ಪೂರ್ವ ಕರಾವಳಿಯಲ್ಲಿ ಮಿಚಾಂಗ್ ಚಂಡಮಾರುತದ ಅಬ್ಬರ ಹೆಚ್ಚಾಗಿದೆ. ಚೆನ್ನೈ ಸೇರಿದಂತೆ ಉತ್ತರ ತಮಿಳುನಾಡಿನ ಹಲವಾರು ಪ್ರದೇಶಗಳಲ್ಲಿ ಭಾರೀ ಮಳೆ ಸುರಿಯುತ್ತಿದೆ. ರಾಜ್ಯದ ನಾನಾ ಭಾಗಗಳು ಜಲಾವೃತವಾಗಿವೆ. ಜನಜೀವನ ಅಸ್ತವ್ಯಸ್ಥವಾಗಿದೆ. ಡಿಸೆಂಬರ್ 6ರವರೆಗೆ ಸುಮಾರು 120 ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಚೆನ್ನೈಗೆ ತೆರಳಬೇಕಿದ್ದ ವಿಮಾನಗಳನ್ನು ಬೆಂಗಳೂರಿಗೆ ತಿರುಗಿಸಲಾಗಿದೆ.
ಚೆನ್ನೈ, ಕಾಂಚೀಪುರಂ, ತಿರುವಳ್ಳೂರು ಮತ್ತು ಚೆಂಗಲ್ಪಟ್ಟು ಜಿಲ್ಲೆಗಳಲ್ಲಿ ಸಾರ್ವಜನಿಕ ರಜೆ ಘೋಷಿಸಲಾಗಿದೆ. ಬೀಚ್‌ಗೆ ತೆರಳದಂತೆ ಪೊಲೀಸರು ಸೂಚನೆ ನೀಡಿದ್ದಾರೆ. ಚೆನ್ನೈ ನಗರ ಜಲಾವೃತವಾಗಿದ್ದು, ತಿರುವಲ್ಲೂರು ಮತ್ತು ಚೆನ್ನೈ ಜನರು ಎರಡು ದಿನಗಳ ಕಾಲ ಮನೆಯಿಂದ ಹೊರ ಬರದಂತೆ ಹವಾಮಾನ ಇಲಾಖೆ ತಿಳಿಸಿದೆ.
ಚೆನ್ನೈ, ತಿರುವಳ್ಳೂರು, ಚೆಂಗಲ್ಪಟ್ಟು ಮತ್ತು ಕಾಂಚೀಪುರಂ, ತಿರುವಣ್ಣಾಮಲೈ, ವಿಲ್ಲುಪುರಂ, ಕಡಲೂರು, ಮೈಲಾಡುತುರೈ, ತಂಜಾವೂರು, ಅರಿಯಲೂರು, ಪೆರಂಬಲೂರು, ಕಲ್ಲಕುರಿಚ್ಚಿ, ವೆಲ್ಲೂರು, ತಿರುಪತ್ತೂರು, ಧರ್ಮಪುರಿ, ಕೃಷ್ಣಗಿರಿ ಸೇಲಂ, ನಾಮಕ್ಕಲ್ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.