ಕಾಕ್ರೋಚ್‌ಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; RAF ಸಿಬ್ಬಂದಿ ಸಿಡಿಸಿದ ಪೆಲೆಟ್‌ಗಳು ವಿದ್ಯಾರ್ಥಿಗಳ ದೇಹ ಹೊಕ್ಕಿವೆ

Date:

ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ ವಿದ್ಯಾರ್ಥಿ-ಯುವಜನರು ನಡೆಸಿದ ‘ಸಂಸತ್ ಚಲೋ’ ಮೆರವಣಿಗೆ ವೇಳೆ, ‘ರ್ಯಾಪಿಡ್ ಆಕ್ಷನ್ ಫೋರ್ಸ್’ (RAF) ಪೆಲೆಟ್‌ ಗನ್‌ಗಳಿಂದ ದಾಳಿ ನಡೆಸಿದೆ. ಆರ್‌ಎಎಫ್‌ ಸಿಬ್ಬಂದಿಯೊಬ್ಬರು ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್‌ನಿಂದ ಕನಿಷ್ಠ ಏಳು ಸುತ್ತು ಗುಂಡು ಹಾರಿಸಿದ್ದು, ಅದರಲ್ಲಿ ಐದು ಸುತ್ತುಗಳ ಪೆಲೆಟ್‌ಗಳ ವಿದ್ಯಾರ್ಥಿಗಳ ದೇಹ ಹೊಕ್ಕಿವೆ. ಉಳಿದ ಎರಡು ನೆಲಕ್ಕೆ ಅಪ್ಪಳಿಸಿವೆ ಎಂದು ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (CRPF) ನಡೆಸಿದ ಆಂತರಿಕ ತನಿಖೆಯಿಂದ ತಿಳಿದುಬಂದಿದೆ.

- Advertisement -

ಈ ಪೆಲೆಟ್ ಗನ್ ದಾಳಿಯಿಂದಾಗಿ ಕನಿಷ್ಠ ಮೂವರು ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಗಾಯಗೊಂಡವರಲ್ಲಿ ಗುರ್‌ಗಾಂವ್‌ ಮೂಲದ 25 ವರ್ಷದ ಇರ್ಷಾದ್ ಶೇಖ್, ದೆಹಲಿ ವಿಶ್ವವಿದ್ಯಾಲಯದ 19 ವರ್ಷದ ವಿದ್ಯಾರ್ಥಿ ಸಾಹಿಲ್ ಲೋಚಾಬ್ ಹಾಗೂ ‘ಔಟ್‌ಲುಕ್’ ನಿಯತಕಾಲಿಕೆಯ 28 ವರ್ಷದ ಪತ್ರಕರ್ತರೊಬ್ಬರು ಸೇರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಪ್ರಜಾಪ್ರಭುತ್ವದ ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಆರ್‌ಎಎಫ್ ಸಿಬ್ಬಂದಿ ನಿರ್ವಹಿಸುವ ಲಾಗ್ ಎಂಟ್ರಿಗಳನ್ನು ಕೂಲಂಕಷವಾಗಿ ಪರಿಶೀಲಿಸಿದಾಗ ಈ ಮಾಹಿತಿ ಹೊರಬಿದ್ದಿದೆ. ಪ್ರತಿಭಟನಾಕಾರರು ಭದ್ರತಾ ಸಿಬ್ಬಂದಿಯ ಮೇಲೆ ಕಲ್ಲು ತೂರಾಟ ನಡೆಸಿ ದಾಳಿ ಮಾಡಿದಾಗ ಪರಿಸ್ಥಿತಿ ಹತೋಟಿಗೆ ತರಲು ಗುಂಡು ಹಾರಿಸಲಾಯಿತು ಎಂದು ಪಡೆಯ ಹಿರಿಯ ಅಧಿಕಾರಿಗಳು ಸಮರ್ಥಿಸಿಕೊಂಡಿದ್ದಾರೆ.

ಈ ಘಟನೆಯ ಕುರಿತು ಪ್ರತಿಕ್ರಿಯಿಸಿದ ಸಿಆರ್‌ಪಿಎಫ್ ಡಿಜಿ ಜ್ಞಾನೇಂದ್ರ ಪ್ರತಾಪ್ ಸಿಂಗ್, “ಪ್ರತಿಭಟನೆ ಈಗ ಅಂತ್ಯಗೊಂಡಿದ್ದು, ಜನಸ್ತೋಮ ಚದುರಿದೆ. ಪ್ರತಿಯೊಂದು ಪ್ರಮುಖ ಕಾರ್ಯಾಚರಣೆಯ ನಂತರ ನಾವು ಮಾಡುವಂತೆ ಈ ಘಟನೆಯ ಬಗ್ಗೆಯೂ ವೃತ್ತಿಪರ ಮೌಲ್ಯಮಾಪನ ನಡೆಸಿದ್ದೇವೆ. ಪಡೆಯ ಅಂತಿಮ ನಿರ್ಧಾರವನ್ನು ಶೀಘ್ರದಲ್ಲೇ ತಿಳಿಸುತ್ತೇವೆ” ಎಂದು ಹೇಳಿದ್ದಾರೆ.

ಆದಾಗ್ಯೂ, ಆರ್‌ಎಎಫ್ ಇನ್ಸ್‌ಪೆಕ್ಟರ್ ಜನರಲ್ (IG) ಸೀಮಾ ಧುಂಧಿಯಾ ಅವರು ದೆಹಲಿಯಲ್ಲಿ ನಿಯೋಜನೆಗೊಂಡಿದ್ದ ಆರ್‌ಎಎಫ್‌ ಕಮಾಂಡರ್‌ಗಳೊಂದಿಗೆ ನಡೆಸಿದ ವಿಡಿಯೋ ಸಭೆ ನಡೆಸಿದ್ದಾರೆ. “ಜನಸಂದಣಿಯನ್ನು ನಿಯಂತ್ರಿಸಲು ಬಳಸಲಾದ ಬಲ ಪ್ರಯೋಗದ ಹಂತಗಳು ನಿಗದಿಪಡಿಸಿದ ಮಾನದಂಡಗಳು ಮತ್ತು ತರಬೇತಿಗೆ ಅನುಗುಣವಾಗಿರಲಿಲ್ಲ” ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಭವಿಷ್ಯದಲ್ಲಿ ಇಂತಹ ಕಾನೂನು ಮತ್ತು ಸುವ್ಯವಸ್ಥೆ ಕರ್ತವ್ಯಗಳ ವೇಳೆ ಪಡೆಯ ಸಿಬ್ಬಂದಿ ಕಟ್ಟುನಿಟ್ಟಾಗಿ ನಿಯಮಗಳನ್ನು ಪಾಲಿಸಬೇಕು. ಪರಿಸ್ಥಿತಿಗೆ ತಕ್ಕಂತೆ ಎಚ್ಚರಿಕೆ ನೀಡಿ, ಲಾಠಿಚಾರ್ಜ್ ಮತ್ತು ಅಶ್ರುವಾಯು ಮುಂತಾದ ಅನುಮೋದಿತ ವಿಧಾನಗಳನ್ನು ಹಂತಹಂತವಾಗಿ ಮಾತ್ರ ಬಳಸಬೇಕು” ಎಂದು ಸ್ಪಷ್ಟ ಸೂಚನೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ ಕರೆಘಂಟೆಯೇ?

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ...

ಬೀದರ್‌ | ನ.1ರಂದು ಸಚಿವ ಈಶ್ವರ ಖಂಡ್ರೆಗೆ ಅಭಿನಂದನಾ ಸಮಾರಂಭ

ಬೀದರ್‌ ತಾಲ್ಲೂಕಿನ ಅತಿವಾಳ ಸಮೀಪ ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ಮತ್ತು...

ಬೀದರ್‌ | ವಾಲ್ಮೀಕಿ ರಾಮಾಯಣ ಮಾನವ ಸಂಬಂಧಗಳ ಮೌಲ್ಯ ಸಾರುತ್ತದೆ: ನಾ.ಗೀತಾಚಾರ್ಯ

ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣವು ಮಾನವ ಸಂಬಂಧಗಳ ಮಹತ್ವ, ಕುಟುಂಬದ ಜವಾಬ್ದಾರಿ,...