ಪಿಣರಾಯಿ ವಿಜಯನ್ ಮಗಳಿಗೆ ಇಡಿ ಸಂಕಷ್ಟ: ವೀಣಾ ಕೈಬರಹದ ಟಿಪ್ಪಣಿ ವಶಕ್ಕೆ

Date:

ಕೇರಳದ ಮಾಜಿ ಮುಖ್ಯಮಂತ್ರಿ ಹಾಗೂ ಪ್ರಸ್ತುತ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಪಿಣರಾಯಿ ವಿಜಯನ್ ಅವರ ಪುತ್ರಿ ಟಿ. ವೀಣಾ ಅವರಿಗೆ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇಡಿ) ಸಂಕಷ್ಟ ಮತ್ತೆ ಎದುರಾಗಿದೆ. ಮಾಸಿಕ ಕೊಡು-ಕೊಳ್ಳುವಿಕೆ (Monthly Quid Pro Quo) ಹಗರಣದ ತನಿಖೆಯನ್ನು ತೀವ್ರಗೊಳಿಸಿರುವ ಇಡಿ ಅಧಿಕಾರಿಗಳು, ವೀಣಾ ಅವರ ಕೈಬರಹದ ಪ್ರಮುಖ ಟಿಪ್ಪಣಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ.

- Advertisement -

ಖಾಸಗಿ ರಸಗೊಬ್ಬರ ಹಾಗೂ ಖನಿಜ ಸಂಸ್ಥೆಯಾದ ಕೊಚ್ಚಿನ್ ಮಿನರಲ್ಸ್ ಅಂಡ್ ರೂಟೈಲ್ ಲಿಮಿಟೆಡ್ (CMRL) ಸಂಸ್ಥೆಯಿಂದ ವೀಣಾ ಅವರ ಐಟಿ ಸಂಸ್ಥೆಯಾದ ‘ಎಕ್ಸಾಲಾಜಿಕ್ ಸೊಲ್ಯೂಷನ್ಸ್’ ಯಾವುದೇ ಸೇವೆ ನೀಡದೆ ಕೋಟ್ಯಂತರ ರೂಪಾಯಿ ಹಣ ಪಡೆದಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ, ಇತ್ತೀಚೆಗೆ ನಡೆಸಿದ ಶೋಧ ಕಾರ್ಯಾಚರಣೆ ವೇಳೆ ಹಣಕಾಸು ವ್ಯವಹಾರ ಹಾಗೂ ಪಾವತಿಗಳಿಗೆ ಸಂಬಂಧಿಸಿದ ಕೈಬರಹದ ಪ್ರಮುಖ ದಾಖಲೆಗಳು ಮತ್ತು ಟಿಪ್ಪಣಿಗಳನ್ನು ಜಪ್ತಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನೂ ಓದಿ: ಕೇರಳದ ಅಸಲಿ ಕಥೆಯೇ ಬೇರೆ : ಪಿಣರಾಯಿ ವಿಜಯನ್‌

ವಶಪಡಿಸಿಕೊಳ್ಳಲಾದ ಟಿಪ್ಪಣಿಯಲ್ಲಿ ಸಿಎಮ್‌ಆರ್‌ಎಲ್‌ ಸಂಸ್ಥೆಯಿಂದ ಎಕ್ಸಾಲಾಜಿಕ್ ಸಂಸ್ಥೆಗೆ ಹಂತ-ಹಂತವಾಗಿ ವರ್ಗಾವಣೆಯಾದ ಹಣದ ವಿವರಗಳು ಹಾಗೂ ಕೆಲವು ಸಂಕೇತನಾಮಗಳು (Coded Names) ಇವೆ ಎಂದು ಹೇಳಲಾಗಿದೆ.

ಸಂಸ್ಥೆಯು ಸೇವೆ ಒದಗಿಸದಿದ್ದರೂ ಕೋಟ್ಯಂತರ ರೂಪಾಯಿ ಪಾವತಿಸಿರುವುದು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (PMLA) ವ್ಯಾಪ್ತಿಗೆ ಬರಲಿದ್ದು, ಶೀಘ್ರದಲ್ಲೇ ವೀಣಾ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಇಡಿ ಸಮನ್ಸ್ ಜಾರಿ ಮಾಡುವ ಸಾಧ್ಯತೆಯಿದೆ.

ಈ ನಡುವೆ ಕೇಂದ್ರದ ಮೋದಿ ಸರ್ಕಾರವು ವಿಪಕ್ಷಗಳ ನಾಯಕರ ಮೇಲೆಯೇ ಇಡಿ, ಸಿಬಿಐ ಬಳಸಿಕೊಳ್ಳುತ್ತಿದೆ ಎಂಬ ಆರೋಪವನ್ನು ಎಡಪಕ್ಷ, ಕಾಂಗ್ರೆಸ್ ಮಾಡುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ ಉದ್ಘಾಟನೆಗೆ ಅಭಿನವ ಗವಿಸಿದ್ದೇಶ್ವರ ಶ್ರೀಗೆ ಆಹ್ವಾನ

ಕೊಪ್ಪಳದ ಗವಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಅವರು ಈ...

ಪತ್ರಕರ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಮಹಿಳೆಯರಿಗೆ ಸುರಕ್ಷತೆಯೇ ಇಲ್ಲವೇ: ಮೋಶಾಗೆ ಪ್ರಿಯಾಂಕಾ ಗಾಂಧಿ ಪ್ರಶ್ನೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಯ ವರದಿಗಾರಿಕೆ ಮಾಡುತ್ತಿದ್ದ ಮಹಿಳಾ ಪತ್ರಕರ್ತೆಯರ ಮೇಲೆ...