ನೂತನ ಸಂಸತ್ ಭವನದ ಹೊರಗೆ ಪ್ರತಿಭಟನೆಗೆ ಯತ್ನ; ಕುಸ್ತಿಪಟುಗಳ ಮೇಲೆ ಪೊಲೀಸ್ ದೌರ್ಜನ್ಯದ ಆರೋಪ

Date:

  • ಆರೋಪಿ ಬ್ರಿಜ್ ಭೂಷಣ್ ಬಂಧನಕ್ಕೆ ಕುಸ್ತಿಪಟುಗಳು ಒತ್ತಾಯ
  • ಪ್ರತಿಭಟನೆಯಲ್ಲಿ ಭಾಗವಹಿಸಲು ಯೋಜಿಸಿದ್ದ ರೈತರ ಬಂಧನ

ದೆಹಲಿಯಲ್ಲಿ ನೂತನ ಸಂಸತ್ ಭವನದ ಹೊರಗೆ ‘ಮಹಿಳಾ ಸಮ್ಮಾನ್ ಮಹಾ ಪಂಚಾಯತ್’ ಹೆಸರಿನಲ್ಲಿ ಪ್ರತಿಭಟನೆ ನಡೆಸಲು ಯೋಜಿಸಿದ್ದ ಕುಸ್ತಿಪಟುಗಳ ಮೇಲೆ ಪೊಲೀಸ್ ದೌರ್ಜನ್ಯದ ಫೋಟೋಗಳು ಮತ್ತು ಸುದ್ದಿ ವೈರಲ್ ಆಗಿ, ಅಂತರ್ಜಾಲದಲ್ಲಿ ತೀವ್ರ ಟೀಕೆಗೆ ಗುರಿಯಾಗಿದೆ.

- Advertisement -

ನೂತನ ಸಂಸತ್ ಭವನ ಉದ್ಘಾಟನಾ ಸಮಾರಂಭದ ಸ್ಥಳಕ್ಕೆ ಪ್ರತಿಭಟನಾ ಮೆರವಣಿಗೆ ನಡೆಸಲು ಯತ್ನಿಸಿದ ಕುಸ್ತಿಪಟುಗಳು ಈಗ ಪೊಲೀಸರ ಬಂಧಿಯಾಗಿದ್ದಾರೆ. ವಿನೇಶ್ ಪೋಗಟ್, ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪೂನಿಯಾ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಲೈಂಗಿಕ ಕಿರುಕುಳ ಮತ್ತು ಬೆದರಿಕೆ ಆರೋಪದ ಮೇಲೆ ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬೃಜ್ ಭೂಷಣ್ ಸಿಂಗ್ ಅವರನ್ನು ಬಂಧಿಸಬೇಕು ಎಂದು ಕುಸ್ತಿಪಟುಗಳು ಒತ್ತಾಯಿಸಿದ್ದಾರೆ. ಕುಸ್ತಿಪಟುಗಳು ಜಂತರ್ ಮಂತರ್‌ನಲ್ಲಿ ಕಳೆದ ಕೆಲವು ವಾರಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ, ಕೇಂದ್ರ ಸರ್ಕಾರ ಬೃಜ್‌ಭೂಷಣ್ ಮೇಲೆ ಕ್ರಮ ಕೈಗೊಂಡಿಲ್ಲ.

‘ಸಂಸತ್ ಭವನದ ಉದ್ಘಾಟನಾ ಸಮಾರಂಭಕ್ಕೆ ತೊಂದರೆಯಾಗಬಾರದೆಂದು ಮುನ್ನೆಚ್ಚರಿಕೆ ದೃಷ್ಟಿ’ ಎಂದು ಹೇಳಿಕೊಂಡು ಪೊಲೀಸರು ಕುಸ್ತಿಪಟುಗಳ ಪ್ರತಿಭಟನೆ ನಡೆಸುತ್ತಿರುವ ಜಂತರ್ ಮಂತರ್‌ಗೆ ತೆರಳಿದ್ದಾರೆ. ಈ ವೇಳೆ ಕುಸ್ತಿಪಟುಗಳು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ. ಪೊಲೀಸರು ಕೆಲವರನ್ನು ವಶಕ್ಕೆ ಪಡೆದಿದ್ದಾರೆ ಎಂದು ಕುಸ್ತಿಪಟು ವಿನೇಶ್ ಫೋಗಟ್ ಆರೋಪಿಸಿದ್ದಾರೆ.

ಈ ಕುರಿತು ತಮ್ಮ ಟ್ವಿಟರ್ ಖಾತೆಯಲ್ಲಿ ವಿಡಿಯೊವೊಂದನ್ನು ಹಂಚಿಕೊಂಡಿರುವ ವಿನೇಶ್ ಫೋಗಟ್ ಅವರು, “ಪ್ರಜಾಪ್ರಭುತ್ವವನ್ನು ಬಹಿರಂಗವಾಗಿಯೇ ಹತ್ಯೆ ಮಾಡಲಾಗುತ್ತಿದೆ” ಎಂದು ಹೇಳಿದ್ದಾರೆ.

ನೂತನ ಸಂಸತ್ ಭವನ ಉದ್ಘಾಟನೆಯಾಗುತ್ತಿರುವ ಸಂದರ್ಭದಲ್ಲಿ ತಮ್ಮ ಹಕ್ಕಿಗಾಗಿ ಒತ್ತಾಯಿಸುತ್ತಿರುವ ಮಹಿಳೆಯರನ್ನು ಹತ್ತಿಕ್ಕಲಾಯಿತು ಎಂಬುದನ್ನು ದೇಶ ನೆನಪಿಟ್ಟುಕೊಳ್ಳಲಿದೆ ಎಂದು ಅವರು ಹೇಳಿದ್ದಾರೆ.

“ನೂತನ ಸಂಸತ್ ಭವನಕ್ಕೆ ಕುಸ್ತಿಪಟುಗಳು ಹಮ್ಮಿಕೊಂಡಿರುವ ಪ್ರತಿಭಟನಾ ಮೆರವಣಿಗೆಗೂ ಮುನ್ನ ದೆಹಲಿಯ ಗಡಿ ಪ್ರದೇಶಗಳಾದ ಸಿಂಘು, ಟಿಕ್ಕಿ ಹಾಗೂ ಘಾಝಿಪುರದಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಪ್ರತಿಭಟನಾಕಾರರು ಖಾಪ್ ಪಂಚಾಯತ್‌ನಲ್ಲಿ ಪಾಲ್ಗೊಳ್ಳದಂತೆ ತಡೆಯಬೇಕು ಎಂದು ತಮಗೆ ಸೂಚಿಸಲಾಗಿದೆ” ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

“ನಾವು ಈವರೆಗೆ ಯಾರನ್ನೂ ವಶಕ್ಕೆ ಪಡೆದಿಲ್ಲ. ನೂತನ ಸಂಸತ್ ಭವನದ ಉದ್ಘಾಟನೆ ಇರುವುದರಿಂದ ದೆಹಲಿ ತೊರೆಯುವಂತೆ ರೈತರಿಗೆ ಕೇಳಿಕೊಳ್ಳುತ್ತೇವೆ. ನಾವು ನಮ್ಮ ಕ್ರೀಡಾಪಟುಗಳನ್ನು ಗೌರವಿಸುತ್ತೇವೆ. ಆದರೆ, ಉದ್ಘಾಟನೆಯಲ್ಲಿ ಯಾವುದೇ ತೊಂದರೆಯಾಗಲು ಬಿಡುವುದಿಲ್ಲ” ಎಂದು ಕಾನೂನು ಮತ್ತು ಸುವ್ಯವಸ್ಥೆಯ ವಿಶೇಷ ಪೊಲೀಸ್ ಆಯುಕ್ತ ದೇಪೇಂದ್ರ ಪಾಠಕ್ ತಿಳಿಸಿದರು.

ಈ ನಡುವೆ, ಭಾರತ್ ಕಿಸಾನ್ ಯೂನಿಯನ್ ಮುಖ್ಯಸ್ಥ ಗುರುನಾಮ್ ಸಿಂಗ್ ಸೇರಿದಂತೆ ಹಲವು ರೈತರನ್ನು ಅವರ ನಿವಾಸಗಳಿಂದ ಹರಿಯಾಣದಲ್ಲಿ ವಶಕ್ಕೆ ಪಡೆಯಲಾಗಿದೆ. ರೈತರು ಪ್ರತಿಭಟನಾನಿರತ ಕುಸ್ತಿಪಟುಗಳ ಪರವಾಗಿ ದೆಹಲಿಗೆ ಮೆರವಣಿಗೆ ನಡೆಸಲು ಯೋಜಿಸಿದ್ದರು.

ದೆಹಲಿ ಪೊಲೀಸರು ಕಾನೂನು ಸುವ್ಯವಸ್ಥೆ ಪರಿಸ್ಥಿತಿಯನ್ನು ನಿಯಂತ್ರಿಸುವ ನೆಪದಲ್ಲಿ ಪ್ರತಿಭಟನಾಕಾರರು ಬಂಧಿಸಲು ಹೊರ ದಿಲ್ಲಿಯ ಬವಾನಾದ ಎಂಸಿಡಿ ಶಾಲೆಯಲ್ಲಿ ತಾತ್ಕಾಲಿಕ ಕಾರಾಗೃಹ ನಿರ್ಮಿಸಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಈ ಸುದ್ದಿ ಓದಿದ್ದೀರಾ? ನೀವು ದಲಿತರನ್ನು ಅಪ್ಪಿಕೊಳ್ಳುತ್ತೀರಾ?: ಆರ್‌ಎಸ್‌ಎಸ್‌-ಬಿಜೆಪಿ ಪ್ರಶ್ನಿಸಿದ ರಾಜಸ್ಥಾನ ಸಿಎಂ

ಹೊಸ ಸಂಸತ್ ಭವನದ ಉದ್ಘಾಟನೆ ಮತ್ತು ಕುಸ್ತಿಪಟುಗಳಿಂದ ಯೋಜಿತ ‘ಮಹಿಳಾ ಮಹಾಪಂಚಾಯತ್’ (ಮಹಿಳಾ ಮಹಾಸಭೆ) ಗಾಗಿ ಭದ್ರತಾ ಕ್ರಮಗಳ ಭಾಗವಾಗಿ ಕೇಂದ್ರ ದೆಹಲಿಯಲ್ಲಿ ಸಾವಿರಾರು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ದೆಹಲಿ ಮೆಟ್ರೋದ ಕೇಂದ್ರ ಸಚಿವಾಲಯ ಮತ್ತು ಉದ್ಯೋಗ್ ಭವನ ನಿಲ್ದಾಣಗಳಲ್ಲಿನ ಎಲ್ಲ ಪ್ರವೇಶ ಮತ್ತು ನಿರ್ಗಮನ ದ್ವಾರಗಳನ್ನು ಅಧಿಕಾರಿಗಳು ಮುಚ್ಚಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ ಕಳೆದುಹೋದರೆ ಪ್ರಜಾಪ್ರಭುತ್ವ ಕಳೆದುಹೋಗುತ್ತದೆ: ಅಭಿಜೀತ್ ದೀಪ್ಕೆ

ದೇಶದಲ್ಲಿ ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಜನರು ಎಚ್ಚೆತ್ತುಕೊಂಡು...

ಎಐ ದುರ್ಬಳಕೆ; ಅಶ್ಲೀಲ ವಿಡಿಯೋ, ಫೋಟೋ ವೈರಲ್: ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಕಂಗನಾ

ಸಾಮಾಜಿಕ ಜಾಲತಾಣಗಳಲ್ಲಿ ಎಐ ತಂತ್ರಜ್ಞಾನ ಬಳಸಿ ರಚಿಸಲಾದ ಅಶ್ಲೀಲ ಮತ್ತು ನಕಲಿ...

ಪ್ರಧಾನಿ ಮೋದಿ ‘ವೋಟ್ ಚೋರ್, ಗದ್ದಿ ಚೋರ್’ – ಪ್ರಕಾಶ್ ರಾಜ್ ಆಕ್ರೋಶ

ಬೆಂಗಳೂರಿನಲ್ಲಿ 'ಎಸ್‌ಐಆರ್ ವಿರೋಧಿ ಕರ್ನಾಟಕ' ಸಂಘಟನೆಯು ಆಯೋಜಿಸಿದ್ದ 'ಜನತಾ ನ್ಯಾಯಾಲಯ' ಕಾರ್ಯಕ್ರಮದಲ್ಲಿ...