ಕಾನ್ಪುರದ ಐಐಟಿಯಲ್ಲಿ ಪಿಎಚ್‌ಡಿ ವಿದ್ಯಾರ್ಥಿನಿ ಆತ್ಮಹತ್ಯೆ

Date:

ಉತ್ತರ ಪ್ರದೇಶದ ಕಾನ್ಪುರದಲ್ಲಿರುವ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ (ಐಐಟಿ) 28 ವರ್ಷದ ಪಿಎಚ್‌ಡಿ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವರ್ಷ ಕಾನ್ಪುರ ಐಐಟಿಯಲ್ಲಿ ನಡೆದ ನಾಲ್ಕನೇ ಪ್ರಕರಣ ಇದಾಗಿದೆ. ವಿದ್ಯಾರ್ಥಿನಿಯ ಸಾವಿಗೆ ಕಾರಣ ಏನೆಂಬುದು ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ಮೃತ ವಿದ್ಯಾರ್ಥಿನಿಯನ್ನು ಕಾನ್ಪುರದ ಸನಿಗವಾನ್‌ನ ನಿವಾಸಿ ಪ್ರಗತಿ ಖರ್ಯ ಎಂದು ಗುರುತಿಸಲಾಗಿದೆ. ಅವರು ಐಐಟಿಯಲ್ಲಿ ಭೂ ವಿಜ್ಞಾನದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿದ್ದರು. ಅವರು ತಾವು ತಂಗಿದ್ದ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಅವರ ಸಾವಿನ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಪೊಲೀಸ್ ಫೋರೆನ್ಸಿಕ್ ತಂಡವು ಕ್ಯಾಂಪಸ್‌ನಲ್ಲಿ ತನಿಖೆ ನಡೆಸುತ್ತಿದೆ. ಆಕೆಯ ಸಾವಿನಿಂದ ಯುವ ಸಂಶೋಧಕರನ್ನು ಸಂಸ್ಥೆಯು ಕೆಳದುಕೊಂಡಿದೆ. ಅವರ ಸಾವಿಗೆ ಸಂಸ್ಥೆಯು ಸಂತಾಪ ಸೂಚಿಸುತ್ತದೆ. ಅವರನ್ನು ಕಳೆದುಕೊಂಡ ಕುಟುಂಬ ಹಾಗೂ ಸ್ನೇಹಿತರಿಗಾಗಿ ನಾವು ಪ್ರಾರ್ಥಿಸುತ್ತೇವೆ” ಎಂದು ಐಐಟಿ ಹೇಳಿದೆ.

ಕಲ್ಯಾಣಪುರ ಠಾಣೆಯ ಸಹಾಯಕ ಸಿಪಿ ಅಭಿಷೇಕ್ ಪಾಂಡೆ, “ವಿದ್ಯಾರ್ಥಿನಿಯ ಆತ್ಮಹತ್ಯೆಗೆ ಕಾರಣವೇನು ಎಂಬುದನ್ನು ಅರಿಯಲು ಪೊಲೀಸರು ಆಕೆಯ ಮೊಬೈಲ್ ಫೋನ್ಅನ್ನು ವಶಕ್ಕೆ ಪಡೆದಿದ್ದಾರೆ. ಹಾಸ್ಟೆಲ್‌ ರೂಮ್‌ಅನ್ನು ಸೀಜ್ ಮಾಡಿದ್ದಾರೆ. ಶೀಘ್ರದಲ್ಲೇ ಸಾವಿನ ಕಾರಣಗಳನ್ನು ಪತ್ತೆ ಮಾಡಲಾಗುವುದು” ಎಂದು ಹೇಳಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದೂ ಅವರು ಹೇಳಿದ್ದಾರೆ.

ಇದೇ ವರ್ಷದ ಜನವರಿ 18 ರಂದು, ಕೆಮಿಕಲ್ ಎಂಜಿನಿಯರಿಂಗ್‌ನಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿದ್ದ 29 ವರ್ಷದ ಪಿಎಚ್‌ಡಿ ವಿದ್ಯಾರ್ಥಿನಿ ಪ್ರಿಯಾಂಕಾ ಜೈಸ್ವಾಲ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಅಲ್ಲದೆ, ಜನವರಿ 11 ರಂದು, M.Tech ಎರಡನೇ ವರ್ಷದ ವಿದ್ಯಾರ್ಥಿ ವಿಕಾಸ್ ಕುಮಾರ್ ಮೀನಾ (31) ತನ್ನ ಕೋರ್ಸ್‌ನಲ್ಲಿ ಮುಂದುವರಿಯುವುದನ್ನು ‘ತಾತ್ಕಾಲಿಕವಾಗಿ’ ನಿರ್ಬಂಧಿಸಿದ್ದ ಕಾರಣಕ್ಕಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅದಕ್ಕೂ ಮುನ್ನ, 2023ರ ಡಿಸೆಂಬರ್ 19ರಂದು ಪೋಸ್ಟ್‌ಡಾಕ್ಟರಲ್ ಸಂಶೋಧಕಿ ಪಲ್ಲವಿ ಚಿಲ್ಕಾ (34) ಕೂಡ ಆತ್ಮಹತ್ಯೆಗೆ ಶರಣಾಗಿದ್ದರು.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...