ವಿಮಾನ ದುರಂತ | ಘಟನಾ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

Date:

230 ಮಂದಿ ಪ್ರಯಾಣಿಕರು ಮತ್ತು 12 ಮಂದಿ ಸಿಬ್ಬಂದಿಗಳ ದಾರುಣ ಸಾವಿಗೆ ಕಾರಣವಾದ ಅಹಮದಾಬಾದ್ ವಿಮಾನ ದುರಂತ ಕುರಿತು ತನಿಖೆ ಆರಂಭವಾಗಿದು, ಘಟನಾ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಭೇಟಿ ನೀಡಿದ್ದಾರೆ.

- Advertisement -

ಅಹಮದಾಬಾದ್‌ನಲ್ಲಿ ನಡೆದ ದುರಂತ ಘಟನೆಯ ನಂತರ, ಅಂತರರಾಷ್ಟ್ರೀಯ ನಾಗರಿಕ ವಿಮಾನಯಾನ ಸಂಸ್ಥೆ ನಿಗದಿಪಡಿಸಿರುವ ಅಂತರರಾಷ್ಟ್ರೀಯ ನಿಯಮಗಳಿಗೆ ಅನುಗುಣವಾಗಿ ವಿಮಾನ ಅಪಘಾತ ತನಿಖಾ ಬ್ಯೂರೋ (ಇದು ನಾಗರಿಕ ವಿಮಾನಯಾನ ಸಚಿವಾಲಯದ ಅಡಿಯಲ್ಲಿ ಸ್ವತಂತ್ರ ನಿಯಂತ್ರಕ ಸಂಸ್ಥೆಯಾಗಿದೆ) ಔಪಚಾರಿಕ ತನಿಖೆಯನ್ನು ಪ್ರಾರಂಭಿಸಿದೆ ಎಂದು ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಕಿಂಜರಾಪು ಅವರು ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ವಿಮಾನ ದುರಂತ ಘಟನೆಯ ಬಳಿಕ ವಿಮಾನ ನಿಲ್ದಾಣದಲ್ಲಿ ಎಲ್ಲ ವಿಮಾನ ಕಾರ್ಯಾಚರಣೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಘಟನೆ ಬೆನ್ನಲ್ಲೇ ವಿಮಾನ ಸುರಕ್ಷತಾ ಪ್ರೋಟೋಕಾಲ್‌ಗಳನ್ನು ಅತ್ಯಂತ ಎಚ್ಚರಿಕೆಯಿಂದ ಅನುಸರಿಸಲಾಗುತ್ತಿದೆ. ಅಹಮದಾಬಾದ್ ವಿಮಾನ ನಿಲ್ದಾಣವು ಸಂಜೆ 4.05 ರಿಂದ ವಿಮಾನ ಕಾರ್ಯಾಚರಣೆಗಳಿಗೆ ಲಭ್ಯವಿರಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮೆಡಿಕಲ್ ಕಾಲೇಜು ಹಾಸ್ಟೆಲ್​ ಮೇಲೆಯೇ ವಿಮಾನ ಪತನವಾಗಿದ್ದರಿಂದ ಅಲ್ಲಿದ್ದವರೂ ಅನೇಕರು ಮೃತಪಟ್ಟಿದ್ದಾರೆ. ಸಾವಿನ ಬಗ್ಗೆ ಅಧಿಕೃತ ಘೋಷಣೆ ಡಿಎನ್​ಎ ಪರೀಕ್ಷೆಯ ನಂತರ ಪ್ರಕಟವಾಗಲಿದೆ.

ಮೋದಿ, ಶಾ ರಾಜೀನಾಮೆ ನೀಡಲಿ

ಲಂಡನ್‌ಗೆ ಅಲಹಾಬಾದ್‌ನಿಂದ ಹೊರಟಿದ್ದ ಏರ್ ಇಂಡಿಯಾ ವಿಮಾನ ಪತನವಾಗಿದೆ. ಇದರ ನೈತಿಕ ಹೊಣೆ ಹೊತ್ತು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕೇಂದ್ರ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರು ರಾಜೀನಾಮೆ ನೀಡಬೇಕು ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ಆಗ್ರಹಿಸಿದ್ದಾರೆ. 1950ರಲ್ಲಿ ರೈಲು ಅಪಘಾತ ಸಂಭವಿಸಿದಾಗ, ಲಾಲ್ ಬಹದ್ದೂರ್ ಶಾಸ್ತ್ರಿ ರಾಜೀನಾಮೆ ನೀಡಿದ್ದರು. ಅದೇ ನೈತಿಕತೆಯ ಆಧಾರದಲ್ಲಿ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ನಾಗರಿಕ ವಿಮಾನ ಸಚಿವ ರಾಮ್ ಮೋಹನ್ ನಾಯ್ಡು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...