ಕಾನೂನಿನ ಆಳ್ವಿಕೆ ಕೊನೆಗೊಳಿಸಿರುವ ಮೋದಿ: ದಲಿತ ಮಹಿಳೆ ಸಾವಿಗೆ ರಾಹುಲ್ ಆಕ್ರೋಶ

Date:

ಮಧ್ಯ ಪ್ರದೇಶದ ಸಾಗರದಲ್ಲಿ ಅತ್ಯಾಚಾರಕ್ಕೊಳಗಾದ ದಲಿತ ಸಮುದಾಯದ ಮಹಿಳೆ ಹಾಗೂ ಆಕೆಯ ಕುಟುಂಬದವರ ಸಾವಿನ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡಿರುವ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಕಾನೂನಿನ ಆಳ್ವಿಕೆ ಕೊನೆಗೊಳಿಸಿದ್ದು, ನಾವು ದುರ್ಬಲ ವ್ಯಕ್ತಿಯು ಆತನ ದಬ್ಬಾಳಿಕೆಯ ವಿರುದ್ಧ ಪ್ರಬಲವಾಗಿ ಧನಿ ಎತ್ತುವ ವ್ಯವಸ್ಥೆಯನ್ನು ರಚಿಸುತ್ತೇವೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಕಳೆದ ವರ್ಷದ ಆಗಸ್ಟ್‌ನಲ್ಲಿ ಅತ್ಯಾಚಾರಕ್ಕೊಳಗಾದ ಬಗ್ಗೆ ದೂರು ದಾಖಲಿಸಿದ ಕಾರಣಕ್ಕೆ ದಲಿತ ಸಮುದಾಯದ ಮಹಿಳೆಯೊಬ್ಬರ ಸೋದರನನ್ನು ಪ್ರಬಲ ಜಾತಿಯ ಗುಂಪು ಹತ್ಯೆ ಮಾಡಿತ್ತು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯ ಚಿಕ್ಕಪ್ಪನನ್ನು ಅದೇ ಗುಂಪು ಹತ್ಯೆ ಮಾಡಿದೆ. ಮಹಿಳೆಯು ತನ್ನ ಚಿಕ್ಕಪ್ಪನ ಮೃತದೇಹವನ್ನು ಆಂಬುಲೆನ್ಸ್‌ನಲ್ಲಿ ತೆಗೆದುಕೊಂಡು ಹೋಗುತ್ತಿದ್ದಾಗ ಆಂಬುಲೆನ್ಸ್‌ನಿಂದ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ.

“ನರೇಂದ್ರ ಮೋದಿಯವರು ಕಾನೂನಿನ ಆಳ್ವಿಕೆಯನ್ನು ಕೊನೆಗೊಳಿಸಿದ್ದಾರೆ. ನನ್ನ ಹೃದಯ ನೋವಿನಿಂದ ಮಿಡಿಯುತ್ತಿದ್ದು, ಅದೇ ರೀತಿ ಮಧ್ಯ ಪ್ರದೇಶದಲ್ಲಿ ದಲಿತ ಕುಟುಂಬಕ್ಕೆ ದೌರ್ಜನ್ಯವೆಸಗಿದ ಬಿಜೆಪಿ ನಾಯಕರ ಬಗ್ಗೆ ಆಕ್ರೋಶ ಕುದಿಯುತ್ತಿದೆ. ಇದು ಬಿಜೆಪಿ ಆಡಳಿತದ ನಾಚಿಕಿಗೇಡಿನ ಸಂಗತಿ. ಈ ಸರ್ಕಾರ ಯಾವಾಗಲು ಸಂತ್ರಸ್ತ ಮಹಿಳೆಯ ಪರ ಇರುವ ಬದಲು ಅಪರಾಧಿಗಳ ಪರ ನಿಲ್ಲುತ್ತದೆ” ಎಂದು ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಧರ್ಮಾಧಿಕಾರಿ’ಗೆ ಅಡ್ಡಬಿದ್ದ ಸರ್ಕಾರ ಸಾರುತ್ತಿರುವ ಸಂದೇಶವೇನು?

ನ್ಯಾಯಾಂಗದಿಂದ ಮಾತ್ರವೇ ನ್ಯಾಯ ಪಡೆಯುವ ಪ್ರತಿಯೊಬ್ಬ ವ್ಯಕ್ತಿಗೂ ಇಂತಹ ಘಟನೆಗಳು ಧೈರ್ಯವನ್ನು ಕುಂದಿಸುತ್ತದೆ. ನಾವು ದುರ್ಬಲ ವ್ಯಕ್ತಿಯು ಆತನ ದಬ್ಬಾಳಿಕೆಯ ವಿರುದ್ಧ ಪ್ರಬಲವಾಗಿ ಧನಿ ಎತ್ತುವ ವ್ಯವಸ್ಥೆಯನ್ನು ರಚಿಸುತ್ತೇವೆ ಎಂದು ಭರವಸೆ ನೀಡುತ್ತೇವೆ. ನಾವು ಅಧಿಕಾರ ಹಾಗೂ ಹಣದ ಮೂಲಕ ನ್ಯಾಯ ಪಡೆಯುವುದಕ್ಕೆ ಅನುಮತಿಸುವುದಿಲ್ಲ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಮಧ್ಯ ಪ್ರದೇಶದಲ್ಲಿ ದಲಿತ ಕುಟುಂಬಕ್ಕೆ ಆದ ಅನ್ಯಾಯದ ಬಗ್ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಕೂಡ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ದೌರ್ಜನ್ಯದ ವಿರುದ್ಧ ನ್ಯಾಯ ಕೇಳುವ ಕುಟುಂಬಗಳನ್ನು ನಾಶಪಡಿಸಲಾಗುತ್ತಿದೆ ಎಂದು ಹೇಳಿದ್ದಾರೆ.

“ಮಧ್ಯ ಪ್ರದೇಶದಲ್ಲಿ ದಲಿತ ಸೋದರಿಗಾದ ಘಟನೆಯು ಹೃದಯ ವಿದ್ರಾವಕವಾಗಿದೆ. ಬಿಜೆಪಿಯ ನಾಯಕರುಗಳಿಗೆ ಸಂವಿಧಾನ ಜಾರಿಯಾದ ನಂತರ ಮಹಿಳೆಯರು ಸೇರಿದಂತೆ ದಲಿತರು, ಬುಡಕಟ್ಟು ಸಮುದಾಯದವರು ಹಾಗೂ ಹಿಂದುಳಿದ ವರ್ಗದವರು ಘನತೆಯಿಂದ ಬದುಕುವುದು ಇಷ್ಟವಿಲ್ಲ. ದೆಹಲಿಯ ಕುಸ್ತಿಪಟುಗಳ ಸಹೋದರಿಯರು, ಹತ್ರಾಸ್‌ ಉನ್ನಾವೊ ಘಟನೆ ಎಲ್ಲೇ ನೋಡಿ ಮಹಿಳೆಯರ ವಿರುದ್ಧ ಭಯಾನಕವಾಗಿ ದಾಳಿಯಾಗುತ್ತಿದೆ. ನರೇಂದ್ರ ಮೋದಿ ಸರ್ಕಾರ ಅಪರಾಧಿಗಳನ್ನು ರಕ್ಷಿಸುತ್ತಿದೆ” ಎಂದು ಆಕ್ರೋಶ ಹೊರ ಹಾಕಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪತ್ರಕರ್ತರ ಮೇಲಿನ ಪೊಲೀಸ್‌ ದಾಳಿಗೆ ಡಿಎಸ್‌ಜೆಎ ಖಂಡನೆ; ಪ್ರೆಸ್ ಕೌನ್ಸಿಲ್‌ನಿಂದ ಮಾರ್ಗಸೂಚಿ ಪ್ರಕಟ

ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಮತ್ತು ಪೊಲೀಸ್ ಕ್ರಮಗಳನ್ನು ವರದಿ ಮಾಡುತ್ತಿರುವ ಪತ್ರಕರ್ತರ...

ದೇಶದ ಜನತೆ ಅಧಿಕಾರ ಬದಲಾವಣೆ ಬಯಸಿದ್ದಾರೆ, ನೀವು ಹೊರಡುವ ಸಮಯ ಬಂದಿದೆ; ರಾಜ್‌ನಾಥ್‌ಗೆ ಸಿಬಲ್‌ ಎಚ್ಚರಿಕೆ

ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಬಾಂಗ್ಲಾದೇಶ ಮಾದರಿಯಲ್ಲಿ ದೇಶದಲ್ಲಿ 'ಸರ್ಕಾರ ಬದಲಾವಣೆ'ಯ...

ಖ್ಯಾತ ಹಿರಿಯ ಸಂಗೀತ ನಿರ್ದೇಶಕ ದೇವ ಇನ್ನಿಲ್ಲ

ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳ ಚಿತ್ರಗಳಿಗೆ ಸುಮಧುರ ಸಂಗೀತ...

‘ಮಕ್ಕಳಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು; ಸಂಪೂರ್ಣ ನಿಷೇಧ ಪರಿಹಾರವಲ್ಲ’: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ವಯಸ್ಕರಂತೆ ಮಕ್ಕಳಿಗೂ ಇಂಟರ್‌ನೆಟ್ ಸಂಪರ್ಕ ಪಡೆಯುವ ಮತ್ತು ಅದನ್ನು ಬಳಸುವ ಮೂಲಭೂತ...