ಇಸ್ರೇಲ್ – ಹಮಾಸ್ ಸಂಘರ್ಷ: ನಾಗರಿಕರ ಹತ್ಯೆಗೆ ಪ್ರಧಾನಿ ಮೋದಿ ಖಂಡನೆ

Date:

Advertisements

ಇಸ್ರೇಲ್ ಮತ್ತು ಹಮಾಸ್ ಹೋರಾಟಗಾರರ ನಡುವೆ ನಡೆಯುತ್ತಿರುವ ಸಂಘರ್ಷದಲ್ಲಿ ಸಾವಿರಾರು ಅಮಾಯಕರು ಸಾವಿಗೀಡಾಗುತ್ತಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಕಳವಳ ವ್ಯಕ್ತಪಡಿಸಿದ್ದಾರೆ.

ವಾಯ್ಸ್ ಆಫ್ ದಿ ಗ್ಲೋಬಲ್ ಸೌತ್ ಶೃಂಗಸಭೆಯಲ್ಲಿ ಪಶ್ಚಿಮ ಏಷ್ಯಾ ಪ್ರದೇಶದಲ್ಲಿನ “ಹೊಸ ಸವಾಲುಗಳ” ಕುರಿತು ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಭಾರತವು ಸಂಘರ್ಷದ ಸಮಯದಲ್ಲಿ “ಸಂಯಮವನ್ನು” ಅನುಸರಿಸಿದೆ ಎಂದು ಹೇಳಿದರು.

“ನಾವು ಸಂವಾದ ಮತ್ತು ರಾಜತಾಂತ್ರಿಕತೆಗೆ ಒತ್ತು ನೀಡಿದ್ದೇವೆ. ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷದಲ್ಲಿ ನಾಗರಿಕರ ಸಾವನ್ನು ನಾವು ಬಲವಾಗಿ ಖಂಡಿಸುತ್ತೇವೆ” ಎಂದು ಮೋದಿ ಹೇಳಿದರು.

Advertisements

ಪ್ಯಾಲೆಸ್ತೀನ್ ಅಧ್ಯಕ್ಷ ಮಹಮೂದ್ ಅಬ್ಬಾಸ್ ಅವರೊಂದಿಗಿನ ಮಾತುಕತೆಯ ನಂತರ ಭಾರತವು ಪ್ಯಾಲೆಸ್ಟೀನಿಯಾಗೆ ಮಾನವೀಯ ನೆರವು ಕಳುಹಿಸಿದೆ ಎಂದು ಪ್ರಧಾನಿ ಮೋದಿ ಹೇಳಿದರು.

“ಗ್ಲೋಬಲ್ ಸೌತ್‌ನ ದೇಶಗಳು ಹೆಚ್ಚಿನ ಜಾಗತಿಕ ಒಳಿತಿಗಾಗಿ ಒಂದಾಗಬೇಕಾದ ಸಮಯ ಇದು” ಎಂದು ಮೋದಿ ಕರೆ ನೀಡಿದರು.

“ಪೂರ್ವ ಜೆರುಸಲೆಮ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರಾಂತ್ಯದಲ್ಲಿ ಮತ್ತು ಆಕ್ರಮಿತ ಸಿರಿಯನ್ ಭೂಪ್ರದೇಶದಲ್ಲಿ ವಸಾಹತು ಚಟುವಟಿಕೆಗಳನ್ನು ಖಂಡಿಸುವ ವಿಶ್ವಸಂಸ್ಥೆಯ ನಿರ್ಣಯದ ಪರವಾಗಿ ಭಾರತ ಮತ ಚಲಾಯಿಸಿದ ಬೆನ್ನಲ್ಲೇ ಮೋದಿ ಹೇಳಿಕೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ವಿಧಾನಸಭೆ ಚುನಾವಣೆ: ಮಧ್ಯ ಪ್ರದೇಶದಲ್ಲಿ ಶೇ.27, ಛತ್ತೀಸ್‌ಗಢದಲ್ಲಿ ಶೇ.19 ಮತದಾನ

ನಿರ್ಣಯದ ಪರವಾಗಿ ಮತ ಚಲಾಯಿಸಿದ 145 ರಾಷ್ಟ್ರಗಳಲ್ಲಿ ಭಾರತವೂ ಸೇರಿದೆ. ಅಮೆರಿಕಾ, ಕೆನಡಾ ಮತ್ತು ಇಸ್ರೇಲ್ ಸೇರಿದಂತೆ 7 ದೇಶಗಳು ವಿರುದ್ಧವಾಗಿ ಮತ ಚಲಾಯಿಸಿದವು ಮತ್ತು 18 ಗೈರುಹಾಜರಾದವು.

ಅಕ್ಟೋಬರ್‌ನಲ್ಲಿ, ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಜೋರ್ಡಾನ್‌ನ ಕರಡು ನಿರ್ಣಯದ ಮೇಲೆ ಮತದಾನ ಕೈಗೊಂಡಿದ್ದಾಗ ಭಾರತ ದೂರವಿತ್ತು. ಈ ಸಂದರ್ಭದಲ್ಲಿ ತಕ್ಷಣದ ಮಾನವೀಯ ಒಪ್ಪಂದಕ್ಕೆ ಭಾರತ ಕರೆ ನೀಡಿತ್ತು.

‘ನಾಗರಿಕರ ರಕ್ಷಣೆ ಮತ್ತು ಕಾನೂನು ಮತ್ತು ಮಾನವೀಯ ಹೊಣೆಗಾರಿಕೆಗಳನ್ನು ಎತ್ತಿಹಿಡಿಯುವುದು’ ಎಂಬ ಶೀರ್ಷಿಕೆಯ ನಿರ್ಣಯವನ್ನು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಅಂಗೀಕರಿಸಲಾಯಿತು. ಅದರ ಪರವಾಗಿ 120 ರಾಷ್ಟ್ರಗಳು ಮತ ಚಲಾಯಿಸಿದವು. ಅದರ ವಿರುದ್ಧ 14 ಮತ್ತು 45 ಗೈರುಹಾಜರಾಗಿದ್ದವು.

ಭಾರತವು ಇಸ್ರೇಲ್ ಮತ್ತು ಪ್ಯಾಲೆಸ್ತೀನ್‌ಗೆ ಎರಡು-ದೇಶಗಳ ಪರಿಹಾರಕ್ಕಾಗಿ ತನ್ನ ನಿಲುವನ್ನು ಉಳಿಸಿಕೊಂಡು ಬರುತ್ತಿದೆ ಮತ್ತು ಇಸ್ರೇಲ್-ಹಮಾಸ್ ಸಂಘರ್ಷದಲ್ಲಿ ಸಿಲುಕಿರುವ ನಾಗರಿಕರನ್ನು ರಕ್ಷಿಸಲು ಪುನರುಚ್ಚರಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X