ಗುಜರಾತ್ ಸರ್ಕಾರಿ ಕಚೇರಿಗಳ ಅಧಿಕೃತ ಭಾವಚಿತ್ರಗಳಲ್ಲಿ ಅಂಬೇಡ್ಕರ್ ಭಾವಚಿತ್ರವಿಲ್ಲ

Date:

ಗುಜರಾತ್‌ನ ಸರ್ಕಾರಿ ಕಚೇರಿಗಳ ಅಧಿಕೃತ ಭಾವಚಿತ್ರಗಳಲ್ಲಿ 8 ನಾಯಕರ ಭಾವಚಿತ್ರಗಳಿವೆ ಎಂದು ಆರ್‌ಟಿಐನಲ್ಲಿ ಕೇಳಿದ ಪ್ರಶ್ನೆಗೆ ರಾಜ್ಯ ಸರ್ಕಾರ ಉತ್ತರ ನೀಡಿದೆ.

- Advertisement -

ಮಹಾತ್ಮ ಗಾಂಧಿ, ಜವಾಹರ್‌ಲಾಲ್‌ ನೆಹರು, ಸರ್ದಾರ್‌ ವಲ್ಲಬಾಯಿ ಪಟೇಲ್, ಹಾಲಿ ರಾಷ್ಟ್ರಪತಿ, ಹಾಲಿ ಪ್ರಧಾನಿ, ಭಾರತ ಮಾತೆ, ಪಂಡಿತ್‌ ದೀನ್‌ ದಾಯಳ್ ಉಪಾಧ್ಯಾಯ ಹಾಗೂ ಶ್ಯಾಮ್ ಪ್ರಸಾದ್ ಮುಖರ್ಜಿ ಭಾವಚಿತ್ರಗಳನ್ನು ಮಾತ್ರ ಅಧಿಕೃತವಾಗಿ ಇಡಲು ಅನುಮತಿಸಲಾಗಿದೆ ಎಂದು ಗುಜರಾತ್‌ನ ಸರ್ಕಾರ ಉತ್ತರ ಕೊಟ್ಟಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಕೆಲವು ಜಿಲ್ಲಾ ಕಚೇರಿಗಳಲ್ಲಿ ಸ್ಥಳೀಯ ಹುತಾತ್ಮರ ಭಾವಚಿತ್ರಗಳನ್ನು ಅನುಮತಿಸಲಾಗಿದೆ ಎಂದು ಸರ್ಕಾರ ತನ್ನ ಉತ್ತರದಲ್ಲಿ ತಿಳಿಸಿದೆ.

ಗುಜರಾತ್‌ನ ಭಾವ್‌ನಗರದ ದಲಿತ ಹಕ್ಕುಗಳ ಕಾರ್ಯಕರ್ತ ದಾಹ್ಯಾಬಾಯಿ ಚೌಹಾಣ್ ಅವರು ಗುಜರಾತ್‌ನ ಸರ್ಕಾರಿ ಕಚೇರಿಗಳಲ್ಲಿ ಅಲಂಕರಿಸಿರುವ ಅಧಿಕೃತ ಭಾವಚಿತ್ರಗಳ ಬಗ್ಗೆ ಸಾಮಾನ್ಯ ಆಡಳಿತ ಇಲಾಖೆ(ಜಿಎಡಿ)ಗೆ ಅರ್‌ಟಿಐ ಅಡಿ ಅರ್ಜಿ ಸಲ್ಲಿಸಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ಅಹಮಿಕೆಯೇ ಬಿಜೆಪಿ ಪ್ರಣಾಳಿಕೆ- ಬಡಜನತೆಯ ಕಷ್ಟ ಕಣ್ಣೀರು ಲೆಕ್ಕಕ್ಕಿಲ್ಲ

ಚೌಹಾಣ್ ಅವರು ಕೆಲವು ಸರ್ಕಾರಿ ಕಚೇರಿಗಳಲ್ಲಿ ಅನಧಿಕೃತವಾಗಿ ಇಟ್ಟಿರುವ ಭಾವಚಿತ್ರಗಳ ಬಗ್ಗೆಯೂ ಪ್ರಶ್ನಿಸಿದ್ದಾರೆ. ಅಲ್ಲದೆ ಸರ್ಕಾರಿ ಕಚೇರಿಗಳಲ್ಲಿರುವ ಅನಧಿಕೃತ ದೇವರ ಭಾವಚಿತ್ರಗಳ ವಿವರಗಳನ್ನು ಕೂಡ ಕೇಳಿದ್ದಾರೆ.

ಚೌಹಾಣ್ ಅವರ ಪ್ರಶ್ನೆಗೆ ಜಿಎಡಿಯ ಕಾರ್ಯದರ್ಶಿಯಾದ ಎಂ ಆರ್‌ ಮಲಿಕ್ ಉತ್ತರಿಸಿದ್ದು,ಸರ್ಕಾರಿ ಕಚೇರಿಗಳಲ್ಲಿ ಇಂತಹ ಭಾವಚಿತ್ರಗಳನ್ನು ಅನಧಿಕೃತವಾಗಿ ಬಳಸಲು ಯಾರಿಗೂ ಜವಾಬ್ದಾರಿ ನೀಡಿಲ್ಲ. ಸರ್ಕಾರ ಸರ್ಕಾರಿ ಕಚೇರಿಗಳಲ್ಲಿರುವ ದೇವರ ಭಾವಚಿತ್ರಗಳನ್ನು ಪಟ್ಟಿ ಮಾಡಿಲ್ಲ ಎಂದು ತಿಳಿಸಿದ್ದಾರೆ.

“ಸುಪ್ರೀಂ ಕೋರ್ಟ್ ಹಾಗೂ ಸಂವಿಧಾನವು ಸರ್ಕಾರಿ ಕಚೇರಿಗಳಲ್ಲಿ ಧಾರ್ಮಿಕ ಭಾವಚಿತ್ರಗಳನ್ನು ಬಳಸಲು ನಿಷೇಧಿಸಲಾಗಿದೆ. ಆದರೆ ಹಲವು ಕಚೇರಿಗಳಲ್ಲಿ ಈ ಪದ್ಧತಿಯಿದೆ. ಹಲವು ಕಚೇರಿಗಳಲ್ಲಿ ದೇವರ ಭಾವಚಿತ್ರಗಳು ಹಾಗೂ ಅವುಗಳಿಗೆ ಸಂಬಂಧಿಸಿದ ಸಂಕೇತಗಳಿವೆ. ಜಾತ್ಯತೀತ ರಾಷ್ಟ್ರವಾಗಿ ಅನಧಿಕೃತ ಭಾವಚಿತ್ರಗಳನ್ನು ಬಳಸುವಂತಿಲ್ಲ. ಈ ಕಾರಣಕ್ಕಾಗಿ ನಾನು ಅರ್ಜಿ ಸಲ್ಲಿಸಿದೆ. ಡಾ. ಬಿ ಆರ್ ಅಂಬೇಡ್ಕರ್ ಭಾವಚಿತ್ರವನ್ನು ಸರ್ಕಾರಿ ಅಧಿಕೃತ ಭಾವಚಿತ್ರಗಳ ಪಟ್ಟಿಯಿಂದ ಹೊರಗಿಟ್ಟಿರುವುದಕ್ಕೆ ನಾನು ಹೋರಾಟ ನಡೆಸುತ್ತೇನೆ. ಇದು ಸರ್ಕಾರದ ತಾರತಮ್ಯವನ್ನು ಸೂಚಿಸುತ್ತದೆ” ಎಂದು ಚೌಹಾನ್ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...