ಮೋದಿ ಪ್ರಮಾಣಪತ್ರ ವಿವಾದ: ಕೇಜ್ರಿವಾಲ್ ಮೇಲ್ಮನವಿ ವಜಾಗೊಳಿಸಿದ ಗುಜರಾತ್ ಹೈಕೋರ್ಟ್

Date:

ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಪದವಿ ಪ್ರಮಾಣಪತ್ರವನ್ನು ಬಹಿರಂಗಪಡಿಸುವಂತೆ ಗುಜರಾತ್ ವಿಶ್ವವಿದ್ಯಾಲಯಕ್ಕೆ ಸೂಚಿಸಿದ್ದ ಕೇಂದ್ರ ಮಾಹಿತಿ ಆಯೋಗದ (ಸಿಐಸಿ) ಆದೇಶವನ್ನು ರದ್ದುಗೊಳಿಸಿದ್ದ ಏಕಸದಸ್ಯ ಪೀಠದ ತೀರ್ಪನ್ನು ಪ್ರಶ್ನಿಸಿ ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಮೇಲ್ಮನವಿಯನ್ನು ಗುಜರಾತ್ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ.

- Advertisement -

​ಮುಖ್ಯ ನ್ಯಾಯಮೂರ್ತಿ ಸುನೀತಾ ಅಗರ್ವಾಲ್ ಮತ್ತು ನ್ಯಾಯಮೂರ್ತಿ ಡಿ.ಎನ್. ರಾಯ್ ಅವರನ್ನೊಳಗೊಂಡ ವಿಭಾಗೀಯ ಪೀಠವು ಈ ಆದೇಶ ನೀಡಿದೆ. 2016ರ ಸಿಐಸಿ ನಿರ್ದೇಶನವನ್ನು ರದ್ದುಗೊಳಿಸಿ, ಕೇಜ್ರಿವಾಲ್ ಅವರಿಗೆ ₹25,000 ದಂಡ ವಿಧಿಸಿದ್ದ ಏಕಸದಸ್ಯ ಪೀಠದ ತೀರ್ಪಿನಲ್ಲಿ ಮಧ್ಯಪ್ರವೇಶಿಸಲು ಯಾವುದೇ ಆಧಾರಗಳಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

​”ಈ ಪ್ರಕರಣದ ಸಮಗ್ರ ಸತ್ಯಾಂಶಗಳು ಮತ್ತು ಸಂದರ್ಭಗಳನ್ನು ಗಮನಿಸಿದಾಗ, ಏಕಸದಸ್ಯ ಪೀಠದ ತೀರ್ಪಿನಲ್ಲಿ ಯಾವುದೇ ದೋಷ ಕಂಡುಬಂದಿಲ್ಲ ಹಾಗೂ ಮೇಲ್ಮನವಿದಾರರು ಮಂಡಿಸಿದ ವಾದಗಳಲ್ಲಿ ಆ ಆದೇಶವನ್ನು ಪ್ರಶ್ನಿಸುವಂತಹ ಅಂಶಗಳಿಲ್ಲ. ಹೀಗಾಗಿ ಮೇಲ್ಮನವಿಯನ್ನು ವಜಾಗೊಳಿಸಲಾಗಿದೆ ಮತ್ತು ಹೆಚ್ಚುವರಿ ದಂಡವನ್ನು ವಿಧಿಸಲಾಗಿಲ್ಲ,” ಎಂದು ಹೈಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿದೆ.

​ಕಳೆದ 2023ರ ಮಾರ್ಚ್ 31ರಂದು, ಹೈಕೋರ್ಟ್‌ನ ಏಕಸದಸ್ಯ ಪೀಠವು ಸಿಐಸಿ ಆದೇಶವನ್ನು ರದ್ದುಗೊಳಿಸಿತ್ತು. ಅಷ್ಟೇ ಅಲ್ಲದೆ, ಮಾಹಿತಿ ಹಕ್ಕು ಕಾಯ್ದೆಯನ್ನು (ಆರ್‌ಟಿಐ) ದುರ್ಬಳಕೆ ಮಾಡಿಕೊಂಡಿದ್ದಕ್ಕಾಗಿ ಕೇಜ್ರಿವಾಲ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದ ನ್ಯಾಯಾಲಯ, ಅವರಿಗೆ ₹25,000 ದಂಡ ವಿಧಿಸಿತ್ತು. ಕೇಜ್ರಿವಾಲ್ ಅವರ ಈ ನಡೆ ‘ಬಾಲಿಶ’ವಾಗಿದೆ ಎಂದೂ ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿತ್ತು.

​ಮೇಲ್ಮನವಿ ವಿಚಾರಣೆಯ ವೇಳೆ ಕೇಜ್ರಿವಾಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ದಂಡ ವಿಧಿಸಿರುವ ಕ್ರಮವನ್ನು ಪ್ರಶ್ನಿಸಿದ್ದರು. “ನನ್ನ ಕಕ್ಷಿದಾರರು ಪ್ರಧಾನಿ ಮೋದಿ ಅವರ ಪದವಿಗಾಗಿ ಪಟ್ಟು ಹಿಡಿದು ಕುಳಿತಿರಲಿಲ್ಲ. ಬದಲಾಗಿ, ಸಿಐಸಿ ಸ್ವಯಂ ಪ್ರೇರಿತವಾಗಿ (ಸುಮೋಟೊ) ಪ್ರಕರಣ ದಾಖಲಿಸಿಕೊಂಡು, ಕೇವಲ ಒಂದು ಪತ್ರದ ಆಧಾರದ ಮೇಲೆ ಕೇಜ್ರಿವಾಲ್ ಅವರನ್ನು ಪ್ರತಿವಾದಿಯನ್ನಾಗಿ ಮಾಡಿತ್ತು” ಎಂದು ವಾದಿಸಿದ್ದರು. ಪದವಿಯು ಆನ್‌ಲೈನ್‌ನಲ್ಲಿ ಲಭ್ಯವಿದೆ ಎಂದು ವಿಶ್ವವಿದ್ಯಾಲಯ ಹೇಳಿದ್ದರೂ, ಅದು ವಾಸ್ತವವಾಗಿ ಆನ್‌ಲೈನ್‌ನಲ್ಲಿ ಲಭ್ಯವಿರಲಿಲ್ಲ. ಒಂದು ವೇಳೆ ಅದು ಸಾರ್ವಜನಿಕ ಹಿತಾಸಕ್ತಿಯಿಂದ ಆನ್‌ಲೈನ್‌ನಲ್ಲಿ ಲಭ್ಯವಿದ್ದಿದ್ದರೆ, ಅದು ಆರ್‌ಟಿಐ ಕಾಯ್ದೆಯ ವ್ಯಾಪ್ತಿಗೆ ಬರಬೇಕಿತ್ತು ಎಂದು ಅವರು ನ್ಯಾಯಾಲಯದ ಗಮನಕ್ಕೆ ತಂದರು.

​ಗುಜರಾತ್ ವಿಶ್ವವಿದ್ಯಾಲಯದ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, “ಕೇಜ್ರಿವಾಲ್ ಅವರು ಉದ್ದೇಶಪೂರ್ವಕವಾಗಿ ಈ ಪ್ರಕರಣವನ್ನು ಬೆನ್ನತ್ತಿದ್ದರು. ವಿಶ್ವವಿದ್ಯಾಲಯದ ಮಾನಹಾನಿ ಮಾಡಲು ಪತ್ರಿಕಾಗೋಷ್ಠಿಗಳನ್ನು ಸಹ ನಡೆಸಿದ್ದರು” ಎಂದು ಆರೋಪಿಸಿದರು. ಆರ್‌ಟಿಐ ಕಾಯ್ದೆ ದುರ್ಬಳಕೆಯಾಗದಂತೆ ತಡೆಯಲು ಮತ್ತು ಇಂತಹ ಪ್ರಕರಣಗಳಿಂದ ಸರ್ಕಾರಿ ಅಧಿಕಾರಿಗಳ ಅಮೂಲ್ಯ ಸಮಯ ವ್ಯರ್ಥವಾಗುವುದನ್ನು ತಪ್ಪಿಸಲು ಕೇಜ್ರಿವಾಲ್ ವಿರುದ್ಧ ದಂಡ ವಿಧಿಸುವುದು ಸೂಕ್ತ ಎಂದು ಅವರು ಪ್ರತಿಪಾದಿಸಿದರು.

​ಪ್ರಕರಣದ ಹಿನ್ನೆಲೆ:

2016ರಲ್ಲಿ ಅರವಿಂದ್ ಕೇಜ್ರಿವಾಲ್ ಅವರು ಪ್ರಧಾನಿಯವರ ಪದವಿಯನ್ನು ಬಹಿರಂಗಪಡಿಸಬೇಕೆಂದು ಸಿಐಸಿಗೆ ಪತ್ರ ಬರೆದಿದ್ದರು. ಈ ಪತ್ರದ ಆಧಾರದ ಮೇಲೆ, 2016ರ ಏಪ್ರಿಲ್‌ನಲ್ಲಿ ಆಗಿನ ಸಿಐಸಿ ಎಂ. ಶ್ರೀಧರ್ ಆಚಾರ್ಯುಲು ಅವರು ಮೋದಿ ಪಡೆದ ಪದವಿಗಳ ಮಾಹಿತಿಯನ್ನು ಒದಗಿಸುವಂತೆ ದೆಹಲಿ ವಿಶ್ವವಿದ್ಯಾಲಯ ಹಾಗೂ ಗುಜರಾತ್ ವಿಶ್ವವಿದ್ಯಾಲಯಕ್ಕೆ ನಿರ್ದೇಶನ ನೀಡಿದ್ದರು.

​ಆದರೆ, ಸಿಐಸಿ ಆದೇಶವನ್ನು ತೀವ್ರವಾಗಿ ಆಕ್ಷೇಪಿಸಿದ್ದ ಗುಜರಾತ್ ವಿಶ್ವವಿದ್ಯಾಲಯ, “ಯಾರದ್ದೋ ‘ಬೇಜವಾಬ್ದಾರಿಯುತ ಬಾಲಿಶ ಕುತೂಹಲ’ವು ಮಾಹಿತಿ ಹಕ್ಕು ಕಾಯ್ದೆಯಡಿ ಸಾರ್ವಜನಿಕ ಹಿತಾಸಕ್ತಿಯಾಗಲು ಸಾಧ್ಯವಿಲ್ಲ” ಎಂದು ವಾದಿಸಿ ಹೈಕೋರ್ಟ್ ಮೆಟ್ಟಿಲೇರಿತ್ತು. ಇದರ ಬೆನ್ನಲ್ಲೇ ಜುಲೈ 2016ರಲ್ಲಿ ಹೈಕೋರ್ಟ್ ಸಿಐಸಿ ಆದೇಶಕ್ಕೆ ತಡೆಯಾಜ್ಞೆ ನೀಡಿತ್ತು.

​ಮೇ 2016ರಲ್ಲಿ ಗುಜರಾತ್ ವಿಶ್ವವಿದ್ಯಾಲಯದ ಆಗಿನ ಕುಲಪತಿ ಎಂ.ಎನ್. ಪಟೇಲ್ ಅವರು, “ನರೇಂದ್ರ ಮೋದಿ ಅವರು 1983ರಲ್ಲಿ ಬಾಹ್ಯ ವಿದ್ಯಾರ್ಥಿಯಾಗಿ ಶೇ 62.3 ರಷ್ಟು ಅಂಕಗಳೊಂದಿಗೆ ರಾಜ್ಯಶಾಸ್ತ್ರದಲ್ಲಿ ಎಂಎ (ಸ್ನಾತಕೋತ್ತರ ಪದವಿ) ಪೂರೈಸಿದ್ದಾರೆ” ಎಂದು ಘೋಷಿಸಿದ್ದರು ಮತ್ತು ಪದವಿಯನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ್ದ ಹೈಕೋರ್ಟ್‌ನ ಏಕಸದಸ್ಯ ಪೀಠವು, ಸಿಐಸಿ ನಿರ್ದೇಶನವನ್ನು ‘ನ್ಯಾಯಾಂಗದ ಅತಿಕ್ರಮಣ’ (Judicial activism) ಎಂದು ಬಣ್ಣಿಸಿತ್ತು. ಇದನ್ನು ಪ್ರಶ್ನಿಸಿ ಕೇಜ್ರಿವಾಲ್ ಅವರು ಇದೀಗ ವಿಭಾಗೀಯ ಪೀಠದ ಮೊರೆ ಹೋಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ಡಿಕೆಶಿ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...