ಪೆಟ್ರೋಲ್, ಡೀಸೆಲ್ ಬೆಲೆ ಮತ್ತೆ ಏರಿಕೆ: ಲೀಟರ್‌ಗೆ 90 ಪೈಸೆ ಹೆಚ್ಚಳ

Date:

ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಮೂರು ರೂಪಾಯಿ ಏರಿಸಿದ ಒಂದು ವಾರಕ್ಕಿಂತ ಕಡಿಮೆ ಅವಧಿಯಲ್ಲಿ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಮತ್ತೆ ಮಂಗಳವಾರ ಎರಡನೇ ಬಾರಿಗೆ ಬೆಲೆ ಏರಿಸಿದೆ. ಪ್ರತಿ ಲೀಟರ್‌ಗೆ 90 ಪೈಸೆ ಹೆಚ್ಚಿಸಿದೆ.

- Advertisement -

ಇರಾನ್ ಮೇಲೆ ಇಸ್ರೇಲ್-ಅಮೆರಿಕ ದಾಳಿ ನಡೆಸಿ ಯುದ್ಧ ಆರಂಭವಾದಾಗಿನಿಂದ ಜಾಗತಿಕವಾಗಿ ತೈಲ ಬಿಕ್ಕಟ್ಟು ಆರಂಭವಾಗಿದೆ. ದೇಶದಲ್ಲಿ ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ಚುನಾವಣೆ ಮುಗಿಯುವವರೆಗೂ ಇಂಧನ ಬೆಲೆಯನ್ನು ಏರಿಸದ ಕೇಂದ್ರ ಸರ್ಕಾರ, ಚುನಾವಣೆ ಮುಗಿದು ಫಲಿತಾಂಶವೂ ಹೊರಬಿದ್ದು, ಸರ್ಕಾರಗಳು ರಚನೆಯಾಗುತ್ತಿದ್ದಂತೆ ಇಂಧನ ದರವನ್ನು ಏರಿಸಿತ್ತು. ಈಗ ಒಂದು ವಾರದಲ್ಲೇ ಮತ್ತೊಮ್ಮೆ ಬೆಲೆ ಏರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? ಪೆಟ್ರೋಲ್, ಡಿಸೇಲ್ ಮೇಲಿನ ಅಬಕಾರಿ ಸುಂಕ ಲೀಟರ್‌ಗೆ 2 ರೂ. ಹೆಚ್ಚಿಸಿದ ಕೇಂದ್ರ ಸರ್ಕಾರ

ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 0.94 ಪೈಸೆ, ಡೀಸೆಲ್‌ ಬೆಲೆ 0.98 ಪೈಸೆ ಏರಿಕೆಯಾಗಿದೆ. ಹೊಸ ದರದ ಅನ್ವಯ ಸದ್ಯ ಬೆಂಗಳೂರಿನಲ್ಲಿ ಪೆಟ್ರೋಲ್‌ ಲೀಟರ್‌ಗೆ 107.12 ರೂಪಾಯಿ, ಡೀಸೆಲ್‌ ಬೆಲೆ 95.04 ರೂ. ಆಗಿದೆ. ನವದೆಹಲಿಯಲ್ಲಿ, ಪೆಟ್ರೋಲ್ ಬೆಲೆಗಳು ಲೀಟರ್‌ಗೆ 97.77 ರೂ.ಗಳಿಂದ 98.64 ರೂ.ಗಳಿಗೆ ಏರಿದರೆ, ಡೀಸೆಲ್ 90.67 ರೂ.ಗಳಿಂದ 91.58 ರೂ.ಗಳಿಗೆ ಏರಿದೆ.

ಇನ್ನು ಸಿಎನ್‌ಜಿ ಬೆಲೆಯೂ ಸತತ ಏರಿಕೆಯಾಗಿದೆ. ಮೇ 15ರಂದು ದೆಹಲಿ ಮತ್ತು ಮುಂಬೈ ಸೇರಿದಂತೆ ನಗರಗಳಲ್ಲಿ ಪ್ರತಿ ಕೆಜಿಗೆ 2 ರೂ. ಹೆಚ್ಚಿಸಲಾಗಿದೆ. ಭಾನುವಾರ ಪ್ರತಿ ಕೆಜಿಗೆ 1 ರೂ. ಹೆಚ್ಚಿಸಲಾಗಿದೆ.

ಸೋಮವಾರ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಜಂಟಿ ಕಾರ್ಯದರ್ಶಿ ಸುಜಾತಾ ಶರ್ಮಾ ಹೇಳಿಕೆ ನೀಡಿದ್ದು, ಮೇ 15ರಂದು ಇಂಧನ ಬೆಲೆ ಏರಿಸಿರುವುದು, ನಷ್ಟವನ್ನು ನಾಲ್ಕನೇ ಒಂದು ಭಾಗದಷ್ಟು ಕಡಿಮೆ ಮಾಡಿದೆ. ತೈಲ ಕಂಪನಿಗಳು ಇನ್ನೂ ದಿನಕ್ಕೆ ಸುಮಾರು 750 ಕೋಟಿ ರೂ. ನಷ್ಟವನ್ನು ಅನುಭವಿಸುತ್ತಿವೆ ಎಂದು ಹೇಳಿದ್ದರು.

ಮಂಗಳವಾರ ಬೆಲೆ ಏರಿಕೆಯಾದ ಕಾರಣ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಮೇ 2022ರ ಗರಿಷ್ಠ ಮಟ್ಟವನ್ನು ತಲುಪಿವೆ. ಕಳೆದ ಬಾರಿ 2024ರ ಮಾರ್ಚ್‌ನಲ್ಲಿ ಲೋಕಸಭೆ ಚುನಾವಣೆಗೂ ಮುನ್ನ ಚುನಾವಣಾ ಲಾಭಕ್ಕಾಗಿ ಇಂಧನಗಳ ಬೆಲೆಯನ್ನು ಲೀಟರ್‌ಗೆ ಎರಡು ರೂಪಾಯಿ ಇಳಿಕೆ ಮಾಡಲಾಗಿತ್ತು. ಅದೂ ಸತತವಾಗಿ ಹಲವು ಬಾರಿ ಬೆಲೆ ಏರಿಸಿದ ಬಳಿಕ ಕೊಂಚ ಬೆಲೆ ಇಳಿಸಲಾಗಿತ್ತು. ಅದಾದ ಬಳಿಕ ಈವರೆಗೂ ಬೆಲೆ ಸ್ಥಿರವಾಗಿಯೇ ಇತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಲಸೂರ | ಗಡಿಭಾಗದ ಸರ್ಕಾರಿ ಶಾಲೆಗಳಿಗೆ ಕನ್ನಡ ಶಿಕ್ಷಕರ ನೇಮಕಕ್ಕೆ ಕಸಾಪ ಮನವಿ

ಮಹಾರಾಷ್ಟ್ರದ ಗಡಿಯೊಂದಿಗೆ ಹೊಂದಿಕೊಂಡಿರುವ ಬೀದರ್ ಜಿಲ್ಲೆಯ ಹುಲಸೂರ ತಾಲೂಕಿನ ಉರ್ದು ಹಾಗೂ...

ಬೀದರ್‌ | ಅ.24ರಿಂದ ಕಲ್ಯಾಣ ಪರ್ವ: ಭಿತ್ತಿ ಪತ್ರ ಬಿಡುಗಡೆ

ಬಸವಕಲ್ಯಾಣದ ಮಹಾ ಮಠದ ಮಹಾಮನೆ ಆವರಣದಲ್ಲಿ ಬಸವ ಧರ್ಮ ಪೀಠದ ವತಿಯಿಂದ...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್ ದೀಪ್ಕೆ ಕುರಿತು ನಡೆದಿದೆ ಚರ್ಚೆ!

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ...

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...