ಭಾರತದ ಮೊದಲ ಅಂಡರ್‌ವಾಟರ್ ಮೆಟ್ರೋ ಮಾರ್ಗಕ್ಕೆ ಮೋದಿ ಚಾಲನೆ

Date:

ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದಲ್ಲಿ ಭಾರತದ ಮೊಟ್ಟ ಮೊದಲ ಅಂಡರ್‌ವಾಟರ್ ಮೆಟ್ರೋ (ನೀರೊಳಗಿನ ಮೆಟ್ರೋ) ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಜೊತೆಗೆ ಸುಮಾರು 15,400 ಕೋಟಿ ರೂಪಾಯಿ ವೆಚ್ಚದ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಮಾಡಿದ್ದಾರೆ.

- Advertisement -

ಕೋಲ್ಕತ್ತಾದ ಪೂರ್ವ-ಪಶ್ಚಿಮ ಮೆಟ್ರೋದ 4.8 ಕಿಮೀ ಉದ್ದದ ಮಾರ್ಗವನ್ನು ಸುಮಾರು 4,965 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಅಲ್ಲದೆ, ಕೋಲ್ಕತ್ತಾ ಮೆಟ್ರೋದಿಂದ ಕವಿ ಸುಭಾಷ್ ಮೆಟ್ರೋ, ಮೆಜೆರ್‌ಹತ್ ಮೆಟ್ರೋ, ಕೊಚ್ಚಿ ಮೆಟ್ರೋ, ಆಗ್ರಾ ಮೆಟ್ರೋ, ಮೀರತ್-ಆರ್‌ಆರ್‌ಟಿಸಿ ಸೆಕ್ಷನ್, ಪುಣೆ ಮೆಟ್ರೋವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಅಂಡರ್‌ವಾಟರ್ ಮೆಟ್ರೋ ಕೋಲ್ಕತ್ತಾದ ಅವಳಿ ನಗರಗಳಾದ ಹೌರಾ ಮತ್ತು ಸಾಲ್ಟ್ ಲೇಕ್ ಅನ್ನು ಸಂಪರ್ಕಿಸುತ್ತದೆ. ಇದು ಆರು ನಿಲ್ದಾಣಗಳನ್ನು ಹೊಂದಿದ್ದು ಅವುಗಳಲ್ಲಿ ಮೂರು ಅಂಡರ್‌ಗ್ರೌಂಡ್‌ (ಭೂಗತ) ಆಗಿದೆ. ಹಾಗೆಯೇ 520 ಮೀಟರ್ ಪ್ರದೇಶವನ್ನು ಹೂಗ್ಲಿ ನದಿಯ ಮೂಲಕ 45 ಸೆಕೆಂಡ್‌ಗಳಲ್ಲಿ ಸಾಗಲಿದೆ.

ಪ್ರಧಾನಿ ಮೋದಿ ಶಾಲಾ ಮಕ್ಕಳೊಂದಿಗೆ ಪ್ರಯಾಣ ಮಾಡಿದ್ದಾರೆ. ಈ ಸಂದರ್ಭದಲ್ಲಿ ಪಶ್ಚಿಮ ಬಂಗಾಳದ ಬಿಜೆಪಿ ಅಧ್ಯಕ್ಷ ಸುಕಾಂತ ಮಜುಂದಾರ್, ವಿಪಕ್ಷ ನಾಯಕ ಸುವೆಂದು ಅಧಿಕಾರಿ ಕೂಡಾ ಉಪಸ್ಥಿತರಿದ್ದರು.

ಹೌರಾ ಮೆಟ್ರೋ ನಿಲ್ದಾಣ ದೇಶದಲ್ಲಿಯೇ ಅತ್ಯಂತ ಆಳವಾದದ್ದು ಎಂದು ಹೇಳಲಾಗಿದೆ. ಹೂಗ್ಲಿ ನದಿಯು ಕೋಲ್ಕತ್ತಾ ಮತ್ತು ಹೌರಾ ಅವಳಿ ನಗರಗಳನ್ನು ಕ್ರಮವಾಗಿ ಪೂರ್ವ ಮತ್ತು ಪಶ್ಚಿಮ ದಂಡೆಗಳಲ್ಲಿ ಪ್ರತ್ಯೇಕಿಸುತ್ತದೆ. ಹೂಗ್ಲಿ ನದಿಯ ನೀರೊಳಗಿನ ಸುರಂಗದ ಅಡಿಯಲ್ಲಿ ಮೆಟ್ರೋ ರೈಲುಗಳ ಪ್ರಾಯೋಗಿಕ ಸಂಚಾರವನ್ನು 2003ರ ಏಪ್ರಿಲ್‌ 9ರಂದು ನಡೆಸಲಾಗಿತ್ತು. ಇಂದು ಮೆಟ್ರೋ ಮಾರ್ಗವು ಉದ್ಘಾಟನೆಯಾಗಿದೆ. ಆದರೂ, ಪ್ರಯಾಣಿಕರ ಸೇವೆ ಆರಂಭಕ್ಕೆ ಕೆಲವು ದಿನಗಳು ಬೇಕಾಗುತ್ತದೆ ಎಂದು ಮೆಟ್ರೋ ರೈಲ್ವೇ ಸಿಪಿಆರ್‌ಒ ಕೌಶಿಕ್ ಮಿತ್ರಾ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...