ಚುನಾವಣಾ ಬಾಂಡ್ ಯೋಜನೆ ರದ್ದುಗೊಳಿಸಿದ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ!

Date:

ಕೇಂದ್ರ ನರೇಂದ್ರ ಮೋದಿ ಸರ್ಕಾರದ ಚುನಾವಣಾ ಬಾಂಡ್‌ ಯೋಜನೆಯನ್ನು ರದ್ದುಗೊಳಿಸಿದ ಫೆಬ್ರವರಿ 15 ರ ಸುಪ್ರೀಂ ಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ.

- Advertisement -

ವಕೀಲ ಮ್ಯಾಥ್ಯೂಸ್ ಜೆ. ನೆಡುಂಪಾರ ಅವರು ಈ ಮರುಪರಿಶೀಲನಾ ಅರ್ಜಿ ಸಲ್ಲಿಸಿದ್ದು, “ಈ ನ್ಯಾಯಾಲಯವು ಅರ್ಜಿಯನ್ನು (ಯೋಜನೆಯ ವಿರುದ್ಧ) ಪುರಸ್ಕರಿಸಿದೆ ಮತ್ತು ಯೋಜನೆಯನ್ನು ರದ್ದುಗೊಳಿಸಿದೆ. ಆದರೆ ರದ್ದು ಮಾಡುವಾಗ ಸಂಸತ್ತಿನ ಮೇಲೆ ಮೇಲ್ಮನವಿ ಪ್ರಾಧಿಕಾರವಾಗಿ ಕಾರ್ಯನಿರ್ವಹಿಸುತ್ತಿದೆ ಎಂಬುದನ್ನು ಗಮನಿಸಿಲ್ಲ” ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

 ಇದನ್ನು ಓದಿದ್ದೀರಾ?  ಚುನಾವಣಾ ಬಾಂಡ್ ಹಗರಣ | ದೇಣಿಗೆ ನೀಡಿ -ಗುತ್ತಿಗೆ ಪಡಿ; ಬಿಜೆಪಿಯ ದಂಧೆ ಜಗಜ್ಜಾಹೀರು  

“ಈ ವಿಚಾರವು ನ್ಯಾಯಸಮ್ಮತವಾಗಿದೆ ಎಂದು ಊಹಿಸುವಲ್ಲಿ ನ್ಯಾಯಾಲಯವು ವಿಫಲವಾಗಿದೆ. ಚುನಾವಣಾ ಬಾಂಡ್ ವಿರುದ್ಧದ ಅರ್ಜಿಯಲ್ಲಿ ಅರ್ಜಿದಾರರು ಅವರಿಗೆ ಪ್ರತ್ಯೇಕವಾಗಿ ಯಾವುದೇ ನಿರ್ದಿಷ್ಟ ಕಾನೂನು ಅಡೆತಡೆಗಳನ್ನು ಉಲ್ಲೇಖಿಸಿಲ್ಲ. ಹಾಗಿರುವಾಗ ಅರ್ಜಿಯನ್ನು ನಿರ್ದಿಷ್ಟ ಮತ್ತು ವಿಶೇಷವಾದ ಹಕ್ಕುಗಳ ಜಾರಿಗಾಗಿ ಖಾಸಗಿ ದಾವೆಯಂತೆ ಪರಿಗಣಿಸಲು ಸಾಧ್ಯವಿಲ್ಲ” ಎಂದು ನೆಡುಂಪಾರ ತಮ್ಮ ಮನವಿಯಲ್ಲಿ ತಿಳಿಸಿದ್ದಾರೆ.

“ಸಾರ್ವಜನಿಕ ಅಭಿಪ್ರಾಯವನ್ನು ವಿಭಜಿಸಬಹುದು ಮತ್ತು ಜನರು ಚುನಾಯಿಸಿದ ಪ್ರತಿನಿಧಿಗಳು ಈ ಯೋಜನೆಯನ್ನು ಜಾರಿ ಮಾಡಿರುವ ಕಾರಣದಿಂದಾಗಿ ಈ ದೇಶದ ಬಹುಪಾಲು ಜನರು ಯೋಜನೆಯನ್ನು ಬೆಂಬಲಿಸಬಹುದು, ಜನರಿಗೂ ಕೇಳುವ ಹಕ್ಕಿದೆ ಎಂಬುವುದನ್ನು ಗಮನಿಸುವಲ್ಲಿ ನ್ಯಾಯಾಲಯ ವಿಫಲವಾಗಿದೆ” ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಇದನ್ನು ಓದಿದ್ದೀರಾ?   ಎರಡನೇ ಅತಿ ದೊಡ್ಡ ಚುನಾವಣಾ ಬಾಂಡ್ ಖರೀದಿದಾರ ಸಂಸ್ಥೆ ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಎಫ್‌ಐಆರ್

2018 ರ ಚುನಾವಣಾ ಬಾಂಡ್ ಯೋಜನೆಯು ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ, ಮಾಹಿತಿ ಹಕ್ಕುಗಳ ಸಾಂವಿಧಾನಿಕ ಹಕ್ಕಿನ “ಉಲ್ಲಂಘನೆ” ಎಂದು ಪರಿಗಣಿಸಿ, ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಾಧೀಶರ ಸಂವಿಧಾನ ಪೀಠವು ಯೋಜನೆಯನ್ನು ಫೆಬ್ರವರಿ 15ರಂದು ರದ್ದುಗೊಳಿಸಿದೆ.

ಹಾಗೆಯೇ ಎಲ್ಲಾ ಮಾಹಿತಿಯನ್ನು ಚುನಾವಣಾ ಆಯೋಗಕ್ಕೆ ನೀಡುವಂತೆ ಎಸ್‌ಬಿಐಗೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ. ಆದರೆ ಎಸ್‌ಬಿಐ ಅಧಿಕ ಕಾಲಾವಕಾಶವನ್ನು ಕೋರಿದ್ದು, ಸುಪ್ರೀಂ ಕೋರ್ಟ್ ತರಾಟೆಯ ಬಳಿಕ ಮಾಹಿತಿಯನ್ನು ಚುನಾವಣಾ ಆಯೋಗಕ್ಕೆ ನೀಡಿದೆ. ಪ್ರಸ್ತುತ ಚುನಾವಣಾ ಆಯೋಗ ಚುನಾವಣಾ ಬಾಂಡ್ ಸಂಬಂಧಿತ ಎಲ್ಲ ಮಾಹಿತಿಯನ್ನು ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿದ್ದು ದೇಶದಲ್ಲಿ ಅತೀ ಅಧಿಕ ಬಾಂಡ್ ದೇಣಿಗೆ ಪಡೆದ ಪಕ್ಷ ಬಿಜೆಪಿ ಎಂಬುವುದು ಬಹಿರಂಗವಾಗಿದೆ.

ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್), ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ), ಕಾಂಗ್ರೆಸ್ ನಾಯಕ ಜಯಾ ಠಾಕೂರ್ ಮತ್ತು ಸ್ಪಂದನ್ ಬಿಸ್ವಾಲ್ ಅವರು ಚುನಾವಣಾ ಬಾಂಡ್ ಯೋಜನೆಯನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಉತ್ತರ ಪ್ರದೇಶ: ಪ್ರಜಾಪ್ರಭುತ್ವ ಹೋರಾಟಗಾರರಿಗೆ ಅಖಿಲೇಶ್ ಮಾಸಿಕ ₹51,000 ಪಿಂಚಣಿ ಭರವಸೆ

ಉತ್ತರ ಪ್ರದೇಶದಲ್ಲಿ 2027ರಲ್ಲಿ ಸಮಾಜವಾದಿ ಪಕ್ಷ (ಎಸ್‌ಪಿ) ಸರ್ಕಾರ ರಚಿಸಿದರೆ, 1975ರ...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರು, ಗೋವಾ, ಕೋಲ್ಕತ್ತದಲ್ಲಿ ಸಿಜೆಪಿ ‘ಮೋರ್ಚಾ’

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...