ಬಿಹಾರದ ಉದ್ಯಮಿ ಗೋಪಾಲ್‌ ಖೇಮ್ಕಾ ಕೊಲೆಯ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ

Date:

ಬಿಹಾರದ ಪಾಟ್ನಾದ ಹೆಸರಾಂತ ಉದ್ಯಮಿ ಗೋಪಾಲ್‌ ಖೇಮ್ಕಾ ಹತ್ಯೆಯ ಪ್ರಮುಖ ಆರೋಪಿಯನ್ನು ಪೊಲೀಸರು ಇಂದು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿದ್ದಾರೆ. ಪಾಟ್ನಾ ನಗರದ ಮಾಲ್‌ ಸಲಾಮಿ ನಗರದಲ್ಲಿ ಆರೋಪಿಯನ್ನು ಬಂಧಿಸುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

- Advertisement -

ವಿಕಾಸ್‌ ರಾಜ ಹತ್ಯೆಯಾದ ಆರೋಪಿ. ಪೊಲೀಸ್‌ ವರದಿಯ ಪ್ರಕಾರ ಆರೋಪಿ ರಾಜ, ಉದ್ಯಮಿ ಖೇಮ್ಕಾ ಹತ್ಯೆ ಮಾಡಲು ಶೂಟರ್‌ ಉಮೇಶ್‌ ಎಂಬಾತನಿಗೆ ಶಸ್ತ್ರಾಸ್ತ್ರಗಳನ್ನು ಪೂರೈಸಿದ್ದ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

ಪೊಲೀಸರು ಆರೋಪಿಯನ್ನು ಬಂಧಿಸಲು ತೆರಳಿದಾಗ ಅವರ ಮೇಲೆಯೇ ಗುಂಡು ಹಾರಿಸಿದ್ದಾನೆ. ಪೊಲೀಸರು ಪ್ರತಿದಾಳಿ ನಡೆಸಿದಾಗ ರಾಜ ಮೃತಪಟ್ಟಿದ್ದಾನೆ. ಪೊಲೀಸರು ಘಟನಾ ಸ್ಥಳದಲ್ಲಿ ಪಿಸ್ತೂಲ್‌, ಜೀವಂತ ಗುಂಡುಗಳು, ವಶಪಡಿಸಿಕೊಂಡಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ನೀಡಲಾಗಿದೆ.

“ದಾಮಿಯಾ ಘಾಟ್‌ ಬಳಿ ಇಂದು ಮುಂಜಾನೆ 2.45ರ ಸುಮಾರಿಗೆ ಆರೋಪಿ ವಿಕಾಸ್‌ ರಾಜ ಪೊಲೀಸ್ ಎನ್‌ಕೌಂಟರ್‌ನಲ್ಲಿ ಹತ್ಯೆಯಾಗಿದ್ದಾನೆ. ಘಟನಾ ಸ್ಥಳದಿಂದ ಪಿಸ್ತೂಲ್‌, ಜೀವಂತ ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಮೃತದೇಹವನ್ನು ಪಾಟ್ನಾದ ನಳಂದ ವೈದ್ಯಕೀಯ ಕಾಲೇಜಿಗೆ ಮರಣೋತ್ತರ ಪರೀಕ್ಷೆಗೆ ನೀಡಲಾಗಿದೆ” ಎಂದು ಬಿಹಾರ ಪೊಲೀಸರು ಅಧಿಕೃತ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಬಿಹಾರ | ಬಿಜೆಪಿ ನಾಯಕ, ಉದ್ಯಮಿ ಗೋಪಾಲ್ ಖೇಮ್ಕಾಗೆ ಗುಂಡಿಕ್ಕಿ ಹತ್ಯೆ

ಖೇಮ್ಕಾ ಹತ್ಯೆಯಲ್ಲಿ ಭಾಗಿಯಾದ 10ಕ್ಕೂ ಹೆಚ್ಚು ಆರೋಪಿಗಳನ್ನು ಪೊಲೀಸರು ಬಂಧಿಸಿದ ಒಂದು ದಿನದ ನಂತರ ಈ ಘಟನೆ ನಡೆದಿದೆ. ಜುಲೈ 6 ರಂದು ಖೇಮ್ಕಾ ಅಂತ್ಯಸಂಸ್ಕಾರದ ದಿನದಂದು ಪ್ರಮುಖ ಆರೋಪಿ ರೋಷನ್‌ ಕುಮಾರ್‌ ಎಂಬಾತನನ್ನು ಬಂಧಿಸಲಾಗಿತ್ತು.

ಜುಲೈ 4 ರಂದು ನಡೆದ ಉದ್ಯಮಿ ಖೇಮ್ಕಾ ಅವರ ಹತ್ಯೆ ಪೂರ್ವನಿಯೋಜಿತವಾಗಿದ್ದು, ಶೂಟರ್‌ಗಳು ಹಾಗೂ ದಾಳಿಯನ್ನು ಯೋಜಿಸಿದವರು ಖೇಮ್ಕಾ ಅವರ ಚಲನವಲನಗಳನ್ನು ಹಲವು ದಿನಗಳಿಂದ ಗಮನಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಬಿಹಾರದ ಪ್ರಸಿದ್ಧ ಉದ್ಯಮಿ ಮತ್ತು ಬಿಜೆಪಿ ನಾಯಕ ಗೋಪಾಲ್ ಖೇಮ್ಕಾ ಅವರನ್ನು ಜುಲೈ 4 ರಂದು ರಾತ್ರಿ ಪಟ್ನಾದ ಅವರ ಮನೆಯ ಹೊರಗೆ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಗಾಂಧಿ ಮೈದಾನ ಪೊಲೀಸ್ ಠಾಣೆ ಪ್ರದೇಶದ ‘ಪನಾಚೆ’ ಹೋಟೆಲ್ ಬಳಿ ಈ ಘಟನೆ ನಡೆದಿದ್ದು, ಖೇಮ್ಕಾ ಮನೆಗೆ ತೆರಳುತ್ತಿದ್ದಾಗ ಹಂತಕರು ಗುಂಡು ಹಾರಿಸಿದ್ದರು. ಹೋಟೆಲ್ ಪಕ್ಕದಲ್ಲಿರುವ ‘ಟ್ವಿನ್ ಟವರ್’ ಸೊಸೈಟಿಯಲ್ಲಿ ಖೇಮ್ಕಾ ವಾಸಿಸುತ್ತಿದ್ದರು. ಖೇಮ್ಕಾ ಅವರ ಪುತ್ರ ಗುಂಜನ್ ಖೇಮ್ಕಾ ಅವರನ್ನೂ ಮೂರು ವರ್ಷಗಳ ಹಿಂದೆ ಕೊಲೆ ಮಾಡಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅವಧಿ ಮೀರಿದ ಆಹಾರ ಮರುಮಾರಾಟ ಆರೋಪ: ರಿಲಯನ್ಸ್‌, ಬ್ಲಿಂಕಿಟ್‌ ಘಟಕಗಳ ವಿರುದ್ಧ ತನಿಖೆ

ಅವಧಿ ಮೀರಿದ, ಹಾಳಾದ ಹಾಗೂ ಗ್ರಾಹಕರು ತಿರಸ್ಕರಿಸಿದ ಆಹಾರ ಪದಾರ್ಥಗಳನ್ನು ನಾಶಪಡಿಸುವ...

CJPಯ ತಿರಂಗಾ ಯಾತ್ರೆಗೆ ಮುನ್ನ ಬಂಧನ; ಅಭಿಜೀತ್ ದೀಪ್ಕೆಗೆ ಷರತ್ತುಬದ್ಧ ಜಾಮೀನು

ಕನ್ನಾಟ್ ಪ್ಲೇಸ್‌ನಲ್ಲಿ ಆಯೋಜಿಸಲಾಗಿದ್ದ ‘ಲೇಹ್ರಾ ದೋ ತಿರಂಗಾ’ ಪ್ರತಿಭಟನೆಯಲ್ಲಿ ಭಾಗವಹಿಸಲು ತೆರಳುತ್ತಿದ್ದ...

ಲೈಂಗಿಕ ದೌರ್ಜನ್ಯ ಖಂಡಿಸಿ ದೆಹಲಿ ಪೊಲೀಸ್ ಕೇಂದ್ರ ಕಚೇರಿಗೆ ಮಹಿಳಾ ಸಂಘಟನೆಗಳ ಮುತ್ತಿಗೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಮತ್ತು ಮುಖ್ಯ ಚುನಾವಣಾ...

ಪತ್ರಕರ್ತರ ಮೇಲಿನ ಪೊಲೀಸ್‌ ದಾಳಿಗೆ ಡಿಎಸ್‌ಜೆಎ ಖಂಡನೆ; ಪ್ರೆಸ್ ಕೌನ್ಸಿಲ್‌ನಿಂದ ಮಾರ್ಗಸೂಚಿ ಪ್ರಕಟ

ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಮತ್ತು ಪೊಲೀಸ್ ಕ್ರಮಗಳನ್ನು ವರದಿ ಮಾಡುತ್ತಿರುವ ಪತ್ರಕರ್ತರ...