಲ್ಲಿಯೇ ಉಳಿದುಕೊಂಡಿದ್ದರು. ಸೈಫ್ ಅಲಿ ಖಾನ್ ಅವರ ಅಜ್ಜ ನವಾಬ್ ಇಫ್ತಿಕರ್
ಅಲಿ ಖಾನ್ ಪಟೌಡಿ ಅವರನ್ನು ವಿವಾಹವಾಗಿದ್ದರು ಮತ್ತು ಆಸ್ತಿಗಳ ಕಾನೂನುಬದ್ಧ ಉತ್ತರಾಧಿಕಾರಿಯಾದರು.

2019 ರಲ್ಲಿ, ನ್ಯಾಯಾಲಯವು ಸಾಜಿದ್ ಸುಲ್ತಾನ್ ಅವರನ್ನು ಕಾನೂನುಬದ್ಧ ಉತ್ತರಾಧಿಕಾರಿ ಎಂದು ಗುರುತಿಸಿತ್ತು. ಅವರ
ಮೊಮ್ಮಗ ಸೈಫ್ ಅಲಿ ಖಾನ್ ಅವರು ಆಸ್ತಿಯ ಪಾಲನ್ನು ಪಡೆದಿದ್ದರು. ಆದಾಗ್ಯೂ, ಅಬಿದಾ ಸುಲ್ತಾನ್ ಪಾಕಿಸ್ಥಾನಕ್ಕೆ ವಲಸೆ
ಹೋದ ಪರಿಣಾಮವಾಗಿ ಕೇಂದ್ರ ಸರಕಾರವು ಆಸ್ತಿಗಳನ್ನು ಶತ್ರು ಆಸ್ತಿ ಎಂದು ಹೇಳಿಕೊಂಡಿತ್ತು.

ಸೈಫ್ ಅಲಿ ಖಾನ್
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಮಹಿಳೆಯರನ್ನು ಗೌರವಿಸುವ ಯುವಜನತೆಯ ಮುಂದೆ ಬಿಜೆಪಿಯ ನಿಜಬಣ್ಣ ಬಯಲಾಗಿದೆ’: ಪ್ರಕಾಶ್ ರಾಜ್

ದೇಶದ ವಿವಿಧ ಭಾಗಗಳಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿರುವ ಯುವಜನತೆಯನ್ನು ಶ್ಲಾಘಿಸಿರುವ ನಟ...

SIR | ಯುವಜನರ ಮೇಲಿನ ದಮನಕಾರಿ ಕ್ರಮಗಳ ಕುರಿತು ಅಮೆರಿಕದ 6 ಡೆಮಾಕ್ರಟಿಕ್ ಸಂಸದರ ಕಳವಳ; ವಿದೇಶಾಂಗ ಕಾರ್ಯದರ್ಶಿಗೆ ಪತ್ರ

ದೆಹಲಿ ಸೇರಿದಂತೆ ಭಾರತದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಗಳ ವೇಳೆ ಅತಿಯಾದ...

ಇಂಡಿಯಾ ಒಕ್ಕೂಟದತ್ತ ಮುಖ ಮಾಡಿದರೇ ಜಗನ್?

ಆಂಧ್ರಪ್ರದೇಶದ ರಾಜಕಾರಣದಲ್ಲಿ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಹೊಸದೊಂದು ರಾಜಕೀಯ ಸಮೀಕರಣ ರೂಪುಗೊಳ್ಳುವ...

ನಮ್ಮ ದೇಶದಲ್ಲಿ ಅಲ್ಲದೆ ಪಾಕಿಸ್ತಾನದಲ್ಲಿ ತ್ರಿವರ್ಣ ಧ್ವಜ ಹಾರಿಸಬೇಕೇ?; ಕೇಂದ್ರದ ವಿರುದ್ಧ ಕೇಜ್ರಿವಾಲ್‌ ಕಿಡಿ

ನಮ್ಮ ದೇಶದಲ್ಲಿ ತ್ರಿವರ್ಣ ಧ್ವಜ ಹಾರಿಸದಿದ್ದರೆ ಪಾಕಿಸ್ತಾನದಲ್ಲಿ ಹಾರಿಸಬೇಕೇ? ಭಾರತದ ತ್ರಿವರ್ಣ...