ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಅಪರಿಚಿತ ವ್ಯಕ್ತಿಯಿಂದ 2 ಕೋಟಿ ರೂ. ನೀಡುವಂತೆ ಕೊಲೆ ಬೆದರಿಕೆ ಬಂದಿದೆ. ಮುಂಬೈ ಸಂಚಾರಿ ಪೊಲೀಸರಿಗೆ ಮಹಾರಾಷ್ಟ್ರದ ವರ್ಲಿ ಜಿಲ್ಲೆಯಿಂದ ಸಂದೇಶ ಕಳುಹಿಸಲಾಗಿದ್ದು, ಹಣ ನೀಡದಿದ್ದರೆ ನಟನನ್ನು ಕೊಲ್ಲಲಾಗುವುದು ಎಂದು ಹೇಳಲಾಗಿದೆ.
ಬೆದರಿಕೆ ಸಂದೇಶ ಬಂದ ನಂತರ ಮಹಾರಾಷ್ಟ್ರದ ವರ್ಲಿ ಜಿಲ್ಲೆಯ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಶಾಸಕ ಮತ್ತು ದಿವಂಗತ ಬಾಬಾ ಸಿದ್ದೀಕಿ ಅವರ ಪುತ್ರ ಜೀಶಾನ್ ಸಿದ್ದೀಕಿ ಹಾಗೂ ಸಲ್ಮಾನ್ ಖಾನ್ ಅವರಿಗೆ ಕೊಲೆ ಬೆದರಿಕೆ ಕರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಮಂಗಳವಾರ ನೋಯ್ಡಾದಲ್ಲಿ 20 ವರ್ಷದ ಯುವಕನನ್ನು ಬಂಧಿಸಿದ್ದಾರೆ. ಗುರ್ಫಾನ್ ಖಾನ್ ಎಂದು ಕರೆಯಲ್ಪಡುವ ಮೊಹಮ್ಮದ್ ತಯ್ಯಬ್ ಎಂದು ಗುರುತಿಸಲಾದ ಆರೋಪಿಯನ್ನು ನೋಯ್ಡಾದ ಸೆಕ್ಟರ್ 39 ರಲ್ಲಿ ಬಂಧಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ಟಿ20 ಪಂದ್ಯದಲ್ಲಿ 344 ರನ್ ಬಾರಿಸಿದ ಜಿಂಬಾಬ್ವೆ: ಒಂದೇ ಪಂದ್ಯದಲ್ಲಿ 7 ವಿಶ್ವದಾಖಲೆ ನಿರ್ಮಾಣ
ಅಕ್ಟೋಬರ್ 12 ರಂದು, ಬಾಬಾ ಸಿದ್ದೀಕಿ ಅವರು ದಸರಾ ಆಚರಣೆಯ ಸಂದರ್ಭದಲ್ಲಿ ಮುಂಬೈನ ಬಾಂದ್ರಾದಲ್ಲಿನ ಅವರ ಕಚೇರಿಯ ಹೊರಗೆ ಹತ್ಯೆ ಮಾಡಲಾಗಿತ್ತು. ಒಂದು ದಿನದ ನಂತರ, ಲಾರೆನ್ಸ್ ಬಿಷ್ಣೋಯ್ ತಂಡ ಬಾಬಾ ಸಿದ್ದೀಕಿ ಅವರ ಹತ್ಯೆಯ ಹೊಣೆಯನ್ನು ಹೊತ್ತುಕೊಂಡಿತು. ಸಲ್ಮಾನ್ ಖಾನ್ ಅವರೊಂದಿಗಿನ ನಿಕಟ ಸಂಬಂಧ ಹೊಂದಿದ್ದ ಕಾರಣ ಅವರ ಮೇಲೆ ದಾಳಿ ಮಾಡಲಾಗಿದೆ ಎಂದು ತಂಡದ ಸದಸ್ಯರು ಪೊಲೀಸರಿಗೆ ತಿಳಿಸಿದ್ದರು.
ಇದುವರೆಗೆ ಬಾಬಾ ಸಿದ್ದೀಕಿ ಹತ್ಯೆಗೆ ಸಂಬಂಧಿಸಿದಂತೆ ಮುಂಬೈ ಪೊಲೀಸರು 15 ಮಂದಿಯನ್ನು ಬಂಧಿಸಿದ್ದಾರೆ.
