ಜನಪ್ರತಿನಿಧಿಗಳ ಅನರ್ಹಗೊಳಿಸುವ ಕಾಯಿದೆ ಪ್ರಶ್ನಿಸಿ ‘ಸುಪ್ರೀಂ’ಗೆ ಅರ್ಜಿ

Date:

  • ಸಾಮಾಜಿಕ ಕಾರ್ಯಕರ್ತೆ ಆಭಾ ಮುರುಳೀಧರನ್‌ ಅರ್ಜಿ
  • ರಾಹುಲ್‌ ಗಾಂಧಿಗೆ 2 ವರ್ಷ ಜೈಲು ವಿಧಿಸಿರುವ ಸೂರತ್‌ ಕೋರ್ಟ್‌

ಶಿಕ್ಷೆ ಪ್ರಕಟವಾದ ನಂತರ ಸಂಸತ್ತು ಹಾಗೂ ರಾಜ್ಯ ವಿಧಾನಸಭೆಗಳು ಚುನಾಯಿತ ಜನಪ್ರತಿನಿಧಿಗಳ ಸದಸ್ಯತ್ವ ಅನರ್ಹಗೊಳಿಸುವ ಜನಪ್ರತಿನಿಧಿ ಕಾಯಿದೆ, 1951ರ ಸೆಕ್ಷನ್‌ 8(3) ರ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಶನಿವಾರ (ಮಾರ್ಚ್‌ 25) ಅರ್ಜಿ ಸಲ್ಲಿಕೆಯಾಗಿದೆ.

ಈ ಕುರಿತು ಸುದ್ದಿ ವಾಹಿನಿಯೊಂದು ವರದಿ ಮಾಡಿದೆ. ಸೆಕ್ಷನ್‌ 8 (3)ರ ಅನ್ವಯ ಜನಪ್ರತಿನಿಧಿಯೊಬ್ಬರು ಕನಿಷ್ಠ ಎರಡು ವರ್ಷ ಶಿಕ್ಷೆಗೆ ಗುರಿಯಾದರೆ ತಕ್ಷಣದಿಂದ ಜಾರಿಗೆ ಬರುವಂತೆ ಅವರ ಸದಸ್ಯತ್ವ ಅನರ್ಹವಾಗಲಿದೆ.

ಸಾಮಾಜಿಕ ಕಾರ್ಯಕರ್ತೆ ಆಭಾ ಮುರುಳೀಧರನ್‌ ಅವರು ವಕೀಲ ಶ್ರೀರಾಮ್‌ ಪರಕ್ಕಟ್‌ ಅವರ ಮೂಲಕ ಅರ್ಜಿ ಸಲ್ಲಿಸಿದ್ದಾರೆ. “ಈ ಕಾಯಿದೆಯು ಸಂವಿಧಾನದ ಅತಿರೇಕವಾಗಿದೆ. ಇದು ಸಂಸತ್‌ ಅಥವಾ ವಿಧಾನಸಭೆಯ ಸದಸ್ಯರಿಗೆ ಇರುವ ಮುಕ್ತ ವಾಕ್‌ ಸ್ವಾತಂತ್ರ್ಯವನ್ನು ಮೊಟಕುಗೊಳಿಸುತ್ತದೆ. ಅಲ್ಲದೆ ಅವರಿಗೆ ತಮ್ಮ ಕ್ಷೇತ್ರದಲ್ಲಿ ಮುಕ್ತವಾಗಿ ಕಾರ್ಯನಿರ್ವಹಿಸುವುದನ್ನು ನಿರ್ಬಂಧಿಸುತ್ತದೆ” ಎಂದು ಆಭಾ ಅರ್ಜಿಯಲ್ಲಿ ಹೇಳಿದ್ದಾರೆ.

2019ರ ಲೋಕಸಭೆ ಚುನಾವಣೆ ಸಂದರ್ಭ ಕೋಲಾರದಲ್ಲಿ ಪ್ರಚಾರ ನಡೆಸುವ ವೇಳೆ ಮಾಡಿದ ಭಾಷಣ ಸಂಬಂಧ 2 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರ ಸದಸ್ವತ್ಯ ರದ್ದು ಮಾಡಿ ಲೋಕಸಭೆ ಸಚಿವಾಲಯ ಮಾರ್ಚ್‌ 23 ಆದೇಶ ಹೊರಡಿಸಿದೆ.

ಪ್ರಕರಣಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಕೋರ್ಟ್‌ ಗುರುವಾರ ಆದೇಶ ಹೊರಡಿಸಿತ್ತು. ಜತೆಗೆ ಶಿಕ್ಷೆಯನ್ನು 30 ದಿನಗಳ ಕಾಲ ಅಮಾನತಿನಲ್ಲಿರಿಸಿ, ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿತ್ತು.

“ಎಲ್ಲ ಕಳ್ಳರಿಗೂ ಮೋದಿ ಎಂಬ ಉಪನಾಮ ಏಕಿರುತ್ತದೆ” ಎಂದು ಲೋಕಸಭೆಗೆ 2019ರಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ರಾಹುಲ್‌ ಪ್ರಶ್ನಿಸಿದ್ದರು. ಸೂರತ್‌ನ ಶಾಸಕ ಪೂರ್ಣೇಶ್‌ ಮೋದಿ ಅವರು ರಾಹುಲ್ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಮಾರ್ಚ್‌ 23ರಿಂದ ಅನ್ವಯವಾಗುವಂತೆ ರಾಹುಲ್‌ ಅವರ ಲೋಕಸಭೆ ಸದಸ್ಯತ್ವ ಅನರ್ಹಗೊಂಡಿದೆ. ಸದ್ಯ ಅವರು ಪ್ರತಿನಿಧಿಸುತ್ತಿರುವ ವಯನಾಡ್‌ ಲೋಕಸಭಾ ಕ್ಷೇತ್ರ ತೆರವಾಗಿದೆ. ಇನ್ನು ಆರು ತಿಂಗಳಲ್ಲಿ ಇಲ್ಲಿ ಚುನಾವಣೆ ನಡೆಯಬೇಕಿದೆ.

ಸೂರತ್‌ ನ್ಯಾಯಾಲಯ ನೀಡಿದ ತೀರ್ಪನ್ನು ಪ್ರಶ್ನಿಸಿ ರಾಹುಲ್‌ ಅವರು ಮೇಲ್ಮನವಿ ಸಲ್ಲಿಸಲು ಅವಕಾಶವಿದೆ. ಶಿಕ್ಷೆಗೆ ಹಾಗೂ ಅನರ್ಹತೆಗೆ ತಡೆ ನೀಡುವ ಅಧಿಕಾರ ಹೈಕೋರ್ಟ್‌ ಹಾಗೂ ಸುಪ್ರೀಂ ಕೋರ್ಟ್‌ಗೆ ಇದೆ.

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಿಚಾಂಗ್ ಚಂಡಮಾರುತ | ತಮಿಳುನಾಡಿನಲ್ಲಿ ಹೈ ಅಲರ್ಟ್‌; ಶಾಲಾ-ಕಾಲೇಜು ರಜೆ ಘೋಷಣೆ

ಬಂಗಾಳಕೊಲ್ಲಿಯಲ್ಲಿ ಮಿಚಾಂಗ್ ಚಂಡಮಾರುತ ರೂಪುಗೊಂಡಿದೆ. ಈ ಹಿನ್ನೆಲೆ, ಆಂಧ್ರಪ್ರದೇಶ ಮತ್ತು ತಮಿಳುನಾಡಿನತ್ತ...

ಮಿಚಾಂಗ್ ಚಂಡಮಾರುತಕ್ಕೆ ಆಂಧ್ರ – ತಮಿಳುನಾಡು ತತ್ತರ; 120 ರೈಲುಗಳ ಸಂಚಾರ ರದ್ದು

ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ಮಿಚಾಂಗ್ ಚಂಡಮಾರುತ ಅಬ್ಬರ ಹೆಚ್ಚಾಗಿದೆ. ದಕ್ಷಿಣ ಆಂಧ್ರ...

ಅಧಿಕೃತ ಚುನಾವಣಾ ಫಲಿತಾಂಶ ಪ್ರಕಟಿಸಿದ ಆಯೋಗ: ಯಾವ ರಾಜ್ಯಗಳಲ್ಲಿ ಯಾರಿಗೆ ಎಷ್ಟು ಸ್ಥಾನ?

ಇಂದು ಪ್ರಕಟಗೊಂಡ ಚುನಾವಣಾ ಫಲಿತಾಂಶಗಳ ಬಗ್ಗೆ ಚುನಾವಣಾ ಆಯೋಗ ಎಲ್ಲ ರಾಜ್ಯಗಳ...

ಈ ಫಲಿತಾಂಶ ಲೋಕಸಭೆ ಚುನಾವಣೆಯ ಹ್ಯಾಟ್ರಿಕ್‌ ಗೆಲುವಿನ ಮುನ್ಸೂಚನೆ: ಪ್ರಧಾನಿ ನರೇಂದ್ರ ಮೋದಿ

'ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢ ವಿಧಾನಸಭೆ ಚುನಾವಣೆಯ ಹ್ಯಾಟ್ರಿಕ್‌ ಗೆಲುವು 2024ರ...