ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

Date:

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹರಿಹಾಯ್ದಿದ್ದಾರೆ. ಗುಜರಾತ್‌ನ ವಡೋದರಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಪ್ರಧಾನಿಯವರ ವಿದೇಶಾಂಗ ನೀತಿ ಮತ್ತು ರೈತರ ಹಿತಾಸಕ್ತಿಗಳ ರಕ್ಷಣೆಯಲ್ಲಿನ ವೈಫಲ್ಯವನ್ನು ಪ್ರಶ್ನಿಸಿದ್ದಾರೆ.

- Advertisement -

ಲೋಕಸಭೆಯಲ್ಲಿ ಪ್ರಧಾನಿ ಮೋದಿ ಅವರ 25 ನಿಮಿಷಗಳ ಭಾಷಣವನ್ನು ಉಲ್ಲೇಖಿಸಿದ ರಾಹುಲ್ ಗಾಂಧಿ, “ಪ್ರಧಾನಿಗಳು ಅಮೆರಿಕ ಮತ್ತು ಡೊನಾಲ್ಡ್ ಟ್ರಂಪ್ ಅವರ ಹೆಸರನ್ನು ಎಲ್ಲಿಯೂ ಪ್ರಸ್ತಾಪಿಸಿಲ್ಲ. ಅವರು ಅಮೆರಿಕಕ್ಕೆ ಸಂಪೂರ್ಣವಾಗಿ ಶರಣಾಗಿದ್ದಾರೆ. ಅವರು 100% ಟ್ರಂಪ್ ನಿಯಂತ್ರಣದಲ್ಲಿದ್ದಾರೆ. ಆ ಕಾರಣಕ್ಕಾಗಿಯೇ ಅವರು ಅಮೆರಿಕದ ವಿರುದ್ಧ ಒಂದು ಪದವನ್ನೂ ಮಾತನಾಡುತ್ತಿಲ್ಲ. ಈ ಮೌನ ದೇಶದ ಭದ್ರತೆಗೆ ಗಂಭೀರ ಸಮಸ್ಯೆಯ ಮುನ್ಸೂಚನೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಅಮೆರಿಕದೊಂದಿಗೆ ಮಾಡಿಕೊಂಡಿರುವ ತಾತ್ಕಾಲಿಕ ವ್ಯಾಪಾರ ಒಪ್ಪಂದಗಳು ದೇಶದ ಕೃಷಿ ವಲಯವನ್ನು ನಾಶಮಾಡಲಿವೆ. ಭಾರತದಲ್ಲಿ ರೈತರು ಸಣ್ಣ ಜಮೀನುಗಳಲ್ಲಿ ಶ್ರಮಪಡುತ್ತಾರೆ. ಆದರೆ, ಅಮೆರಿಕದಲ್ಲಿ ಬೃಹತ್ ಯಂತ್ರೋಪಕರಣಗಳ ಕೃಷಿ ಇದೆ. ಅಲ್ಲಿನ ಉತ್ಪನ್ನಗಳಿಗೆ ಮುಕ್ತ ಪ್ರವೇಶ ನೀಡಿದರೆ ನಮ್ಮ ರೈತರು ಜಾಗತಿಕ ಸ್ಪರ್ಧೆಯಲ್ಲಿ ಸೋತು ನಾಶವಾಗುತ್ತಾರೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

“ಆದಿವಾಸಿಗಳೆಂದರೆ ಈ ದೇಶದ ಮೂಲ ನಿವಾಸಿಗಳು ಮತ್ತು ಜಲ-ಜಂಗಲ್-ಜಮೀನಿನ ಮಾಲೀಕರು. ಆದರೆ, ಬಿಜೆಪಿ ಅವರನ್ನು ‘ವನವಾಸಿ’ ಎಂದು ಕರೆಯುವ ಮೂಲಕ ಅವರು ಕೇವಲ ಅರಣ್ಯವಾಸಿಗಳೇ ಹೊರತು ಸಂಪನ್ಮೂಲಗಳ ಮಾಲೀಕರಲ್ಲ ಎಂಬ ಸಂದೇಶ ನೀಡುತ್ತಿದೆ. ಇದು ಬಿರ್ಸಾ ಮುಂಡಾ ಅವರ ಹೋರಾಟಕ್ಕೆ ಮತ್ತು ಸಂವಿಧಾನಕ್ಕೆ ಮಾಡುತ್ತಿರುವ ಅಪಮಾನ” ಎಂದು ಕಿಡಿಕಾರಿದ್ದಾರೆ.

ಈ ಲೇಖನ ಓದಿದ್ದೀರಾ?: ಬಿಜೆಪಿ ಅಸ್ತ್ರಕ್ಕೆ ಟಿಎಂಸಿ ಪ್ರತ್ಯಸ್ತ್ರ; ಸುವೇಂದು ಎದುರು ಸ್ಪರ್ಧಿಸಿರುವ ‘ಪಬಿತ್ರ ಕರ್’ ಯಾರು ಗೊತ್ತೆ?

ಅದೇ ಕಾರ್ಯಕ್ರಮದಲ್ಲಿ ಮಾತನಾಡಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಕೂಡ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ಲೋಕಸಭೆಯಲ್ಲಿ ಪ್ರಧಾನಿಯವರು ಮಾಡಿದ ಭಾಷಣದಲ್ಲಿ ಯಾವುದೇ ಹೊಸತನವಿಲ್ಲ” ಎಂದು ಹೇಳಿದ್ದಾರೆ” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಪ್ರಧಾನಿ ಮೋದಿ ಅವರು ಲೋಕಸಭೆಯಲ್ಲಿ ಮಾಡಿದ ತಮ್ಮ ಭಾಷಣದಲ್ಲಿ, “ಪಶ್ಚಿಮ ಏಷ್ಯಾ ಯುದ್ಧದಿಂದ ಎದುರಾಗಿರುವ ಆರ್ಥಿಕ ಮತ್ತು ಭದ್ರತಾ ಸವಾಲುಗಳನ್ನು ಭಾರತ ಸಮರ್ಥವಾಗಿ ಎದುರಿಸುತ್ತಿದೆ. ಹಾರ್ಮುಜ್ ಜಲಸಂಧಿಯಲ್ಲಿ ಉಂಟಾಗಿರುವ ವ್ಯತ್ಯಯಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, ವಾಣಿಜ್ಯ ಹಡಗುಗಳ ಮೇಲಿನ ದಾಳಿ ಸ್ವೀಕಾರಾರ್ಯವಲ್ಲ. ಕಚ್ಚಾ ತೈಲ, ನೈಸರ್ಗಿಕ ಅನಿಲ ಮತ್ತು ರಸಗೊಬ್ಬರಗಳ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಸರ್ಕಾರ ನಿರಂತರ ನಿಗಾ ವಹಿಸಿದೆ” ಎಂದು ಹೇಳಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಎಂ ಬಿ ಪಾಟೀಲ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಸಂದರ್ಭದಲ್ಲಿ ಬಬಲೇಶ್ವರ ವಿಧಾನಸಭಾ ಕ್ಷೇತ್ರ...

ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ, ಚೀನಾಗೆ ಹೆದರಿದಿರೇ?

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ...