ತಮಿಳುನಾಡು | ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ ಪ್ರಶ್ನಿಸಿ ಮದ್ರಾಸ್ ಹೈಕೋರ್ಟ್‌ಗೆ ಅರ್ಜಿ

Date:

ತಮಿಳುನಾಡು ಸರ್ಕಾರವು ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ಸರ್ಕಾರಿ ಬಸ್‌ಗಳಲ್ಲಿ ಜಾರಿಗೆ ತಂದಿರುವ ಉಚಿತ ಪ್ರಯಾಣ ಯೋಜನೆಯನ್ನು ಪ್ರಶ್ನಿಸಿ ಖಾಸಗಿ ಬಸ್ ಆಪರೇಟರ್‌ಗಳು ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಯೋಜನೆಯು ಖಾಸಗಿ ಸಾರಿಗೆ ಕ್ಷೇತ್ರಕ್ಕೆ ಭಾರಿ ಆರ್ಥಿಕ ನಷ್ಟವನ್ನುಂಟುಮಾಡುತ್ತಿದ್ದು, ಇದನ್ನು ಸಂವಿಧಾನಬಾಹಿರ ಎಂದು ಘೋಷಿಸಬೇಕೆಂದು ಕೋರಿ ರಿಟ್ ಅರ್ಜಿ ಸಲ್ಲಿಸಲಾಗಿದೆ.

- Advertisement -

ಈರೋಡ್ ಜಿಲ್ಲೆಯ ಭವಾನಿ ತಾಲೂಕಿನ ಖಾಸಗಿ ಬಸ್ ಮಾಲೀಕರಾದ ಎನ್. ಕಲಾಮಣಿ ಎಂಬುವರು ಈ ಅರ್ಜಿಯನ್ನು ಸಲ್ಲಿಸಿದ್ದಾರೆ. ಸರ್ಕಾರಿ ಬಸ್‌‌ಗಳಲ್ಲಿ ಮಾತ್ರ ಮಹಿಳೆಯರಿಗೆ ಉಚಿತ ಪ್ರಯಾಣ ನೀಡುತ್ತಿರುವುದರಿಂದ ಖಾಸಗಿ ಬಸ್‌ಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಕುಸಿದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಅಷ್ಟೇ ಅಲ್ಲದೆ, ಕುಟುಂಬದ ಮಹಿಳೆಯರು ಸರ್ಕಾರಿ ಬಸ್ ಆಯ್ದುಕೊಳ್ಳುವುದರಿಂದ ಅವರೊಂದಿಗಿನ ಪುರುಷ ಪ್ರಯಾಣಿಕರೂ ಸರ್ಕಾರಿ ಬಸ್‌ಗಳನ್ನೇ ಆಶ್ರಯಿಸುತ್ತಿದ್ದು, ಖಾಸಗಿ ಬಸ್‌ಗಳು ಖಾಲಿಯಾಗಿ ಸಂಚರಿಸುವಂತಾಗಿದೆ. ಇದರಿಂದಾಗಿ ಸಂಸ್ಥೆಯನ್ನು ಮುಚ್ಚುವ ಸ್ಥಿತಿ ನಿರ್ಮಾಣವಾಗಿದೆ ಎಂದು ಅರ್ಜಿದಾರರು ತಿಳಿಸಿದ್ದಾರೆ.

ಇದನ್ನೂ ಓದಿ: ತಮಿಳುನಾಡು | ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ವಿಸ್ತರಣೆ: ಬಸ್ ಕಂಡಕ್ಟರ್ ಆಗಿ ಟಿಕೆಟ್ ನೀಡಿದ ಸಿಎಂ ವಿಜಯ್

Advertisements

ಈ ಯೋಜನೆಯಿಂದಾಗಿ ಉಂಟಾಗುವ ನಷ್ಟವನ್ನು ಸರ್ಕಾರ ಹೇಗೆ ಭರಿಸುತ್ತದೆ ಎಂಬುದರ ಬಗ್ಗೆ ಸ್ಪಷ್ಟತೆ ಇಲ್ಲ ಹಾಗೂ ಇದನ್ನು ಸೂಕ್ತವಾದ ಸರ್ಕಾರಿ ಆದೇಶವಿಲ್ಲದೆ ಅನುಷ್ಠಾನಗೊಳಿಸಲಾಗಿದೆ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ.

ಕೇವಲ ಸರ್ಕಾರಿ ಬಸ್‌‌ಗಳಿಗೆ ಮಾತ್ರ ಈ ಸೌಲಭ್ಯ ಸೀಮಿತಗೊಳಿಸಿರುವುದು ಸಂವಿಧಾನದ ವಿಧಿ 14ರ (ಸಮಾನತೆಯ ಹಕ್ಕು) ಉಲ್ಲಂಘನೆಯಾಗಿದೆ. ಹೀಗಾಗಿ, ಈ ಯೋಜನೆಯನ್ನು ಖಾಸಗಿ ಬಸ್‌ಗಳಿಗೂ ವಿಸ್ತರಿಸಬೇಕು ಅಥವಾ ಯೋಜನೆಗೆ ತಡೆ ನೀಡಬೇಕು ಎಂದು ಖಾಸಗಿ ಬಸ್ ಮಾಲೀಕರ ಸಂಘಟನೆಗಳು ಒತ್ತಾಯಿಸಿವೆ.

ಮದ್ರಾಸ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸುಶ್ರುತ್ ಅರವಿಂದ್ ಧರ್ಮಾಧಿಕಾರಿ ಹಾಗೂ ನ್ಯಾಯಮೂರ್ತಿ ಜಿ. ಅರುಳ್ ಮುರುಗನ್ ಅವರನ್ನೊಳಗೊಂಡ ವಿಭಾಗೀಯ ಪೀಠದ ಮುಂದೆ ಈ ಅರ್ಜಿ ವಿಚಾರಣೆಗೆ ಬರಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪತ್ರಕರ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಮಹಿಳೆಯರಿಗೆ ಸುರಕ್ಷತೆಯೇ ಇಲ್ಲವೇ: ಮೋಶಾಗೆ ಪ್ರಿಯಾಂಕಾ ಗಾಂಧಿ ಪ್ರಶ್ನೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಯ ವರದಿಗಾರಿಕೆ ಮಾಡುತ್ತಿದ್ದ ಮಹಿಳಾ ಪತ್ರಕರ್ತೆಯರ ಮೇಲೆ...

ಕಲಬುರಗಿ | SIR ಎಡವಟ್ಟು: ಬದುಕಿರುವವರಿಗೂ ಮತದಾರರ ಪಟ್ಟಿಯಲ್ಲಿ ‘Death’ ಮುದ್ರೆ?

ಮತದಾರರ ಪಟ್ಟಿಯನ್ನು ಶುದ್ಧೀಕರಿಸುವ ಉದ್ದೇಶದಿಂದ ಕೈಗೊಳ್ಳಲಾಗಿರುವ ವಿಶೇಷ ತೀವ್ರ ಪರಿಷ್ಕರಣೆ (SIR)...