ಉತ್ತರ ಪ್ರದೇಶ | ಭೂಪಟದಲ್ಲೇ ಇಲ್ಲದ ದೇಶಗಳ ಹೆಸರಿನಲ್ಲಿ ನಕಲಿ ರಾಯಭಾರಿ ಕಚೇರಿ; ಆರೋಪಿ ಬಂಧನ

Date:

Advertisements

ಉತ್ತರ ಪ್ರದೇಶದ ಗಾಜಿಯಾಬಾದ್‌ನ ಕವಿ ನಗರದಲ್ಲಿ ಅಸ್ತಿತ್ವದಲ್ಲೇ ಇಲ್ಲದ ದೇಶಗಳ ರಾಯಭಾರ ಕಚೇರಿಯನ್ನು ನಡೆಸುತ್ತಿದ್ದ ಆರೋಪದಡಿ ಹರ್ಷವರ್ಧನ್‌ ಜೈನ್‌ ಎಂಬಾತನನ್ನು ಉತ್ತರ ಪ್ರದೇಶ ಪೊಲೀಸ್‌ನ ವಿಶೇಷ ಕಾರ್ಯಪಡೆ (ಎಸ್‌ಟಿಎಫ್‌) ಬಂಧಿಸಿದೆ. ಜೈನ್‌, ವೆಸ್ಟ್‌ ಆರ್ಕ್ಟಿಕಾ, ಸಬೋರ್ಗಾ, ಪೊಲಿವಿಯಾ, ಮತ್ತು ಲೊಡೊನಿಯಾ ಎಂಬ ಅಸ್ತಿತ್ವದಲ್ಲಿ ಇಲ್ಲದ ದೇಶಗಳ ರಾಜತಾಂತ್ರಿಕ ಅಧಿಕಾರಿಯಾಗಿ ತನ್ನನ್ನು ಹೇಳಿಕೊಂಡು, ಬಾಡಿಗೆ ಮನೆಯಿಂದ ಈ ಅಕ್ರಮವನ್ನು ನಡೆಸುತ್ತಿದ್ದ.

ಪ್ರಾಥಮಿಕ ತನಿಖೆಯಲ್ಲಿ, ಜೈನ್‌ ವಿದೇಶದಲ್ಲಿ ಕೆಲಸ ಕೊಡಿಸುವ ಭರವಸೆ ನೀಡಿ ಹಲವರನ್ನು ವಂಚಿಸಿರುವುದು ತಿಳಿದುಬಂದಿದೆ. ಅಲ್ಲದೆ, ಶೆಲ್‌ ಕಂಪನಿಗಳ ಮೂಲಕ ಹವಾಲಾ ದಂಧೆಯಲ್ಲಿ ಭಾಗಿಯಾಗಿರುವ ಶಂಕೆಯಿದೆ. ಜನರನ್ನು ಮೋಸಗೊಳಿಸಲು ಆತ, ಪ್ರಧಾನಮಂತ್ರಿ, ರಾಷ್ಟ್ರಪತಿ ಸೇರಿದಂತೆ ಗಣ್ಯರೊಂದಿಗಿನ ಮಾರ್ಫ್‌ ಮಾಡಿದ ಫೋಟೊಗಳನ್ನು ಬಳಸಿಕೊಂಡಿದ್ದಾನೆ. ಇದರ ಜೊತೆಗೆ, ನಕಲಿ ರಾಜತಾಂತ್ರಿಕ ನಂಬರ್‌ ಪ್ಲೇಟ್‌ಗಳನ್ನು ತನ್ನ ಐಷಾರಾಮಿ ವಾಹನಗಳಿಗೆ ಬಳಸುತ್ತಿದ್ದ.

ತನಿಖೆಯ ವೇಳೆ, ಜೈನ್‌ನಿಗೆ ವಿವಾದಿತ ದೇವಮಾನವ ಚಂದ್ರಸ್ವಾಮಿ ಮತ್ತು ಅಂತಾರಾಷ್ಟ್ರೀಯ ಶಸ್ತ್ರಾಸ್ತ್ರ ವ್ಯಾಪಾರಿ ಅದ್ನಾನ್‌ ಖಶೋಗ್ಗಿಯೊಂದಿಗೆ ಸಂಪರ್ಕವಿತ್ತು ಎಂಬುದು ಬಹಿರಂಗಗೊಂಡಿದೆ. ಇದಕ್ಕೂ ಮುನ್ನ 2011ರಲ್ಲಿ, ಆತನ ಮೇಲೆ ಅಕ್ರಮವಾಗಿ ಸ್ಯಾಟಲೈಟ್‌ ಫೋನ್‌ ಇಟ್ಟುಕೊಂಡಿದ್ದ ಆರೋಪದಡಿ ಕವಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Advertisements

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಅಧಿವೇಶನ ಎಂದಾಕ್ಷಣ ಹೆದರಿ ಓಡುವ ಪ್ರಧಾನಿ ಮೋದಿ

ನಕಲಿ ನಂಬರ್‌ ಪ್ಲೇಟ್‌ ಅಂಟಿಸಿದ್ದ ವಾಹನಗಳು, 12 ಮೈಕ್ರೋನೇಷನ್ಸ್ ಎಂದು ಕರೆಯಲ್ಪಡುವ ನಕಲಿ ರಾಜತಾಂತ್ರಿಕ ಪಾಸ್‌ಪೋರ್ಟ್‌ಗಳು, ವಿದೇಶಾಂಗ ಸಚಿವಾಲಯದ ಸ್ಟ್ಯಾಂಪ್‌ ಇರುವ ನಕಲಿ ದಾಖಲೆಗಳು, ಎರಡು ನಕಲಿ ಪ್ಯಾನ್ ಕಾರ್ಡ್‌ಗಳು, ವಿವಿಧ ದೇಶಗಳು ಮತ್ತು ಕಂಪನಿಗಳ 34 ರಬ್ಬರ್ ಸ್ಟ್ಯಾಂಪ್‌ಗಳು ಮತ್ತು ಎರಡು ನಕಲಿ ಪ್ರೆಸ್ ಕಾರ್ಡ್‌ಗಳನ್ನು ಆರೋಪಿಯಿಂದ ವಶಪಡಿಸಿಕೊಳ್ಳಲಾಗಿದೆ.

ಇದರ ಜತೆಗೆ 44.7 ಲಕ್ಷ ರೂ. ನಗದು, ವಿದೇಶಿ ಕರೆನ್ಸಿ, ಹಲವು ಕಂಪನಿಗಳ ದಾಖಲೆಗಳು ಮತ್ತು 18 ನಕಲಿ ನಂಬರ್‌ ಪ್ಲೇಟ್‌ಗಳನ್ನು ಎಸ್‌ಟಿಎಫ್‌ ವಶಪಡಿಸಿಕೊಂಡಿದೆ. ಕವಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X