ಅಳುವುದೋ-ನಗುವುದೋ?: ‘ನಯಾರಾ’ದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ; ಸರ್ಕಾರಿ ಬಂಕ್‌ಗಳು ಯಥಾಸ್ಥಿತಿ

Date:

ದೇಶದ ಇಂಧನ ಮಾರುಕಟ್ಟೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ರಷ್ಯಾ ಮೂಲದ ಖಾಸಗಿ ವಲಯದ ಅತಿ ದೊಡ್ಡ ತೈಲೋತ್ಪನ್ನ ಮಾರಾಟ ಕಂಪನಿ ‘ನಯಾರಾ ಎನರ್ಜಿ’ ತನ್ನ ಬಂಕ್‌ಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಗಣನೀಯವಾಗಿ ಕಡಿತಗೊಳಿಸಿದೆ. ಪೆಟ್ರೋಲ್ ಬೆಲೆಯನ್ನು ಪ್ರತಿ ಲೀಟರ್‌ಗೆ 5 ರೂ. ಮತ್ತು ಡೀಸೆಲ್ ಬೆಲೆಯನ್ನು ಪ್ರತಿ ಲೀಟರ್‌ಗೆ 3 ರೂ.ಗಳಷ್ಟು ಇಳಿಕೆ ಮಾಡಲಾಗಿದೆ. ಪರಿಷ್ಕೃತ ದರಗಳು ಇಂದಿನಿಂದಲೇ ಜಾರಿಗೆ ಬಂದಿವೆ ಎಂದು ಸಂಸ್ಥೆ ಖಚಿತಪಡಿಸಿದೆ.

- Advertisement -

ನಯಾರಾ ಪೆಟ್ರೋಲ್‌ ಬಂಕ್‌ಗಳಲ್ಲಿ ಪೆಟ್ರೋಲ್ ಬೆಲೆ 105.93 ರೂ. ಮತ್ತು ಡಿಸೇಲ್ ದರ ಪ್ರತಿ ಲೀಟರ್‌ಗೆ 95.80 ರೂ.ಗೆ ಇಳಿಕೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

ಕಳೆದ ಕೆಲವು ತಿಂಗಳುಗಳಿಂದ ಜಾಗತಿಕ ಇಂಧನ ಮಾರುಕಟ್ಟೆಯನ್ನು ತಲ್ಲಣಗೊಳಿಸಿದ್ದ ಅಮೆರಿಕ-ಇರಾನ್‌ ಸಂಘರ್ಷ ಸದ್ಯ ತಿಳಿಯಾಗಿದೆ. ಯುದ್ಧದ ಭೀತಿ ಕಡಿಮೆಯಾಗುತ್ತಿದ್ದಂತೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಸತತವಾಗಿ ಇಳಿಕೆಯಾಗುತ್ತಾ ಬಂದಿದೆ. ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಬೆಲೆ ಇಳಿಕೆಯಾದ ಬೆನ್ನಲ್ಲೇ, ನಯಾರಾ ಎನರ್ಜಿ ತನ್ನ ಬಂಕ್‌ಗಳಲ್ಲಿ ಇಂಧನ ಬೆಲೆಯನ್ನು ಕಡಿತಗೊಳಿಸಿದೆ.

ಕುತೂಹಲಕಾರಿ ಅಂಶವೆಂದರೆ, ಇರಾನ್ ಸಂಘರ್ಷದ ಸಂದರ್ಭದಲ್ಲಿ ಇಂಧನ ದರವನ್ನು ಹೆಚ್ಚಿಸಿದ ಮೊದಲ ಕಂಪನಿಗಳಲ್ಲಿ ನಯಾರಾ ಕೂಡ ಒಂದಾಗಿತ್ತು. ಕಳೆದ ಮಾರ್ಚ್ 26 ರಂದು ಕಂಪನಿಯು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಕ್ರಮವಾಗಿ 5 ರೂ. ಮತ್ತು 3 ರೂ.ಗಳಷ್ಟು ಹೆಚ್ಚಿಸಿತ್ತು. ಇದೀಗ ಪರಿಸ್ಥಿತಿ ಹತೋಟಿಗೆ ಬಂದಿರುವುದರಿಂದ ಅಷ್ಟೇ ಪ್ರಮಾಣದ ದರವನ್ನು ಕಡಿತಗೊಳಿಸಿದೆ.

ಈ ಲೇಖನ ಓದಿದ್ದೀರಾ?: ದೇಶದ ರಿಯಲ್ ಎಸ್ಟೇಟ್ ಮೇಲೆ ಯುದ್ಧದ ಕಾರ್ಮೋಡ: 7 ನಗರಗಳಲ್ಲಿ ವಸತಿ ಮಾರಾಟ ಕುಸಿತ

ನಯಾರಾ ಎನರ್ಜಿ ಕಂಪನಿಯು ದೇಶದಾದ್ಯಂತ 7,000ಕ್ಕೂ ಹೆಚ್ಚು ಇಂಧನ ಮಾರಾಟ ಕೇಂದ್ರಗಳನ್ನು (ಬಂಕ್‌) ಹೊಂದಿದೆ. ಕಂಪನಿಯು ಮೂಲ ಬೆಲೆಯಲ್ಲಿ ಕಡಿತ ಪ್ರಕಟಿಸಿದ್ದರೂ, ಆಯಾ ರಾಜ್ಯಗಳು ವಿಧಿಸುವ ಮೌಲ್ಯವರ್ಧಿತ ತೆರಿಗೆ (VAT) ಮತ್ತು ಸ್ಥಳೀಯ ಸೆಸ್‌ಗಳಿಗೆ ಅನುಗುಣವಾಗಿ ವಿವಿಧ ನಗರಗಳಲ್ಲಿ ಗ್ರಾಹಕರಿಗೆ ಸಿಗುವ ಅಂತಿಮ ದರದಲ್ಲಿ ಕೊಂಚ ವ್ಯತ್ಯಾಸವಿರಲಿದೆ ಎಂದು ಹೇಳಲಾಗಿದೆ.

ತಟಸ್ಥವಾಗಿವೆ ಸರ್ಕಾರಿ ಸ್ವಾಮ್ಯದ ಬಂಕ್‌ಗಳು

ಖಾಸಗಿ ಕಂಪನಿಯು ದರ ಇಳಿಸಿ ಗ್ರಾಹಕರನ್ನು ಸೆಳೆಯುತ್ತಿದ್ದರೂ, ದೇಶದ ಸಾರ್ವಜನಿಕ ವಲಯದ (ಸರ್ಕಾರಿ ಸ್ವಾಮ್ಯದ) ಇಂಧನ ಮಾರಾಟ ಕಂಪನಿಗಳು ಮಾತ್ರ ದರ ಇಳಿಕೆಗೆ ಮುಂದಾಗಿಲ್ಲ. ದೇಶದ ಒಟ್ಟು ಇಂಧನ ಮಾರುಕಟ್ಟೆಯಲ್ಲಿ 90%ಕ್ಕಿಂತ ಹೆಚ್ಚಿನ ಪಾಲನ್ನು ಹೊಂದಿರುವ ಪ್ರಮುಖ ಕಂಪನಿಗಳಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್ (IOC), ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (BPCL) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ತಮ್ಮ ತೈಲ ದರಗಳಲ್ಲಿ ಯಾವುದೇ ಬದಲಾವಣೆ ಮಾಡದೆ ಯಥಾಸ್ಥಿತಿ ಕಾಯ್ದುಕೊಂಡಿವೆ.

ಕಳೆದ ಮೇ ತಿಂಗಳ ದ್ವಿತೀಯಾರ್ಧದಲ್ಲಿ ಈ ಸರ್ಕಾರಿ ಕಂಪನಿಗಳು ಸರಣಿ ಪರಿಷ್ಕರಣೆಗಳ ಮೂಲಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಒಟ್ಟಾರೆಯಾಗಿ ಪ್ರತಿ ಲೀಟರ್‌ಗೆ 7.50 ರೂ.ರಷ್ಟು ಹೆಚ್ಚಿಸಿದ್ದವು. ಜಾಗತಿಕವಾಗಿ ಕಚ್ಚಾ ತೈಲದ ಬೆಲೆ ಇಳಿದಿದ್ದರೂ, ತಮಗಾಗಿರುವ ಹಿಂದಿನ ನಷ್ಟವನ್ನು ಸರಿದೂಗಿಸಿಕೊಳ್ಳಲು ಇವು ಸದ್ಯಕ್ಕೆ ಬೆಲೆ ಇಳಿಕೆಯ ನಿರ್ಧಾರದಿಂದ ದೂರ ಉಳಿದಿವೆ ಎನ್ನಲಾಗಿದೆ.

ಸದ್ಯದ ಮಾರುಕಟ್ಟೆ ದರದಂತೆ ಬೆಂಗಳೂರಿನಲ್ಲಿ ಸರ್ಕಾರಿ ಸ್ವಾಮ್ಯದ ಬಂಕ್‌ಗಳಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 110.89 ರೂ. ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 98.80 ರೂ. ಇದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

KPSC ನೇಮಕಾತಿ ಹಗರಣ: SIT ರಚನೆಗೆ ಸುಪ್ರೀಂ ತಡೆ

KPSC (ಕರ್ನಾಟಕ ಲೋಕಸೇವಾ ಆಯೋಗ) ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ತನಿಖೆಗೆ...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರು, ಗೋವಾ, ಕೋಲ್ಕತ್ತದಲ್ಲಿ ಸಿಜೆಪಿ ‘ಮೋರ್ಚಾ’

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌: ಯಾಕೀ ವಿವಾದ?

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ....

ನಾಳೆ ‘ಕೊಂದವರು ಯಾರು?’ ರಾಷ್ಟ್ರೀಯ ವಿಚಾರ ಸಂಕಿರಣ: ಪಿತೃಪ್ರಧಾನತೆ, ಹೊಣೆಗಾರಿಕೆ ಕುರಿತು ಚರ್ಚೆಗೆ ವೇದಿಕೆ

ಕರ್ನಾಟಕದ ‘ನಾವೆದ್ದು ನಿಲ್ಲದಿದ್ದರೆ' ಸಂಘಟನೆಯು ಆರಂಭಿಸಿರುವ 'ಕೊಂದವರು ಯಾರು? Who Killed...