ಕುವೈತ್‌ನಿಂದ 45 ಭಾರತೀಯರ ಮೃತದೇಹಗಳನ್ನು ಕೇರಳಕ್ಕೆ ಕರೆತಂದ ವಿಮಾನ

Date:

ಕುವೈತ್‌ ಬೆಂಕಿ ದುರಂತದಲ್ಲಿ ಮೃತಪಟ್ಟ 45 ಭಾರತೀಯರನ್ನು ಕರೆತಂದಿರುವ ವಾಯುಪಡೆಯ ವಿಶೇಷ ವಿಮಾನ ಕೇರಳದ ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂದು 10.30ಕ್ಕೆ ಲ್ಯಾಂಡ್‌ ಆಗಿದೆ.

- Advertisement -

ಕುವೈತ್‌ಗೆ ತೆರಳಿದ್ದ ವಿದೇಶಾಂಗ ಇಲಾಖೆಯ ರಾಜ್ಯ ಖಾತೆಯ ಕೇಂದ್ರ ಸಚಿವ ಕೃತಿ ವರ್ಧನ್‌ ಸಿಂಗ್‌ ಅವರು ವಿಮಾನ ಲ್ಯಾಂಡ್‌ ಆಗಿರುವ ಬಗ್ಗೆ ದೃಢೀಕರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಕುವೈತ್‌ನ ಮಂಗಾಫ್ ನಗರದ ಆರು ಅಂತಸ್ತಿನ ಕಟ್ಟಡದಲ್ಲಿ ಬುಧವಾರ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಕನಿಷ್ಠ 48 ಮಂದಿ ಸಾವನ್ನಪ್ಪಿದ್ದಾರೆ. ವಸತಿ ಸೌಲಭ್ಯದಲ್ಲಿರುವ 176 ಭಾರತೀಯ ಕಾರ್ಮಿಕರಲ್ಲಿ 45 ಮಂದಿ ಸಾವನ್ನಪ್ಪಿದ್ದು, 33 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ರಾಯಭಾರ ಕಚೇರಿ ತಿಳಿಸಿದೆ.ಉಳಿದವರು ಸುರಕ್ಷಿತವಾಗಿದ್ದಾರೆ ಎಂದು ವರದಿಯಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೊಡುವ ಸ್ಥಾನದಲ್ಲಿರುವವರು ಒಳ್ಳೆಯದನ್ನೇ ಕೊಡಬೇಕು ಎಂದು ರಾಜ್ ಹೇಳಿದ್ದು ಯಾರಿಗೆ?

ಭಾರತೀಯರಲ್ಲಿ, 23 ಕೇರಳದಿಂದ, ಏಳು ತಮಿಳುನಾಡಿನಿಂದ, ತಲಾ ಇಬ್ಬರು ಆಂಧ್ರಪ್ರದೇಶ ಮತ್ತು ಒಡಿಶಾದಿಂದ ಮತ್ತು ಬಿಹಾರ, ಮಧ್ಯಪ್ರದೇಶ, ಕರ್ನಾಟಕ, ಪಶ್ಚಿಮ ಬಂಗಾಳ ಮತ್ತು ಉತ್ತರ ಪ್ರದೇಶದ ತಲಾ ಒಬ್ಬರು ಸೇರಿದ್ದಾರೆ.

ಸಂತ್ರಸ್ತರಲ್ಲಿ ಕೆಲವರು ಇತ್ತೀಚೆಗೆ ಕುವೈತ್‌ಗೆ ಕೆಲಸದ ನಿಮಿತ್ತ ತೆರಳಿದ್ದರೆ, ದಶಕಗಳಿಂದ ದೇಶದಲ್ಲಿ ನೆಲೆಸಿರುವ ಹಲವರು ಇದ್ದಾರೆ.

ಸಂತ್ರಸ್ತರಲ್ಲಿ ಹೆಚ್ಚಿನವರು ಕುವೈತ್‌ನಲ್ಲಿ ದೇಶದ ಅತಿದೊಡ್ಡ ನಿರ್ಮಾಣ ಸಂಸ್ಥೆಯಾದ ಎನ್‌ಟಿಬಿಸಿಯಲ್ಲಿ ಕೆಲಸ ಮಾಡುತ್ತಿದ್ದರು. ಬೆಂಕಿ ಹೊತ್ತಿಕೊಂಡ ಕಟ್ಟಡವೂ ಎನ್‌ಟಿಬಿಸಿಗೆ ಸೇರಿದ್ದಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಳೆಯ ಪ್ರಕರಣ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳ ಸರ್ಕಾರ ಆದೇಶ

20೦6ರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಾಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...

ಜಿಎಸ್‌ಟಿ ದಸ್ತಗಿರಿ ಅಧಿಕಾರ ಹಿಂಪಡೆಯುವ ಪ್ರಸ್ತಾಪ: ಆಡಂಬರದ ಜಾರಿಯೂ ಇಂದಿನ ಭ್ರಮನಿರಸನವೂ….

2017ರ ಜೂನ್ 30ರ ಮಧ್ಯರಾತ್ರಿ ಭಾರತದ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ಕರೆಯಾಗಿತ್ತು....

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಬಗ್ಗೆ ದೂರಿದ್ದ ಎಎಪಿ ಶಾಸಕ ಅಮಾನತು

ತಮ್ಮ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ಹೆಚ್ಚಿದೆ ಎಂದು ತಮ್ಮದೇ...