CJP ಪ್ರತಿಭಟನೆಯನ್ನು NIA ತನಿಖೆ ನಡೆಸಲು ಕೋರಿ ಅರ್ಜಿ; ನಾಳೆ ವಿಚಾರಣೆಗೆ ದೆಹಲಿ ಹೈಕೋರ್ಟ್‌ ಸಮ್ಮತಿ

Date:

ಜುಲೈ 20ರಂದು ಕಾಕ್ರೋಚ್ ಜನತಾ ಪಾರ್ಟಿ (CJP) ನೇತೃತ್ವದಲ್ಲಿ ನಡೆದ ‘ಸಂಸತ್ ಚಲೋ’ ಪ್ರತಿಭಟನೆ ಹಾಗೂ ಸಂಸತ್ ಮೆರವಣಿಗೆ ಕುರಿತು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮೂಲಕ ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL)ಯನ್ನು ದೆಹಲಿ ಹೈಕೋರ್ಟ್ ನಾಳೆ (ಜುಲೈ 24) ವಿಚಾರಣೆಗೆ ಕೈಗೆತ್ತಿಕೊಳ್ಳಲು ಒಪ್ಪಿದೆ.

- Advertisement -

ಮುಖ್ಯ ನ್ಯಾಯಮೂರ್ತಿ ಡಿ.ಕೆ. ಉಪಾಧ್ಯಾಯ ಹಾಗೂ ನ್ಯಾಯಮೂರ್ತಿ ತೇಜಸ್ ಕಾರಿಯಾ ಅವರಿದ್ದ ವಿಭಾಗೀಯ ಪೀಠದ ಮುಂದೆ ಅರ್ಜಿಯನ್ನು ತುರ್ತು ವಿಚಾರಣೆಗೆ ಪಟ್ಟಿ ಮಾಡುವಂತೆ ಅರ್ಜಿದಾರರ ಪರ ವಕೀಲ ಬರುಣ್ ಕುಮಾರ್ ಸಿನ್ಹಾ ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

“ಇದು ವಿದ್ಯಾರ್ಥಿಗಳ ಪ್ರತಿಭಟನೆ ಎಂದು ಹೇಳಲಾಗುತ್ತಿರುವ ಹೋರಾಟಕ್ಕೆ ಸಂಬಂಧಿಸಿದ ಪ್ರಕರಣ. ಇಡೀ ದೆಹಲಿಯನ್ನೇ ಒತ್ತೆಯಾಳಾಗಿಸಲಾಗಿದೆ. ರಸ್ತೆಗಳನ್ನು ಬಂದ್ ಮಾಡಲಾಗಿದ್ದು, ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಆದ್ದರಿಂದ ನಾಳೆಯೇ ವಿಚಾರಣೆಗೆ ಪಟ್ಟಿ ಮಾಡಬೇಕು” ಎಂದು ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದರು.

ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಅಖಿಲ ಭಾರತ ಹಿಂದೂ ಮಹಾಸಭಾದ ಮಾಜಿ ಉಪಾಧ್ಯಕ್ಷ ಸತೀಶ್ ಕುಮಾರ್ ಅಗರ್‌ವಾಲ್ ಸಲ್ಲಿಸಿದ್ದಾರೆ. ಪ್ರತಿಭಟನೆ ರಾಜಕೀಯ ಪ್ರೇರಿತವಾಗಿದ್ದು, ದೇಶವನ್ನು ಅಸ್ಥಿರಗೊಳಿಸುವ ಉದ್ದೇಶದಿಂದ ವಿದೇಶಿ ಶಕ್ತಿಗಳ ಬೆಂಬಲ ಮತ್ತು ಹಣಕಾಸು ನೆರವಿನೊಂದಿಗೆ ನಡೆಸಲಾಗಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ಜುಲೈ 20ರ ಪ್ರತಿಭಟನೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ದಾಖಲಿಸಿರುವ ಎಲ್ಲ ಎಫ್‌ಐಆರ್‌ಗಳನ್ನು ಎನ್‌ಐಎ ಅಥವಾ ಇನ್ನಾವುದೇ ವಿಶೇಷ ತನಿಖಾ ಸಂಸ್ಥೆಗೆ ವರ್ಗಾಯಿಸುವಂತೆ, ಹಿಂಸಾಚಾರ, ಸಾರ್ವಜನಿಕ ಆಸ್ತಿ ಹಾನಿ ಹಾಗೂ ತುರ್ತು ಸೇವೆಗಳಿಗೆ ಅಡ್ಡಿಪಡಿಸಿದವರನ್ನು ಗುರುತಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಅರ್ಜಿಯಲ್ಲಿ ಕೋರಲಾಗಿದೆ.

ಜುಲೈ 20ರಂದು ನಡೆದ ಪ್ರತಿಭಟನೆಯ ವೇಳೆ ಸಾರ್ವಜನಿಕ ಸಂಚಾರಕ್ಕೆ ಅಡ್ಡಿ ಉಂಟುಮಾಡಲಾಗಿದೆ, ಸಾರ್ವಜನಿಕ ಹಾಗೂ ಖಾಸಗಿ ಆಸ್ತಿಪಾಸ್ತಿಗಳಿಗೆ ಹಾನಿ ಮಾಡಲಾಗಿದೆ, ಪತ್ರಕರ್ತರ ಮೇಲೆ ಹಲ್ಲೆ ನಡೆಸಲಾಗಿದೆ, ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ ಹಾಗೂ ಸಂಸತ್‌ ಕಡೆಗೆ ಸಾಗಲು ಪ್ರಯತ್ನಿಸಲಾಗಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ವಿದ್ಯಾರ್ಥಿಗಳೇನೋ ಬೀದಿಯಲ್ಲಿದ್ದಾರೆ; ವಿಶ್ವದ ನಂ.1 ವಿದ್ಯಾರ್ಥಿ ಸಂಘಟನೆ ABVP ಎಲ್ಲಿದೆ?

ಇದಲ್ಲದೆ, ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್ ಅವರು ಕೆಲವು ವಿದೇಶಿ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂಬ ವರದಿಗಳನ್ನು ಉಲ್ಲೇಖಿಸಿರುವ ಅರ್ಜಿದಾರರು, ಆ ಅಂಶಗಳ ಬಗ್ಗೆಯೂ ಸಮರ್ಥ ತನಿಖೆ ನಡೆಸುವ ಅಗತ್ಯವಿದೆ ಎಂದು ಮನವಿ ಮಾಡಿದ್ದಾರೆ.

“ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸುವ ನೆಪದಲ್ಲಿ ಆಯೋಜಿಸಲಾಗಿದೆ ಎಂದು ಹೇಳಲಾಗಿರುವ ಈ ಪ್ರತಿಭಟನೆಯಲ್ಲಿ ಭಾಗವಹಿಸಿದ ಕೆಲ ವ್ಯಕ್ತಿಗಳು ಮತ್ತು ಗುಂಪುಗಳ ಚಟುವಟಿಕೆಗಳು ಹಾಗೂ ಹೇಳಿಕೆಗಳು ಭಾರತ ವಿರೋಧಿ ಅಜೆಂಡಾದಿಂದ ಪ್ರೇರಿತವಾಗಿರುವಂತೆ ಕಾಣುತ್ತಿವೆ” ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ನಕಲಿ ವೈದ್ಯರಿಗೆ ಔಷಧ ಪೂರೈಕೆ : 7 ಮೆಡಿಕಲ್‌ಗಳ ಪರವಾನಗಿ ಅಮಾನತು

ನಕಲಿ ವೈದ್ಯರಿಗೆ ಔಷಧಗಳನ್ನು ಸರಬರಾಜು ಮಾಡಿದ ಆರೋಪದ ಹಿನ್ನೆಲೆ ಜಿಲ್ಲೆಯ ಏಳು...

ʼತ್ರಿವರ್ಣ ಧ್ವಜ ಹಾರಿಸಲು ಅನುಮತಿ ಬೇಕಿಲ್ಲʼ; ಪೊಲೀಸ್ ನೋಟಿಸ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ನೇಹಾ ಬೋರಾ

ರಾಷ್ಟ್ರಧ್ವಜ ಹಾರಿಸಲು ಯಾರ ಅನುಮತಿಯೂ ಅಗತ್ಯವಿಲ್ಲ ಎಂದು ವಾದಿಸಿರುವ ಎಐಎಸ್‌ಎ (AISA)...

ಬೀದರ್‌ | ಕನಿಷ್ಠ ವೇತನ ಪಾವತಿಗೆ ಅರಣ್ಯ ಇಲಾಖೆ ದಿನಗೂಲಿ ನೌಕರರ ಮನವಿ

ಔರಾದ ತಾಲ್ಲೂಕಿನ ಸಾಮಾಜಿಕ ಅರಣ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೀಕ್ಷಕರು ಹಾಗೂ ದಿನಗೂಲಿ...

ಬೀದರ್‌ | ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಿಸೋಣ : ಡಿಸಿ ಶಿಲ್ಪಾ ಶರ್ಮಾ

ಬೀದರ್ ಜಿಲ್ಲೆಯಲ್ಲಿ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ಆಕರ್ಷಕವಾಗಿ...