ರಾತ್ರಿಯಿಡೀ ತಲೆಕೆಳಗಾಗಿ ನೇತುಹಾಕಿ ಬಾಲಕಿಯನ್ನು ಕೊಂದ ವಿಕೃತ ತಂದೆ

Date:

ಸಂಬಂಧಿಕರ ಮನೆಯಿಂದ ಹಣ ಕಳ್ಳತನ ಮಾಡಿದ್ದಾಳೆ ಎಂಬ ಶಂಕೆಯ ಮೇಲೆ, ವಿಕೃತ ತಂದೆಯೊಬ್ಬ ತನ್ನ 10 ವರ್ಷದ ಮಗಳನ್ನು ರಾತ್ರಿಯಿಡೀ ತಲೆಕೆಳಗಾಗಿ ನೇತುಹಾಕಿ ಚಿತ್ರಹಿಂಸೆ ನೀಡಿದ್ದು, ಆಕೆ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ನಡೆದಿದೆ. ಬಾಲಕಿಯ ತಂದೆ ದಾದು ಅಲಿಯಾಸ್ ನಾನಾ ಯಮಗರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಸಾಂಗ್ಲಿಯ ಅಟ್ಬಾಡಿ ನಿವಾಸಿ ಯಮಗರ್, ಮೃತ ಬಾಲಕಿಯ ಹಿರಿಯ ಸಹೋದರಿಗೂ ಕೂಡ ಇದೇ ರೀತಿಯ ಚಿತ್ರಹಿಂಸೆ ಒಳಪಡಿಸಿದ್ದಾನೆ. ಸದ್ಯ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

“ಆಟ್ಪಾಡಿಯ ಬಾನ್ಪುರಿಯಲ್ಲಿರುವ ಸಂಬಂಧಿಕರ ಮನೆಯಿಂದ ಇಬ್ಬರೂ ಹೆಣ್ಣುಮಕ್ಕಳು ಹಣ ಕಳ್ಳತನ ಮಾಡಿದ್ದಾರೆ ಎಂದು ಶಂಕಿಸಿದ ಯಮಗರ್ ತೀವ್ರ ಕೋಪಗೊಂಡಿದ್ದನು. ಈ ಹಿನ್ನೆಲೆಯಲ್ಲಿ, ಆತ ತನ್ನ ಇಬ್ಬರು ಪುತ್ರಿಯರಾದ ಋತುಜಾ ಮತ್ತು ಅನುಜಾ ಅವರ ಕೈಕಾಲುಗಳನ್ನು ಕಟ್ಟಿ, ಮನೆಯ ಗೋಡೆಯ ಮೇಲ್ಭಾಗದಲ್ಲಿದ್ದ ಕಬ್ಬಿಣದ ಆಂಗಲ್‌ಗೆ ತಲೆಕೆಳಗಾಗಿ ನೇತುಹಾಕಿದ್ದನು. ಘಟನೆಯಲ್ಲಿ ಋತುಜಾ ಸಾವನ್ನಪ್ಪಿದ್ದಾರೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಬಂಗಾಳ ಚುನಾವಣೆ | ಸಂದೇಶ್‌ಖಾಲಿ, ಆರ್.ಜಿ ಕರ್ ಘಟನೆಗಳಿಗೆ ಮರುಜೀವ ತುಂಬಲು BJP ಕುತಂತ್ರ!

Advertisements

“ಯಮಗರ್‌ನ ತಂದೆ ಸೇರಿದಂತೆ ಕುಟುಂಬದ ಇತರ ಸದಸ್ಯರು ಮಧ್ಯಪ್ರವೇಶಿಸಿ ಬಾಲಕಿಯರನ್ನು ರಕ್ಷಿಸಲು ಪ್ರಯತ್ನಿಸಿದರಾದರೂ, ಆತ ಅವರ ಮೇಲೆ ಕುಡುಗೋಲಿನಿಂದ ಹಲ್ಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಇಬ್ಬರೂ ಬಾಲಕಿಯರು ರಾತ್ರಿಯಿಡೀ ತಲೆಕೆಳಗಾಗಿ ನೇತಾಡುತ್ತಿದ್ದರು. ಋತುಜಾ ನೀರಿಗಾಗಿ ಎಷ್ಟೇ ಅಂಗಲಾಚಿದರೂ ಆತನ ಮನಸ್ಸು ಕರಗಲಿಲ್ಲ” ಎಂದು ಪೊಲೀಸರು ಹೇಳಿದ್ದಾರೆ.

ಬೆಳಿಗ್ಗೆ ಇಬ್ಬರೂ ಬಾಲಕಿಯರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾಗ ಅವರನ್ನು ಕೆಳಗಿಳಿಸಲಾಯಿತು. ತಕ್ಷಣವೇ ಅವರನ್ನು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಋತುಜಾಳ ಆರೋಗ್ಯ ಸ್ಥಿತಿ ಹದಗೆಟ್ಟಿತ್ತು. ಆಕೆಯನ್ನು ಸೋಲ್ಲಾಪುರ ಜಿಲ್ಲೆಯ ಪಂಢರಪುರದ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಆಕೆ ಮೃತಪಟ್ಟಿದ್ದಾಳೆ. ಆಕೆಯ ಸಹೋದರಿ ಅನುಜಾ ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ” ಎಂದು ಪೊಲೀಸರು ವಿವರಿಸಿದ್ದಾರೆ.

ಆಸ್ಪತ್ರೆಯ ಅಧಿಕಾರಿಗಳು ಘಟನೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ ನಂತರ, ಬಾಲಕಿಯರ ತಂದೆಯನ್ನು ವಶಕ್ಕೆ ಪಡೆಯಲಾಗಿದೆ. ಆತ ಮಾನಸಿಕವಾಗಿ ಅಸ್ವಸ್ಥನಾಗಿದ್ದಾನೆ. ಆತನ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (BNS) ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ ಕಳ್ಳತನ | ಪ್ರಜಾಪ್ರಭುತ್ವದ ಕೊಲೆಗಡುಕರಿಗೆ ‘ಫಾರ್ಮ್-7’ ಮಾರಕ ಅಸ್ತ್ರ!

ಭಾರತೀಯ ಪ್ರಜಾಪ್ರಭುತ್ವದ ಬೆನ್ನೆಲುಬನ್ನೇ ಮುರಿಯುವ, ಪ್ರಜೆಗಳ ಪವಿತ್ರವಾದ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ...

ಪದ್ಮಭೂಷಣ ಸಣ್ಣ ವಿಷಯ, ಅವರನ್ನೇ ಪಿಎಂ ಮಾಡಿ: ಗ್ಯಾನೇಶ್‌ರನ್ನು ಹೊಗಳಿಸಿ ಬಿಜೆಪಿ ನಾಯಕರಿಗೆ ಕಾಂಗ್ರೆಸ್ ತಿರುಗೇಟು

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಕಾರ್ಯವೈಖರಿಯನ್ನು ಪಶ್ಚಿಮ...

ನಾಗಾಲ್ಯಾಂಡ್‌ನಲ್ಲಿ ಕಳ್ಳಭಟ್ಟಿ ಹಾವಳಿ; 19 ಮಂದಿ ಬಲಿ, 3 ಸಾವಿರ ಬಾಟಲಿ ವಶ

ಕಳ್ಳಭಟ್ಟಿ ಸೇವಿಸಿ ಕನಿಷ್ಠ 19 ಮಂದಿ ಮೃತಪಟ್ಟಿರುವ ಆಘಾತಕಾರಿ ಘಟನೆ ನಾಗಾಲ್ಯಾಂಡ್‌ನಲ್ಲಿ...

CEC ಗ್ಯಾನೇಶ್‌ ಕುಮಾರ್‌ ವಿರುದ್ಧ ತನಿಖೆಗೆ ಸುಪ್ರೀಂನಲ್ಲಿ ಅರ್ಜಿ; ಆಯೋಗದ ಡೇಟಾಬೇಸ್‌ ಆಡಿಟ್‌ಗೆ ಮನವಿ

ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ವಿರುದ್ಧದ ಆರೋಪಗಳ ತನಿಖೆಗೆ...