ತಿದ್ದುಪಡಿಗೆ ಲೇಖಕಿ ನಕಾರ: ಸೋನಿಯಾ ಗಾಂಧಿ ಪುಸ್ತಕ ಪ್ರಕಟಣೆಯಿಂದ ಹಿಂದೆ ಸರಿದ ಪೆಂಗ್ವಿನ್ ಇಂಡಿಯಾ

Date:

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಕಥನವಾದ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ (Belonging: a Journey of Love) ಪುಸ್ತಕವನ್ನು ಭಾರತದಲ್ಲಿ ಪ್ರಕಟಿಸದಿರಲು ‘ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ’ (PRHI) ನಿರ್ಧರಿಸಿದೆ.

- Advertisement -

ಪುಸ್ತಕದ ಹಸ್ತಪ್ರತಿಯ (manuscript) ಕೆಲವು ಭಾಗಗಳಲ್ಲಿ ಸಂಪಾದಕೀಯ ಬದಲಾವಣೆಗಳನ್ನು ಮಾಡುವಂತೆ ಮತ್ತು ಕೆಲವು ಅಂಶಗಳನ್ನು ಕೈಬಿಡುವಂತೆ ಪೆಂಗ್ವಿನ್ ಇಂಡಿಯಾ ಸಂಸ್ಥೆ ಸೂಚಿಸಿತ್ತು. ಆದರೆ, ಈ ತಿದ್ದುಪಡಿಗಳಿಗೆ ಲೇಖಕಿಯೂ ಆದ ಸೋನಿಯಾ ಗಾಂಧಿ ಅವರು ಸ್ಪಷ್ಟವಾಗಿ ನಿರಾಕರಿಸಿದ್ದಾರೆ. ಈ ಕಾರಣದಿಂದಾಗಿಯೇ ಪೆಂಗ್ವಿನ್ ಸಂಸ್ಥೆ ಈ ಪುಸ್ತಕವನ್ನು ಪ್ರಕಟಿಸುವ ಒಪ್ಪಂದದಿಂದ ಹಿಂದೆ ಸರಿದಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

20 ಬಂಡುಕೋರ ಟಿಎಂಸಿ ಸಂಸದರು ಮತ ಚಲಾಯಿಸಬಹುದೇ; ಮುಂದೆ...

ಡಿಲಿಮಿಟೇಷನ್ ಹಾಗೂ ಮಹಿಳಾ ಮೀಸಲಾತಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿರುವ ಹೊತ್ತಿನಲ್ಲಿ, ಲೋಕಸಭಾ ಸ್ಪೀಕರ್ ಮುಂದೆ ಅನರ್ಹತೆ ವಿಚಾರಣೆ ಎದುರಿಸುತ್ತಿರುವ 20 ಬಂಡುಕೋರ ಟಿಎಂಸಿ...

ಸಿನಿಮಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಏಳು ಸುತ್ತಿನ...

ಪ್ರಶಸ್ತಿಗೆ ಮತ್ತು ಸಬ್ಸಿಡಿಗೆ ಅರ್ಜಿ ಸಲ್ಲಿಸಲು ನಿರ್ಮಾಪಕರು, ನಿರ್ದೇಶಕರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ, ನಮ್ಮ ಚಿತ್ರರಂಗದಲ್ಲಿ ಪೂರ್ಣ ಪ್ರಮಾಣದ ನಿರ್ಮಾಣ ಸಂಸ್ಥೆಗಳಿರುವುದು ಕೇವಲ ಬೆರಳೆಣಿಕೆಯಷ್ಟು, ಉಳಿದಂತೆ ಬಹುತೇಕ ನಿರ್ಮಾಣ...

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದಿರುವುದರಿಂದ, ಈ ಪುಸ್ತಕವನ್ನು ಭಾರತದಲ್ಲಿ ಪ್ರಕಟಿಸಲು ಹಲವು ಪ್ರಕಾಶನ ಸಂಸ್ಥೆಗಳು ಪೈಪೋಟಿ ನಡೆಸುತ್ತಿವೆ. ಸದ್ಯ ಖ್ಯಾತ ಪ್ರಕಾಶನ ಸಂಸ್ಥೆಯಾದ ಹಾರ್ಪರ್ ಕಾಲಿನ್ಸ್ (Harper Collins) ಭಾರತದಲ್ಲಿ ಪುಸ್ತಕವನ್ನು ಪ್ರಕಟಿಸಿ ವಿತರಿಸುವ ಒಪ್ಪಂದವನ್ನು ಬಹುತೇಕ ಅಂತಿಮಗೊಳಿಸುವ ಹಂತದಲ್ಲಿದೆ ಎಂದು ವರದಿಯಾಗಿದೆ. ಈ ಪುಸ್ತಕವು ನವೆಂಬರ್ 10ರಂದು ಬಿಡುಗಡೆಯಾಗಲಿದೆ. ಪೆಂಗ್ವಿನ್ ರಾಂಡಮ್ ಹೌಸ್‌ನ ವಿಭಾಗವಾಗಿರುವ ಅಮೆರಿಕದ ‘ಆಲ್ಫ್ರೆಡ್ ಎ. ಕ್ನಾಫ್’ (Alfred A Knopf) ಸಂಸ್ಥೆ ಈ ಪುಸ್ತಕ ಬಿಡುಗಡೆಯ ಕುರಿತು ಮೊದಲು ಘೋಷಣೆ ಮಾಡಿತ್ತು. ಅಲ್ಲದೆ, ಮೊದಲ ಹಂತದಲ್ಲಿ 1,00,000 ಪ್ರತಿಗಳನ್ನು ಮುದ್ರಿಸಲಾಗುವುದು ಎಂದು ಸಂಸ್ಥೆ ತಿಳಿಸಿತ್ತು.

ಪುಸ್ತಕದ ತಿದ್ದುಪಡಿ ಮತ್ತು ಪ್ರಕಟಣೆ ರದ್ದತಿಯ ಕುರಿತು ಪ್ರತಿಕ್ರಿಯೆ ಪಡೆಯಲು ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ ಸಿಇಒ ಗೌರವ್ ಶ್ರೀನಾಗೇಶ್, ಅಮೆರಿಕದ ಪ್ರಕಾಶನ ಸಂಸ್ಥೆ ಕ್ನಾಫ್ ಹಾಗೂ ಸೋನಿಯಾ ಗಾಂಧಿ ಅವರ ಪ್ರತಿನಿಧಿ ಡೇವಿಡ್ ಗಾಡ್ವಿನ್ ಅವರನ್ನು ಸಂಪರ್ಕಿಸಲಾಯಿತಾದರೂ, ಅವರಿಂದ ಯಾವುದೇ ಪ್ರತಿಕ್ರಿಯೆ ಲಭ್ಯವಾಗಿಲ್ಲ.

ಸೋನಿಯಾ ಗಾಂಧಿ ಅವರು ಈ ಹಿಂದೆಯೂ ಕೆಲವು ಪುಸ್ತಕಗಳನ್ನು ಬರೆದು ಸಂಪಾದಿಸಿದ್ದಾರಾದರೂ, ಪ್ರಸ್ತುತ ಬಿಡುಗಡೆಯಾಗಲಿರುವ ಈ ಪುಸ್ತಕವು ಅವರ ಅತ್ಯಂತ ವೈಯಕ್ತಿಕ ಹಾಗೂ ನಿರ್ಣಾಯಕ ಆತ್ಮಕಥನವಾಗಿದೆ ಎಂದು ಅವರ ನಿಕಟವರ್ತಿಗಳು ತಿಳಿಸಿದ್ದಾರೆ. “ವಿಶ್ವದ ಅತ್ಯಂತ ಪ್ರಮುಖ ಮಹಿಳಾ ನಾಯಕಿಯೊಬ್ಬರ ಈ ಆತ್ಮಕಥನವು ಪ್ರೀತಿ, ಕುಟುಂಬ ಹಾಗೂ ಬೆರಗುಗೊಳಿಸುವ ಭಾರತದ ಕುರಿತಾದ ಅತ್ಯಂತ ಆಕರ್ಷಕ ಕಥೆಯನ್ನು ಒಳಗೊಂಡಿದೆ” ಎಂದು ಅಮೆರಿಕದ ಪ್ರಕಾಶನ ಸಂಸ್ಥೆ ಕ್ನಾಫ್ ಬಣ್ಣಿಸಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2022ರ ಲೈಂಗಿಕ ದೌರ್ಜನ್ಯ ಪ್ರಕರಣ: ಮಲಯಾಳಂ ನಿರ್ದೇಶಕ ಲಿಜು ಕೃಷ್ಣ ಖುಲಾಸೆ

2022ರಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ಚಿತ್ರರಂಗದ ನಿರ್ದೇಶಕ...

ಜನನುಡಿ 2026 | ಇತಿಹಾಸ ಸುಮ್ಮನಿರುವವರನ್ನು ಕ್ಷಮಿಸುವುದಿಲ್ಲ: ಪ್ರಕಾಶ್ ರಾಜ್

ಇತಿಹಾಸ ತಪ್ಪು ಮಾಡಿದವರನ್ನು ಕ್ಷಮಿಸುತ್ತದೆ. ಆದರೆ ಸುಮ್ಮನಿರುವವರನ್ನು ಯಾವತ್ತೂ ಕ್ಷಮಿಸುವುದಿಲ್ಲ ಎಂದು...

ಉತ್ತರ ಕನ್ನಡ |ಮಂಗನ ಕಾಯಿಲೆ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಹರ್ಷಲ್ ಬೊಯರ್

ಜಿಲ್ಲೆಯಲ್ಲಿ ಮಂಗನ ಕಾಯಿಲೆ (ಕೆಎಫ್‌ಡಿ) ನಿಯಂತ್ರಣಕ್ಕೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು,...

ಸಮಾನತೆ, ಕಾಯಕ-ದಾಸೋಹದ ತತ್ವಗಳಿಗೆ ಸಾಕ್ಷಿಯಾದ ನೆಲ ಬಸವಕಲ್ಯಾಣ

ಬಸವಕಲ್ಯಾಣ ಸಮಾನತೆ, ಕಾಯಕ ಮತ್ತು ದಾಸೋಹದ ತತ್ವಗಳನ್ನು ಸಾರುವ ಪವಿತ್ರ ಭೂಮಿಯಾಗಿದ್ದು,...