ಒಂದೇ ದಿನ 11 ಲಕ್ಷ ಸಸಿ ನೆಟ್ಟ ಭಾರತದ ಸ್ವಚ್ಛ ನಗರ ಇಂದೋರ್; ವಿಶ್ವ ದಾಖಲೆ

Date:

ಭಾರತದ ಸ್ವಚ್ಛ ನಗರ ಇಂದೋರ್ ಭಾನುವಾರ ಒಂದೇ ದಿನದಲ್ಲಿ 11 ಲಕ್ಷ ಸಸಿಗಳನ್ನು ನೆಡುವ ಮೂಲಕ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿದೆ.

- Advertisement -

ಇಂದೋರ್‌ನ 40ಕ್ಕೂ ಹೆಚ್ಚು ಅನಿವಾಸಿ ಭಾರತೀಯರು (ಎನ್‌ಆರ್‌ಐ) ಸೇರಿದಂತೆ 30,000ಕ್ಕೂ ಹೆಚ್ಚು ಜನರು ಇಂದೋರ್-ಉಜ್ಜಯಿನಿ ರಸ್ತೆಯಲ್ಲಿರುವ ರೇವತಿ ರೇಂಜ್ ಗುಡ್ಡದ ಮೇಲೆ ಸಸಿಗಳನ್ನು ನೆಡುವ ಅಭಿಯಾನವನ್ನು ಮಾಡಿದ್ದು ವಿಶ್ವದಾಖಲೆಯನ್ನು ಬರೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಭಾನುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡಾ ಈ ಮೆಗಾ ಟ್ರೀ ಪ್ಲಾಂಟೇಶನ್ ಡ್ರೈವ್ ಅಡಿಯಲ್ಲಿ ಇಂದೋರ್‌ನಲ್ಲಿ ಸಸಿ ನೆಟ್ಟರು. ಇನ್ನು ಈ ಸಂಪೂರ್ಣ ಅಭಿಯಾನದ ಮೇಲೆ ಕಣ್ಣಿಡಲು 100 ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

ರಾಷ್ಟ್ರವ್ಯಾಪಿ ಅಭಿಯಾನದ ಅಡಿಯಲ್ಲಿ, ಮಧ್ಯಪ್ರದೇಶದಲ್ಲಿ 5.5 ಕೋಟಿ ಸೇರಿದಂತೆ ದೇಶಾದ್ಯಂತ 140 ಕೋಟಿ ಸಸಿಗಳನ್ನು ನೆಡಲಾಗುವುದು. ಈ ಪೈಕಿ ಮಧ್ಯಪ್ರದೇಶದ ಇಂದೋರ್‌ನಲ್ಲಿ 51 ಲಕ್ಷ ಸಸಿಗಳನ್ನು ನೆಡಲಾಗುತ್ತಿದೆ.

ಇದನ್ನು ಓದಿದ್ದೀರಾ?  ಉಡುಪಿ ಪ್ರಕರಣ | ’15 ನಿಮಿಷದಲ್ಲಿ 4 ಕೊಲೆ, ಇದು ವಿಶ್ವ ದಾಖಲೆ’ ಎಂದು ವಿಕೃತಿ ಮೆರೆದವನ ಮೇಲೆ ಎಫ್‌ಐಆರ್

ಅಸ್ಸಾಂ ಈ ಹಿಂದೆ ಒಂದೇ ದಿನದಲ್ಲಿ 9.26 ಲಕ್ಷ ಸಸಿಗಳನ್ನು ನೆಡುವ ಮೂಲಕ ವಿಶ್ವ ದಾಖಲೆಯನ್ನು ಬರೆದಿದೆ. ಭಾನುವಾರ ಇಂದೋರ್ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಶೂಟಿಂಗ್ ಶ್ರೇಣಿಯನ್ನು ಹೊಂದಿರುವ ಬೆಟ್ಟದ ಮೇಲೆ ಒಂದೇ ದಿನದಲ್ಲಿ 11 ಲಕ್ಷ ಸಸಿಗಳನ್ನು ನೆಡುವ ಮೂಲಕ ಅಸ್ಸಾಂನ ವಿಶ್ವ ದಾಖಲೆಯನ್ನು ಮುರಿದಿದೆ.

ಭಾನುವಾರ ಸಂಜೆ ಗಿನ್ನೆಸ್ ವಿಶ್ವ ದಾಖಲೆ ತಂಡದಿಂದ ಹೊಸ ವಿಶ್ವ ದಾಖಲೆಯ ಪ್ರಮಾಣಪತ್ರವನ್ನು ಮಧ್ಯ ಪ್ರದೇಶ ಮುಖ್ಯಮಂತ್ರಿ ಡಾ ಮೋಹನ್ ಯಾದವ್ ಅವರು ಸಚಿವ ಕೈಲಾಶ್ ವಿಜಯವರ್ಗಿಯ ಮತ್ತು ಇಂದೋರ್ ಮೇಯರ್ ಪುಷ್ಯಮಿತ್ರ ಭಾರ್ಗವ ಸಮ್ಮುಖದಲ್ಲಿ ಪಡೆದರು.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2 ರೂ.ಗಾಗಿ ಆಸೆಪಟ್ಟ ಹೋಟೆಲ್‌ಗೆ 1 ಲಕ್ಷ ರೂ. ದಂಡ!

ಮುದ್ರಿತ ‘ಗರಿಷ್ಠ ಚಿಲ್ಲರೆ ಬೆಲೆ’ಗಿಂತ (MRP) 2 ರೂಪಾಯಿ ಹೆಚ್ಚುವರಿ ವಸೂಲಿ...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ...

ಸಮಯೋಚಿತ ಕ್ರಮದಿಂದ ದೊಡ್ಡ ಮಟ್ಟದ ಅಶಾಂತಿ ತಪ್ಪಿತು: ಸುಪ್ರೀಂಗೆ ದೆಹಲಿ ಪೊಲೀಸ್ ಆಯುಕ್ತರ ಹೇಳಿಕೆ

ರಾಷ್ಟ್ರ ರಾಜಧಾನಿಯಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಗಳ ವೇಳೆ ಪೊಲೀಸರು ಕೈಗೊಂಡ ಸಮಯೋಚಿತ,...