ಪಾಕಿಸ್ತಾನದ ಪರ ಬೇಹುಗಾರಿಕೆ: ಪಠಾಣ್‌ಕೋಟ್‌ನ ಬಲ್ಜಿತ್ ಸಿಂಗ್ ಬಂಧನ

Date:

ಪಾಕಿಸ್ತಾನದ ಪರವಾಗಿ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ಪಂಜಾಬ್ ಪೊಲೀಸರು ಪಠಾಣ್‌ಕೋಟ್ ನಿವಾಸಿ ಬಲ್ಜಿತ್ ಸಿಂಗ್ ಎಂಬಾತನನ್ನು ಬಂಧಿಸಲಾಗಿದೆ. ಪಂಜಾಬ್ ಅನ್ನು ಜಮ್ಮು ಮತ್ತು ಕಾಶ್ಮೀರಕ್ಕೆ ಸಂಪರ್ಕಿಸುವ ಹೆದ್ದಾರಿ ಕಾರಿಡಾರ್‌ನಲ್ಲಿ ಯೋಧರ ಚಲನವಲನದ ನೇರ ಮಾಹಿತಿಯನ್ನು ಪಾಕಿಸ್ತಾನದ ವ್ಯಕ್ತಿಗಳಿಗೆ ರವಾನಿಸುತ್ತಿದ್ದ ಎಂದು ಪೊಲೀಸರು ಶಂಕಿಸಿದ್ದಾರೆ.

- Advertisement -

ಪ್ರಾಥಮಿಕ ತನಿಖೆಯ ಪ್ರಕಾರ, ಚಕ್ ಧಾರಿವಾಲ್ ಗ್ರಾಮದ ನಿವಾಸಿ ಸಿಂಗ್, ಸೇನೆ ಮತ್ತು ಅರೆಸೈನಿಕ ಪಡೆಗಳ ಚಲನವಲನಗಳ ಮೇಲೆ ಕಣ್ಣಿಡಲು NH 44ರ ಸೇತುವೆಯ ಬಳಿ ಇರುವ ಅಂಗಡಿಯಲ್ಲಿ ಸಿಸಿಟಿವಿ ಕ್ಯಾಮೆರಾವನ್ನು ಅಳವಡಿಸಿದ್ದ. ಪಾಕಿಸ್ತಾನ ಮೂಲದ ಹ್ಯಾಂಡ್ಲರ್‌ಗಳಿಗೆ ನೇರವಾಗಿ ಮಾಹಿತಿಯನ್ನು ರವಾನಿಸುತ್ತಿದ್ದ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಇದನ್ನು ಓದಿದ್ದೀರಾ? ಪಾಕಿಸ್ತಾನದ ಪರ ಬೇಹುಗಾರಿಕೆ; ಗುಜರಾತ್‌ನ ಸಹದೇವ್ ಗೋಹಿಲ್ ಬಂಧನ

ವಿಚಾರಣೆಯ ಸಮಯದಲ್ಲಿ, ಆರೋಪಿಯು ಜನವರಿಯಲ್ಲಿ ಪಠಾಣ್‌ಕೋಟ್-ಜಮ್ಮು ಹೆದ್ದಾರಿಯಲ್ಲಿರುವ ಅಂಗಡಿಯಲ್ಲಿ ಇಂಟರ್ನೆಟ್ ಆಧಾರಿತ ಸಿಸಿಟಿವಿ ಕ್ಯಾಮೆರಾವನ್ನು ಅಳವಡಿಸಿದ್ದಾಗಿ ಒಪ್ಪಿಕೊಂಡಿದ್ದಾನೆ. ದುಬೈ ಮೂಲದ ಅಪರಿಚಿತ ವ್ಯಕ್ತಿಯಿಂದ ತನಗೆ ಈ ನಿರ್ದೇಶನ ಬರುತ್ತದೆ ಎಂದು ಹೇಳಿದ್ದಾನೆ. ₹40,000 ಪಾವತಿಸಲಾಗಿತ್ತು ಎಂದೂ ತಿಳಿಸಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಹಾಗೆಯೇ ಸಿಸಿಟಿವಿ ಕ್ಯಾಮೆರಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಳೆದ ತಿಂಗಳು, ಪೊಲೀಸರು ಎರಡು ಐಎಸ್‌ಐ ಬೆಂಬಲಿತ ಬೇಹುಗಾರಿಕೆ ಪ್ರಕರಣಗಳನ್ನು ಭೇದಿಸಿದ್ದರು. ಚೀನಾ ನಿರ್ಮಿತ ಸೋಲರ್ ಚಾಲಿತ ಸಿಸಿಟಿವಿ ಕ್ಯಾಮೆರಾಗಳನ್ನು ಬಳಸಿಕೊಂಡು ಪಾಕಿಸ್ತಾನ ಮೂಲದ ಹ್ಯಾಂಡ್ಲರ್‌ಗಳಿಗೆ ಮಿಲಿಟರಿ ಸ್ಥಳಗಳ ಮಾಹಿತಿಯನ್ನು ರವಾನಿಸಲಾಗುತ್ತಿತ್ತು. ಇದಕ್ಕೂ ಮೊದಲು, ಕಪುರ್ತಲಾದಲ್ಲಿ ಒಂದು ಕಂಬದ ಮೇಲೆ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾ ಐಎಸ್‌ಐ ನಿಯಂತ್ರಿತ ಬೇಹುಗಾರಿಕೆ ಜಾಲದ ಭಾಗವಾಗಿದೆ ಎಂದು ತಿಳಿದುಬಂದಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಐ ದುರ್ಬಳಕೆ; ಅಶ್ಲೀಲ ವಿಡಿಯೋ, ಫೋಟೋ ವೈರಲ್: ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಕಂಗನಾ

ಸಾಮಾಜಿಕ ಜಾಲತಾಣಗಳಲ್ಲಿ ಎಐ ತಂತ್ರಜ್ಞಾನ ಬಳಸಿ ರಚಿಸಲಾದ ಅಶ್ಲೀಲ ಮತ್ತು ನಕಲಿ...

ಬೀದರ್‌ | ನ.28, 29ರಂದು ಅನುಭವ ಮಂಟಪ ಉತ್ಸವ : ತುಮಕೂರು ಸಿದ್ಧಗಂಗೆ ಶ್ರೀಗಳಿಗೆ ಆಹ್ವಾನ

ಬೀದರ್‌ ಜಿಲ್ಲೆಯ ಬಸವಕಲ್ಯಾಣ ನಗರದ ಅನುಭವ ಮಂಟಪ ಪರಿಸರದಲ್ಲಿ ನವೆಂಬರ್ 28...

ಪ್ರಧಾನಿ ಮೋದಿ ‘ವೋಟ್ ಚೋರ್, ಗದ್ದಿ ಚೋರ್’ – ಪ್ರಕಾಶ್ ರಾಜ್ ಆಕ್ರೋಶ

ಬೆಂಗಳೂರಿನಲ್ಲಿ 'ಎಸ್‌ಐಆರ್ ವಿರೋಧಿ ಕರ್ನಾಟಕ' ಸಂಘಟನೆಯು ಆಯೋಜಿಸಿದ್ದ 'ಜನತಾ ನ್ಯಾಯಾಲಯ' ಕಾರ್ಯಕ್ರಮದಲ್ಲಿ...

‘8 ಯುದ್ಧಗಳನ್ನು ನಿಲ್ಲಿಸಿದ್ದೇನೆ, ನನಗೇ ನೊಬೆಲ್ ಕೊಡಿ’: ಟ್ರಂಪ್ ಮತ್ತೆ ಪಟ್ಟು

ನಾರ್ವೇಜಿಯನ್ ನೊಬೆಲ್ ಸಮಿತಿಯು ಈ ಸಾಲಿನ ಪ್ರತಿಷ್ಠಿತ ‘ನೊಬೆಲ್ ಶಾಂತಿ ಪ್ರಶಸ್ತಿ’ಯನ್ನು...