ಮಹಾ ಕುಂಭಮೇಳ | ಮಹಿಳೆಯರು ಸ್ನಾನ ಮಾಡುವ, ಬಟ್ಟೆ ಬದಲಾಯಿಸುವ ಚಿತ್ರಗಳ ಮಾರಾಟ!

Date:

ಮಹಾ ಕುಂಭಮೇಳದಲ್ಲಿ ಮಹಿಳೆಯರು ಸ್ನಾನ ಮಾಡುವ ಮತ್ತು ಬಟ್ಟೆ ಬದಲಾಯಿಸುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಚಿತ್ರಗಳನ್ನು ಪೋಸ್ಟ್ ಮಾಡುತ್ತಿರುವ ಮತ್ತು ಮಾರಾಟ ಮಾಡುತ್ತಿರುವ ಸಾಮಾಜಿಕ ಮಾಧ್ಯಮ ಖಾತೆಗಳ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಎರಡು ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.

- Advertisement -

ಮಾಧ್ಯಮಗಳ ವರದಿ ಪ್ರಕಾರ ಮಹಿಳೆಯರು ಸ್ನಾನ ಮಾಡುವ ಚಿತ್ರಗಳನ್ನು ಪೋಸ್ಟ್ ಮಾಡುತ್ತಿದ್ದ ಕಾರಣ @neha1224872024 ಎಂಬ ಇನ್‌ಸ್ಟಾಗ್ರಾಂ ಖಾತೆಯ ವಿರುದ್ಧ ಪ್ರಕರಣ ದಾಖಲಾಗಿದೆ. ಹಾಗೆಯೇ ಸಿಸಿಟಿವಿ ಚಾನೆಲ್ 11 ಎಂಬ ಟೆಲಿಗ್ರಾಂ ಖಾತೆ ವಿರುದ್ಧವೂ ಕ್ರಮ ಕೈಗೊಳ್ಳಲಾಗಿದೆ ಎಂದು ವರದಿ ಉಲ್ಲೇಖಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಇದನ್ನು ಓದಿದ್ದೀರಾ? ಮಹಾ ಕುಂಭಮೇಳವನ್ನು ‘ಮೃತ್ಯು ಕುಂಭ’ ಎಂದು ಕರೆದ ಮಮತಾ ಬ್ಯಾನರ್ಜಿ

ಮೊದಲು ಮಹಾ ಕುಂಭಮೇಳದಲ್ಲಿ ಮಹಿಳೆಯರು ಸ್ನಾನ ಮಾಡುವ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, ಬಳಿಕ ಸಣ್ಣ ವಿಡಿಯೋ ತುಣುಕನ್ನು ಹಾಕಿ, ಸಂಪೂರ್ಣ ವಿಡಿಯೋವನ್ನು ಟೆಲಿಗ್ರಾಂ ಮೂಲಕ ಖರೀದಿ ಮಾಡುವಂತೆ ತಿಳಿಸಲಾಗಿದೆ.

Advertisements

‘ಗಂಗಾ ರಿವರ್ ಓಪನ್ ಬಾತಿಂಗ್ ಗ್ರೂಪ್’ ಮತ್ತು ‘ಹಿಡನ್ ಬಾತ್ ವಿಡಿಯೋ ಗ್ರೂಪ್’ ಎಂಬ ಹೆಸರಿನಲ್ಲಿ ಈ ಗುಂಪುಗಳಿವೆ. ಹಾಗೆಯೇ ಭಾರತದಲ್ಲಿ ಕಳೆದ ವಾರ ಓಪನ್ ಬಾತಿಂಗ್ ಎಂಬುದನ್ನು ಹುಡುಕಾಡುವವರ ಸಂಖ್ಯೆಯು ಅಧಿಕವಾಗಿದೆ ಎಂದು ವರದಿಯಾಗಿದೆ. ಈ ಟೆಲಿಗ್ರಾಂ ಚಾನೆಲ್‌ಗಳಿಗೆ ಸೇರಿಕೊಳ್ಳಲು 1999 ರೂಪಾಯಿಯಿಂದ 3 ಸಾವಿರ ರೂಪಾಯಿವರೆಗೆ ಹಣ ಪಡೆಯಲಾಗುತ್ತಿದೆ ಎಂದು ವರದಿ ಉಲ್ಲೇಖಿಸಿದೆ.

ಇದನ್ನು ಓದಿದ್ದೀರಾ? ಮಹಾ ಕುಂಭಮೇಳ ಕಾಲ್ತುಳಿತ | ಈವರೆಗೆ ಮೃತರ ನಿಖರ ಸಂಖ್ಯೆ ಯಾಕೆ ಬಹಿರಂಗಪಡಿಸಿಲ್ಲ: ಅಖಿಲೇಶ್ ಪ್ರಶ್ನೆ

mahakumbh2025, #gangasnan ಮತ್ತು #prayagrajkumbh ಎಂಬ ಹ್ಯಾಷ್‌ಟ್ಯಾಗ್‌ಗಳ ಮೂಲಕ ಫೇಸ್‌ಬುಕ್‌ ಪೇಜ್‌ನಲ್ಲಿ ಈ ವಿಡಿಯೋಗಳನ್ನು ಹರಡಲಾಗುತ್ತಿದೆ. ಇನ್ನು ಮಹಿಳೆಯರಿಗೆ ತಮ್ಮ ವಿಡಿಯೋವನ್ನು ಮಾಡಲಾಗುತ್ತಿದೆ ಎಂಬ ಬಗ್ಗೆ ಮಾಹಿತಿಯೇ ಇಲ್ಲ ಎಂಬುದು ವಿಡಿಯೋ ನೋಡಿದಾಗ ತಿಳಿದುಬರುತ್ತದೆ ಎಂದು ವರದಿಯಾಗಿದೆ.

ಈ ಖಾತೆಗಳ ಮೂಲಕ ಮಹಿಳೆಯರು ಕುಂಭಮೇಳದಲ್ಲಿ ಸ್ನಾನ ಮಾಡುವ ವಿಡಿಯೋಗಳನ್ನು ಹರಡುತ್ತಿರುವವರ ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ. ಈ ನಡುವೆ ಮಹಾ ಕುಂಭಮೇಳದ ಬಗ್ಗೆ ಸುಳ್ಳು ಮಾಹಿತಿ ಹರಡಿದ ಆರೋಪದಲ್ಲಿ 101 ಸಾಮಾಜಿಕ ಮಾಧ್ಯಮ ಖಾತೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದ್ದು, 10 ಪ್ರಕರಣಗಳನ್ನು ದಾಖಲಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಉತ್ತರ ಪ್ರದೇಶ: ಪ್ರಜಾಪ್ರಭುತ್ವ ಹೋರಾಟಗಾರರಿಗೆ ಅಖಿಲೇಶ್ ಮಾಸಿಕ ₹51,000 ಪಿಂಚಣಿ ಭರವಸೆ

ಉತ್ತರ ಪ್ರದೇಶದಲ್ಲಿ 2027ರಲ್ಲಿ ಸಮಾಜವಾದಿ ಪಕ್ಷ (ಎಸ್‌ಪಿ) ಸರ್ಕಾರ ರಚಿಸಿದರೆ, 1975ರ...