ಒಂದು ಕರೆಗೆ ಉಕ್ರೇನ್‌ ಯುದ್ಧ ನಿಲ್ಲಿಸಿದೆವೆಂದ ಜನ ಮಣಿಪುರ ಹೊತ್ತಿ ಉರಿಯಲು ಬಿಟ್ಟಿದ್ದೇಕೆ: ನಟ ಕಿಶೋರ್‌ ಪ್ರಶ್ನೆ

Date:

ತಿಂಗಳು ಕಳೆದರೂ ತಣ್ಣಗಾಗದ ಮಣಿಪುರ ಹಿಂಸಾಚಾರ

- Advertisement -

ನಿರಂತರ ಹಿಂಸಾಚಾರಕ್ಕೆ ನೂರಕ್ಕೂ ಹೆಚ್ಚು ಮಂದಿ ಬಲಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ʻಬಳ್ಳಾರಿ ಚಲೋʼ ಕಾಂಗ್ರೆಸ್‌ ಭದ್ರಕೋಟೆಯಲ್ಲಿ ಬಿಜೆಪಿ ಪಾದಯಾತ್ರೆ; ಲಾಭ...

ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳನ್ನು ಗೆದ್ದು ಕಾಂಗ್ರೆಸ್‌ ಬಿಜೆಪಿ ಪಕ್ಷವನ್ನು ಸಂಪೂರ್ಣವಾಗಿ ಮಣಿಸಿತ್ತು. ಲೋಕಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್‌ ತನ್ನ ಪ್ರಾಬಲ್ಯವನ್ನು ಮುಂದುವರಿಸಿತು. ಇತ್ತೀಚೆಗೆ ನಡೆದ ಸಂಡೂರು ವಿಧಾನಸಭಾ ಕ್ಷೇತ್ರದ...

ಬಾಹ್ಯಾಕಾಶದಲ್ಲಿ ಶಸ್ತ್ರಾಸ್ತ್ರ ಸಮರ: ಕಕ್ಷೆಯಲ್ಲಿ ಆಯುಧಗಳನ್ನು ಇರಿಸಿದ್ದನ್ನು ಒಪ್ಪಿಕೊಂಡ...

ಉಪಗ್ರಹವನ್ನು ಸ್ಫೋಟಿಸದಿದ್ದರೂ ಬಾಹ್ಯಾಕಾಶದಲ್ಲಿ ಜಾಮರ್‌ಗಳು ಸಹ ಅತ್ಯಂತ ಮಾರಕವಾಗಿ ಪರಿಣಮಿಸಬಹುದು. ಇಂದಿನ ದಿನಗಳಲ್ಲಿ ಸಂಪರ್ಕ, ಹವಾಮಾನ ಮುನ್ಸೂಚನೆ, ವಿಮಾನ ಮತ್ತು ಹಡಗುಗಳ ಜಿಪಿಎಸ್ (GPS), ತುರ್ತು ಸೇವೆಗಳು ಮತ್ತು ಆರ್ಥಿಕ ಜಾಲಗಳು ಸಂಪೂರ್ಣವಾಗಿ...

ಗಣೇಶೋತ್ಸವ ಕೋಮು ಸೌಹಾರ್ದದ ಸೇತುವಾಗಲಿ; ಮನುಜ ಸಂಬಂಧದ ತಂತು...

ಗಣೇಶೋತ್ಸವ ಸಂಭ್ರಮ, ಭಕ್ತಿಯಿಂದ ಜನರು ಒಂದೆಡೆ ಸೇರಿ ಆಚರಿಸುವ ಹಬ್ಬ. ಆದರೆ ಇದೇ ಹಬ್ಬದ ಸಂದರ್ಭದಲ್ಲಿ ಕೆಲವೆಡೆ ಕೋಮು ಸಂಘರ್ಷಗಳು ನಡೆಯುತ್ತಿರುವುದು ಮಾತ್ರ ವಿಷಾದನೀಯ. ಭಾರತದಂತಹ ವಿವಿಧ ಧರ್ಮ, ಭಾಷೆ, ಸಂಸ್ಕೃತಿಗಳನ್ನು ಹೊಂದಿರುವ...

ಈಶಾನ್ಯ ರಾಜ್ಯ ಮಣಿಪುರದಲ್ಲಿ ತಿಂಗಳು ಕಳೆದರೂ ಹಿಂಸಾಚಾರ ಮಾತ್ರ ನಿಲ್ಲುತ್ತಿಲ್ಲ. ಕೇಂದ್ರ ಸರ್ಕಾರ ಈ ಹಿಂಸಾಚಾರವನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿರುವಾಗಲೇ ಬಹುಭಾಷಾ ನಟ ಕಿಶೋರ್‌ ಕುಮಾರ್‌, ಮೋದಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಣಿಪುರ ಹಿಂಸಾಚಾರದ ಕುರಿತ ಮಾಧ್ಯಮ ವರದಿಗಳನ್ನು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡು ಪ್ರತಿಕ್ರಿಯಿಸಿರುವ ಕಿಶೋರ್‌, “ಒಂದು ಕರೆಯಲ್ಲಿ ಉಕ್ರೇನ್ ಯುದ್ಧ ನಿಲ್ಲಿಸಿದೆವೆಂದು ಬಡಾಯಿ ಕೊಚ್ಚುವ ಜನ ಮಣಿಪುರವನ್ನು ತಿಂಗಳಿಂದ ಹೊತ್ತಿ ಉರಿಯಲು ಬಿಟ್ಟಿದ್ದೇಕೆ? ಲಾಭ.. ಲಾಭ.. ಲಾಭ.. ಎಲ್ಲದರಲ್ಲೂ ಲಾಭ… ಪಾಪದ ಜನರ ಸಾವಿನಲ್ಲೂ ಲಾಭದ ಧಂದೆ ಮಾಡುವ ವ್ಯಾಪಾರಿಯ ಕೈಗೆ ದೇಶ ಕೊಟ್ಟಂತಾಯ್ತು. ಜನ ಸಾಯುತ್ತಲೇ ಇರಲಿ, ಗುಜರಾತಿನಲ್ಲೊ, ಪುಲ್ವಾಮದಲ್ಲೊ, ಒಡಿಶಾದಲ್ಲೊ, ಮಣಿಪುರದಲ್ಲೊ… ದೇಶದ ಮೂಲೆ ಮೂಲೆಯಲ್ಲಿ ಹಿಂಸೆಯ ರೋಗವನ್ನು ಹರಡಿ ಲಾಭ ಹೆಕ್ಕುತ್ತಲೇ ಇರುತ್ತಾರೆ ದ್ವೇಷದ ವ್ಯಾಪಾರಿಗಳು. ಯಾರೂ ಪ್ರಶ್ನಿಸಬೇಡಿ, ಪತ್ರಿಕೆಯಾದರೂ ಸರಿ ಟ್ವಿಟರ್‌ನಲ್ಲಾದರೂ ಸರಿ. ತುಮ್ ಬಸ್ ಚುಪ್ ರಹೋ ಯೇ ಉನ್ ಕೀ ಮನ್ ಕೀ ಬಾತ್ ಹೈ (ನೀವೆಲ್ಲರೂ ಸುಮ್ಮನಿರಿ ಇದು ಅವರ ಮನದ ಮಾತು)” ಎಂದು ವ್ಯಂಗ್ಯವಾಡಿದ್ದಾರೆ.

ಪರಿಶಿಷ್ಟ ಪಂಗಡಗಳ ಸ್ಥಾನಮಾನಕ್ಕೆ ಆಗ್ರಹಿಸಿ ರಾಜ್ಯದ 10 ಜಿಲ್ಲೆಗಳಲ್ಲಿ ಶುರುವಾಗಿದ್ದ ಪ್ರತಿಭಟನೆ ಜನಾಂಗೀಯ ಹಿಂಸೆಗೆ ತಿರುಗಿ ತಿಂಗಳು ಕಳೆದಿದೆ. ಈವರೆಗೆ ನೂರಕ್ಕೂ ಹೆಚ್ಚು ಜನರು ಈ ಹಿಂಸಾಚಾರದಲ್ಲಿ ಸಾವನ್ನಪ್ಪಿದ್ದು, 50 ಸಾವಿರಕ್ಕೂ ಅಧಿಕ ಮಂದಿ ತಮ್ಮ ಶಾಶ್ವತ ನೆಲೆಗಳನ್ನು ಕಳೆದುಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಪಠ್ಯ ಪರಿಷ್ಕರಣೆ ಮಾಡುವುದು ತಪ್ಪೇ? ಗೀತಾ ಶಿವರಾಜ್‌ಕುಮಾರ್‌

ಉದ್ರಿಕ್ತರ ಗುಂಪೊಂದು ಗುರುವಾರ ಸಂಜೆ ವಿದೇಶಾಂಗ ವ್ಯವಹಾರಗಳ ರಾಜ್ಯ ಖಾತೆ ಸಚಿವ ಆರ್‌.ಕೆ ರಂಜನ್‌ ಸಿಂಗ್‌ ಅವರ ಮನೆ ಮೇಲೆ ಪೆಟ್ರೋಲ್‌ ಬಾಂಬ್‌ ದಾಳಿ ನಡೆಸಿದ್ದು, ಇಡೀ ಮನೆಯನ್ನು ಸುಟ್ಟು ಹಾಕಿದ್ದಾರೆ. ಜೂನ್‌ 15ರಂದು ಮಣಿಪುರದ ಸಚಿವೆ ನೆಮ್ಚಾ ಕಿಪ್‌ಗೆನ್‌ ಅವರ ಅಧಿಕೃತ ನಿವಾಸಕ್ಕೂ ಅಪರಿಚಿತರು ಬೆಂಕಿ ಹಚ್ಚಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎನ್‌ಡಿಎ ರಾಜ್ಯಗಳಲ್ಲಿ ಯುಸಿಸಿ ಜಾರಿಗೆ ಯತ್ನಕ್ಕೆ ಮೈತ್ರಿ ಪಕ್ಷಗಳಲ್ಲಿ ತೀವ್ರ ವಿರೋಧ

​ಮುಂಬರುವ 2029ರ ಲೋಕಸಭಾ ಚುನಾವಣೆಯೊಳಗೆ ದೇಶದ 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ...

ಜಾಗತಿಕ ತೈಲ ಸಂಕಟ: ಪಾಕ್‌ನಲ್ಲಿ ಇಂಧನ ಅಭಾವ; ಭಾರತಕ್ಕೂ ಎಚ್ಚರಿಕೆ ಗಂಟೆ

ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಯುದ್ಧ ವಾತಾವರಣ ಮತ್ತು ಜಾಗತಿಕ ಇಂಧನ ಪೂರೈಕೆಯಲ್ಲಿ...

ಆರು ತಿಂಗಳಲ್ಲಿ 3000 ಪಿಎಂಎಲ್‌ಎ ಪ್ರಕರಣ! ಪ್ರಾಧಿಕಾರದ ಸಾಮರ್ಥ್ಯದ ಕುರಿತು ಸುಪ್ರೀಂ ಶಂಕೆ

ಜಾರಿ ನಿರ್ದೇಶನಾಲಯ (ಇಡಿ) ಜಪ್ತಿ ಮಾಡಿದ ಆಸ್ತಿಗಳ ಪ್ರಕರಣಗಳನ್ನು ಪರಿಶೀಲಿಸುವ ವಿಚಾರಣಾ...